Home
ಸುದ್ದಿಜಾಲ

ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ ಬಿಡುಗಡೆ!..ಬೆಲೆ ಎಷ್ಟು?..ಫೀಚರ್ಸ್‌ ಏನು?

ರಿಯಲ್‌ ಮಿ ಸಂಸ್ಥೆಯು ತನ್ನ ಬಹುನಿರೀಕ್ಷಿತ ರಿಯಲ್‌ಮಿ X7 ಸ್ಮಾರ್ಟ್‌ಫೋನ್ ಸರಣಿ ಅನ್ನು ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸರಣಿಯು ರಿಯಲ್‌ಮಿ X7 ಮತ್ತು ರಿಯಲ್‌ಮಿ X7 ಪ್ರೊ ಹೆಸರಿನ ಎರಡು ಮಾಡೆಲ್‌ ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿದೆ. ಅವುಗಳಲ್ಲಿ ರಿಯಲ್‌ಮಿ X7 ಸ್ಮಾರ್ಟ್‌ಫೋನ್ ಮಾಡೆಲ್ ಕಡಿಮೆ ಬೆಲೆಯಲ್ಲಿ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ.

ಭಾರತೀಯ

ಹೌದು, ರಿಯಲ್‌ ಮಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ರಿಯಲ್‌ಮಿ X7 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 4310mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ Dimensity 800U 5G SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 6.4 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, AMOLED ಮಾದರಿಯಲ್ಲಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದ್ದು, 180Hz ಟಚ್‌ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. ಹಾಗೆಯೇ 600nits ಬ್ರೈಟ್ನೆಸ್‌ ಪಡೆದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 800U 5G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 6GB + 128GB ಮತ್ತು 8GB + 128GB ವೇರಿಯಂಟ್ ಆಯ್ಕೆ ಹೊಂದಿದೆ. ಜೊತೆಗೆ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ತ್ರಿವಳಿ ಕ್ಯಾಮೆರಾ ವಿಶೇಷ

ತ್ರಿವಳಿ ಕ್ಯಾಮೆರಾ ವಿಶೇಷ

ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ 4310mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 65W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ?

ಬೆಲೆ ಎಷ್ಟು ಮತ್ತು ಲಭ್ಯತೆ?

ರಿಯಲ್‌ಮಿ X7 ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 19,999 ರೂ. ಆಗಿದೆ. ಹಾಗೆಯೇ 8GB + 128GB ಬೆಲೆಯು 21,999ರೂ. ಆಗಿದೆ. ನೆಬುಲಾ ಹಾಗೂ ಸ್ಪೆಸ್‌ ಸಿಲ್ವರ್ ಬಣ್ಣಗಳ ಆಯ್ಕೆ ಪಡೆದಿದೆ. ಇದೇ ಫೆ. 12ರಂದು ಫ್ಲಿಪ್‌ಕಾರ್ಟ್‌ ಹಾಗೂ ರಿಯಲ್‌ಮಿ ಅಧಿಕೃತ ವೆಬ್‌ಸೈಟ್‌ ಮೂಲಕ ಫಸ್ಟ್ ಸೇಲ್ ಆರಂಭಿಸಲಿದೆ.

Best Mobiles in India

English summary
Realme X7 will go on sale starting February 12 at 12pm (noon). Launch offers include Rs. 2,000 instant discount with ICICI credit card.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+