ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫೀಕ್ಸ್!
ಜನಪ್ರಿಯ ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಪ್ರಸಿದ್ಧಿ ಪಡೆದುಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಇದೇ ಮೇ 31 ರಂದು ಬಿಡುಗಡೆ ಆಗುವುದು ಕನ್ಫರ್ಮ್ ಆಗಿದೆ.

ಹೌದು, ರಿಯಲ್‌ಮಿಯ ಹೊಸ ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200 ಪ್ರೊಸೆಸರ್ ಹೊಂದಿರಲಿದೆ ಎನ್ನಲಾಗಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ರಿಯಲ್‌ಮಿ X7 ಮ್ಯಾಕ್ಸ್ 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ 6.43 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ. ಇದು 409 ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ ಎನ್ನಲಾಗಿದೆ

ಪ್ರೊಸೆಸರ್
ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 ಪ್ರೊಸೆಸರ್ ಒಳಗೊಂಡಿರಲಿದೆ. ಇದು 6 ಎನ್ಎಂ ಆಧಾರಿತ ಚಿಪ್ ಆಗಿದೆ. ಇದು ಆಂಡ್ರಾಯ್ಡ್ ವಿ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಇದು 4500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 50W ಸೂಪರ್‌ಡಾರ್ಟ್ ಚಾರ್ಜಿಂಗ್‌ನೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ ಅನ್ನು ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಮೇ 31 ರಂದು ಮಧ್ಯಾಹ್ನ 12: 30 ಕ್ಕೆ ಬಿಡುಗಡೆ ಆಗಲಿದೆ.


Click it and Unblock the Notifications