ಭಾರತದಲ್ಲಿ ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ ಬೆಲೆ ಬಹಿರಂಗ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಅನೇಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ರಿಯಲ್‌ಮಿ ಇದೀಗ ಭಾರತದಲ್ಲಿ ರಿಯಲ್‌ಮಿ X7 ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಇನ್ನು ರಿಯಲ್‌ಮಿ X7 ಭಾರತದಲ್ಲಿ ಇದೇ ಫೆಬ್ರವರಿ 4 ರಂದು ಬಿಡುಗಡೆ ಆಗಲಿದೆ. ಸದ್ಯ ಬಿಡುಗಡೆಗೂ ಮುನ್ನವೇ ಭಾರತದಲ್ಲಿ ಇದರ ಬೆಲೆ ಏನಿರಲಿದೆ ಅನ್ನೊದು ಬಹಿರಂಗವಾಗಿದೆ.

ಹೌದು, ಭಾರತದಲ್ಲಿ ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ ಬಿಡುಗಡೆಗೂ ಮುನ್ನವೇ ಬೆಲೆ ಬಹಿರಂಗವಾಗಿದೆ. ರಿಯಲ್‌ಮಿ X7 ಪ್ರೊ 5G ಜೊತೆಗೆ ಹೊಸ ರಿಯಲ್‌ಮಿ ಸ್ಮಾರ್ಟ್‌ಫೋನ್ ಕೂಡ ಬಿಡುಗಡೆಯಾಗುತ್ತಿದೆ ಎನ್ನಲಾಗಿದೆ.ಇನ್ನು ಈ ಸ್ಮಾರ್ಟ್‌ಫೋನ್ ಗಳು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಪಂಚ್-ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪಂಚ್ ಹೋಲ್ ವಿನ್ಯಾಸವನ್ನು ಹೊಂದಿದ್ದು ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ
ರಿಯಲ್ಮಿ X7 5G ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನೊ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,300mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ 6GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಸ್ಮಾರ್ಟ್‌ಫೋನ್ ಬೆಲೆ 19,999, ರೂ ಹೊಂದಿದೆ. ಇದರ 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯ ಬೆಲೆ 21,999 ರೂ. ಹೊಂದಿದೆ.


Click it and Unblock the Notifications