Home
ಸುದ್ದಿಜಾಲ

ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ ರಿಯಲ್‌ಮಿ X50 T5G ಸ್ಮಾರ್ಟ್‌ಫೋನ್‌ !

ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಈಗಾಗಲೇ ಹಲವು ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಅಷ್ಟೇ ಅಲ್ಲ ಮಾರುಕಟ್ಟೆಗೆ ಎಂಟ್ರಿ ನೀಡಿದ ಕೆಲವೇ ವರ್ಷಗಳಲ್ಲಿ ಏರುಗತಿಯಲ್ಲಿ ಬೆಳವಣಿಗೆ ಸಾಧಿಸಿದ ರಿಯಲ್‌ಮಿ ಸದ್ಯ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರಾಂಡ್‌ ಎನಿಸಿಕೊಂಡಿದೆ. ಸದ್ಯ ಇದೀಗ ರಿಯಲ್‌ಮಿ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಸ್ಮಾರ್ಟ್‌ಫೋನ್‌

ಹೌದು, ಚೀನಾದ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ತನ್ನ ಹೊಸ ರಿಯಲ್‌ಮಿ X50 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಈಗಾಗಲೇ ಮಾರುಕಟ್ಟೆಗೆ ಪರಿಚಯಿಸಿದೆ. ಇದೀಗ ರಿಯಲ್‌ಮಿ ಕಂಪನಿಯು ಈ ಸರಣಿಯನ್ನು ಇನ್ನಷ್ಟು ವಿಸ್ತರಿಸಲು ಮುಂದಾಗಿದೆ ಎಂದು ವರದಿ ಆಗಿದೆ. ಇದೀಗ ರಿಯಲ್‌ಮಿ X50 ಸರಣಿಯ ಮುಂದುವರೆದ ಭಾಗವಾಗಿ ರಿಯಲ್‌ಮಿ X50 T5G ಸ್ಮಾರ್ಟ್‌ಫೋನ್‌ ಅನ್ನು ಶೀಘ್ರದಲ್ಲೇ ಮಾರುಕಟ್ಟೆಗೆ ಪರಿಚಯಿಸಲಿದೆ ಎನ್ನಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಕುರಿತು ಆನ್‌ಲೈನ್‌ನಲ್ಲಿ ಮಾಹಿತಿ ಲೀಕ್‌ ಆಗಿದ್ದು, ಲೀಕ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್ ಮಿ X50T 5G ಸ್ಮಾರ್ಟ್‌ಫೋನ್

ಸದ್ಯ ರಿಯಲ್ ಮಿ X50T 5G ಸ್ಮಾರ್ಟ್‌ಫೋನ್‌ ಕುರಿತು ವೀಬೊ ಟಿಪ್‌ಸ್ಟರ್‌ ನಲ್ಲಿ ಮಾಹಿತಿ ಲೀಕ್‌ ಆಗಿದೆ. ಲೀಕ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 9.3mm ದಪ್ಪವಾಗಿರುತ್ತದೆ ಮತ್ತು 202ಗ್ರಾಂ ತೂಕವಿರುತ್ತದೆ ಎಂದು ಹೇಳಲಾಗ್ತಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ರಿಯಲ್‌ಮಿ X50T 5G ರಿಯಲ್‌ಮಿ X50M 5G ಯಂತೆಯೇ ಡ್ಯುಯಲ್-ಹೋಲ್ ಪಂಚ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ ಎನ್ನಲಾಗಿದೆ. ಜೊತೆಗೆ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ ಎನ್ನಲಾಗ್ತಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಎನ್ನಲಾಗ್ತಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಹಿಂದಿನ ಮಾದರಿಯ ಸ್ಮಾರ್ಟ್‌ಫೋನ್‌ಗಳಂತೆ ಉತ್ತಮ ಸಂಗ್ರಹಣಾ ಸಾಮರ್ಥ್ಯವನ್ನ ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರುವ ಸಾದ್ಯತೆ ಇದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಸ್ಮಾರ್ಟ್‌ಫೋನ್‌

ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಉತ್ತಮ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿರಲಿದ್ದು, ಇದು 30W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ ಎಂದು ಹೇಳಲಾಗ್ತಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಗೂಗಲ್ ಪ್ಲೇ ಬೆಂಬಲಿತ ಸಾಧನಗಳ ಪಟ್ಟಿಯಲ್ಲಿ ಗುರುತಿಸಲಾಗಿದೆ. ಅಲ್ಲದೆ RMX2052 ಮಾದರಿ ಸಂಖ್ಯೆಯನ್ನು ಹೊಂದಿರಲಿದೆ.ಇನ್ನು ಈ ಫೋನ್ ಅನ್ನು ಶೀಘ್ರದಲ್ಲೇ ಚೀನಾದಲ್ಲಿ ಬಿಡುಗಡೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

Best Mobiles in India

English summary
Realme X50t 5G Smartphone Rumoured to Launch Very Soon.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+