ಮೇ 25ಕ್ಕೆ ಬಿಡುಗಡೆ ಆಗಲಿದೆ ರಿಯಲ್‌ಮಿ X50 ಪ್ರೊ ಪ್ಲೇಯರ್ ಸ್ಮಾರ್ಟ್‌ಫೋನ್‌!

|

ಸ್ಮಾರ್ಟ್‌ಫೋನ್‌ ವಲಯದಲ್ಲಿ ರಿಯಲ್‌ಮಿ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಇನ್ನು ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿದೆ. ಅಲ್ಲದೆ ಪ್ರತಿ ಭಾರಿಯು ಹೊಸ ಮಾದರಿಯ ಫೀಚರ್ಸ್‌ಗಳನ್ನ ಪರಿಚಯಿಸುವ ರಿಯಲ್‌ಮಿ ಸದ್ಯ ಇದೀಗ ಮತ್ತೊಂದು ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ತನ್ನ ಹೊಸ ರಿಯಲ್‌ಮಿ X50 ಪ್ರೊ ಪ್ಲೇಯರ್ ಆವೃತ್ತಿಯನ್ನು ಇದೇ ಮೇ 25 ರಂದು ಬಿಡುಗಡೆ ಮಾಡಲಿದೆ ಎಂದು ದೃಡಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 5 RAM ಮತ್ತು UFS 3.1 ಸಂಗ್ರಹಣಾ ಸಾಮರ್ಥ್ಯವನ್ನ ಒಳಗೊಂಡಿದೆ ಎಂದು ಕಂಪನಿ ಬಹಿರಂಗಪಡಿಸಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದು ಚೀನಾ ವೆಬ್‌ಸೈಟ್‌ನಲ್ಲಿ ಲೀಕ್‌ ಆಗಿದ್ದು, ಲೀಕ್‌ ಮಾಹಿತಿ ಪ್ರಕಾರ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರಿಯಲ್‌ಮಿ x50 ಪ್ರೊ ಪ್ಲೇಯರ್‌ ಆವೃತ್ತಿಯ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಅಮೋಲೆಡ್ ಡಿಸ್‌ಪ್ಲೇಯನ್ನ ಹೊಂದಿರಲಿದೆ ಎನ್ನಲಾಗ್ತಿದೆ. ಇದಲ್ಲದೆ ಈ ಡಿಸ್‌ಪ್ಲೇಯು ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿರಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ ಎನ್ನಲಾಗ್ತಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗ್ತಿದೆ. ಇದಲ್ಲದೆ 5 RAM ಮತ್ತು UFS 3.1 ಸಂಗ್ರಹಣಾ ಸಾಮರ್ಥ್ಯವನ್ನ ಹೊಂದಿರಲಿದೆ ಎನ್ನಲಾಗ್ತಿದೆ. ಅಲ್ಲದೆ x50 ಪ್ರೊ ಪ್ಲೇಯರ್ ಆವೃತ್ತಿ 6GB RAM, 8GB RAM ಮತ್ತು 12GB RAM ಮೂರು ರೂಪಾಂತರಗಳಲ್ಲಿ ಬರಲಿದೆ ಎಂದು ಹೇಳಲಾಗಿದೆ. ಇದಲ್ಲದೆ, ಫೋನ್ 128GB , 256GB ಮತ್ತು 512GB ಆಂತರಿಕ ಸಂಗ್ರಹಣಾ ಸಾಮರ್ಥ್ಯದ ಆಯ್ಕೆಗಳಲ್ಲಿ ನೀಡಲಾಗುವುದು ಎಂದು ಹೇಳಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ ಎಂದು ದೃಡಪಡಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರು ಹಾಗೂ ನಾಲ್ಕನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಹೊಂದಿರಲಿದೆ ಎನ್ನಲಾಗ್ತಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯ ಹೊಂದಿರುವ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ ಎನ್ನಲಾಗ್ತಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ರಿಯಲ್‌ಮಿ x50 ಪ್ರೊ ಪ್ಲೇಯರ್ ಆವೃತ್ತಿಯು 4,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ ಎಂದು ಟಿಪ್‌ಸ್ಟರ್ ಹೇಳಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 8GB RAM + 128GB ಶೇಖರಣಾ ರೂಪಾಂತರಕ್ಕೆ CNY 3,299 (ಸರಿಸುಮಾರು ರೂ. 32,000) ವೆಚ್ಚವಾಗಲಿದೆ ಎಂದು ಟಿಪ್‌ಸ್ಟರ್ ಹೇಳಿಕೊಂಡಿದ್ದಾರೆ. ಇನ್ನುಳಿದ ಆವೃತ್ತಿಗಳ ಬೆಲೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Realme X50 Pro Player Edition was confirmed to be launched on May 25 by Realme last week. Now ahead of its launch, the company has revealed that the upcoming Realme phone will be powered by Qualcomm Snapdragon 865 SoC and will pack LPDDR5 RAM and UFS 3.1 storage.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X