ಇಂದು ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ ಫಸ್ಟ್ ಸೇಲ್!
ಜನಪ್ರಿಯ ರಿಯಲ್‌ಮಿ ಕಂಪೆನಿ ಇತ್ತೀಚಿಗಷ್ಟೇ ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಸದ್ಯ ಇದೀಗ ಈ ಸ್ಮಾರ್ಟ್‌ಫೋನ್ ಇಂದು(ಜೂ.4) ಮಧ್ಯಾಹ್ನ 12ರಿಂದ ರಿಯಲ್‌ಮಿ ಅಧಿಕೃತ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ಫಸ್ಟ್ ಸೇಲ್ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ 26,999 ರೂ. ಆಗಿದೆ.

ಹೌದು, ರಿಯಲ್‌ಮಿ ಸಂಸ್ಥೆಯ ಹೊಸ ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ ಇಂದು (ಜೂ.4) ತನ್ನ ಫಸ್ಟ್ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.43 ಇಂಚಿನ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 120Hz ರಿಫ್ರೇಶ್ ರೇಟ್ ಒಳಗೊಂಡಿದೆ. ಇದರೊಂದಿಗೆ ಆಕ್ಟಾ ಕೋರ್ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು, ಫಸ್ಟ್ ಸೇಲ್‌ನಲ್ಲಿ ಏನೆಲ್ಲಾ ಆಪರ್ ದೊರೆಯಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43-ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 360Hz ಟಚ್ ಸ್ಯಾಂಪಲ್ ರೇಟ್ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 12GB RAM ಮತ್ತು 256GB ಇಂಟರ್ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.

ಕ್ಯಾಮೆರಾ ವಿಶೇಷ
ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ ಟ್ರಿಪಲ್-ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಎಲ್‌ಇಡಿ ಪ್ಲ್ಯಾಶ್ ಅನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 50W ಅಥವಾ 60W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯನ್ನು ಬೆಂಬಲಿಸಲಿದೆ. ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್, ಹೈ-ರೆಸ್ ಆಡಿಯೊದೊಂದಿಗೆ 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ನೀಡುತ್ತದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ 8GB RAM + 128GB ಶೇಖರಣಾ ರೂಪಾಂತರಕ್ಕೆ 26,999ರೂ. ಆಗಿದೆ. ಹಾಗೂ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆಯು 29,999ರೂ. ಆಗಿದೆ. ಇನ್ನು ಈ ಪೋನ್ ಬ್ಲ್ಯಾಕ್, ಸಿಲ್ವರ್ ಹಾಗೂ ಮಿಲ್ಕಿ ವೇ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ. ಈ ಫೋನ್ ಇಂದು (ಜೂನ್ 4ರಂದು) ಮಧ್ಯಾಹ್ನ 12ರಿಂದ ಫ್ಲಿಪ್‌ಕಾರ್ಟ್ ಹಾಗೂ ರಿಯಲ್‌ಮಿ ತಾಣದಲ್ಲಿ ಸೇಲ್ ಆಗಲಿದೆ. ಇನ್ನು ಸೇಲ್ ಆಫರ್‌ನಲ್ಲಿ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಇಎಂಐ ವಹಿವಾಟು ನಡೆಸುವವರಿಗೆ 2000ರೂ.ಗಳ ವರೆಗೆ ರಿಯಾಯಿತಿ ದೊರೆಯಲಿದೆ. ಇನ್ನು ಫ್ಲಿಪ್‌ಕಾರ್ಟ್‌ತಾಣದಲ್ಲಿ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಲ್ಲಿ ಖರೀದಿಸಿದರೆ 5% ಅನಿಯಮಿತ ಕ್ಯಾಶ್‌ಬ್ಯಾಕ್ ದೊರೆಯಲಿದೆ.


Click it and Unblock the Notifications





