ರಿಯಲ್‌ಮಿ X50 ಪ್ರೊ ಪ್ಲೇಯರ್ ಎಡಿಷನ್ ಸ್ಮಾರ್ಟ್‌ಫೋನ್ ಬಿಡುಗಡೆ!
ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೊನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರಿಂದ ಸೈ ಎನಸಿಕೊಂಡಿದೆ. ಸದ್ಯ ತನ್ನ ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕ್ಟೆಯಲ್ಲಿ ಏರುಗತಿಯಲ್ಲಿ ಜನಪ್ರಿಯತೆಯನ್ನ ಸಾಧಿಸಿದೆ. ಅಲ್ಲದೆ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿದೆ. ಸದ್ಯ ಇದೀಗ ತನ್ನ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ X50 ಪ್ರೊ ಪ್ಲೇಯರ್ ಎಡಿಷನ್ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ರಿಯಲ್‌ಮಿ ಕಂಪನಿಯ ಹೊಸ 5G ಸ್ಮಾರ್ಟ್‌ಫೋನ್ ಆಗಿ ಅನಾವರಣಗೊಳಿಸಲಾಗಿದೆ. ಇನ್ನು ರಿಯಲ್‌ಮಿ X50 ಪ್ರೊ ಪ್ಲೇಯರ್ ಆವೃತ್ತಿ ಸ್ಮಾರ್ಟ್‌ಫೋನ್ 90Hz ಸಾಮರ್ಥ್ಯದ ಡಿಸ್‌ಪ್ಲೇಯನ್ನ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಇನ್ನು ಯಾವೆಲ್ಲಾ ಫೀಚರ್ಸ್ ಅನ್ನು ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ರಿಯಲ್‌ಮಿ X50 ಪ್ರೊ ಪ್ಲೇಯರ್ ಎಡಿಷನ್ ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇದಲ್ಲದೆ ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಒಳಗೊಂಡಿದೆ ಎನ್ನಲಾಗ್ತಿದೆ. ಜೊತೆಗೆ ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯು ಡ್ಯುಯಲ್ ಪಂಚ್‌ಹೋಲ್ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 6GB RAM, ಮತ್ತು 12GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿದೆ.

ಕ್ಯಾಮೆರಾ ವಿನ್ಯಾಸ
ರಿಯಲ್‌ಮಿ X50 ಪ್ರೊ ಪ್ಲೇಯರ್ ಎಡಿಷನ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX586 ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ 2.3 ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕ್ವಾಟರ್ನರಿ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,100mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 6, ಬ್ಲೂಟೂತ್ ವಿ 5.1, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಹಾಗೇಯೇ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಅನ್ನು ಒಳಗೊಂಡಿದೆ. ಜೊತೆಗೆ ಡಾಲ್ಬಿ ಅಟ್ಮೋಸ್ ಮತ್ತು ಹೈ-ರೆಸ್ ಆಡಿಯೋ ತಂತ್ರಜ್ಞಾನಗಳನ್ನು ಸಹ ಒಳಗೊಂಡಿದೆ. ಇದಲ್ಲದೆ, ಟಚ್ ಎಂಜಿನ್ ಮತ್ತು 4 ಡಿ ಗೇಮ್ ವೈಬ್ರೇಶನ್ ಸೆನ್ಸ್ 2.0 ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ x50 ಪ್ರೊ ಪ್ಲೇಯರ್ ಎಡಿಷನ್ ಬೆಲೆ CNY 2,699 (ಸರಿಸುಮಾರು ರೂ. 28,700) ಎಂದು ನಿಗದಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟಫೋನ್ ಲೈಟ್‌ಸ್ಪೀಡ್ ಸಿಲ್ವರ್ ಮತ್ತು ಫ್ಯಾಂಟಮ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲದೆ. ಪ್ರಸ್ತುತ ಚೀನಾದಲ್ಲಿ ಈ ಸ್ಮಾರ್ಟ್‌ಫೋನ್ ಅನ್ನು ಪ್ರಿ ಆರ್ಡರ್ ಮಾಡಲು ಅವಕಾಶವಿದ್ದು, ಜೂನ್ 1 ರಂದು ಮಾರಾಟ ಮಾಡಲಿದೆ ಎಂದು ಹೇಳಲಾಗಿದೆ.


Click it and Unblock the Notifications




