ಭಾರತದಲ್ಲಿ ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಲಾಂಚ್; ಬೆಲೆ ಎಷ್ಟು?

|

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ರಿಯಲ್‌ಮಿ ಕಂಪೆನಿ ಈಗಾಗಲೇ X ಸರಣಿಯಲ್ಲಿ ಹಲವು ಫೋನ್‌ಗಳನ್ನು ಲಾಂಚ್ ಮಾಡಿ ಸೈ ಎನಿಸಿಕೊಂಡಿದೆ. ಆ ಪೈಕಿ ರಿಯಲ್‌ಮಿ X7 ಸರಣಿಯ ಫೋನ್‌ಗಳು ಗ್ರಾಹಕರ ಗಮನ ಸೆಳೆದಿದ್ದವು. ಅದೇ ಸರಣಿಯಲ್ಲಿ ಕಂಪನಿಯು ಈಗ ನೂತನವಾಗಿ ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಫೋನ್ ತನ್ನ ಫೀಚರ್ಸ್‌ಗಳಿಂದ ಆಕರ್ಷಕ ಎನಿಸಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಸಂಸ್ಥೆಯು ನೂತನವಾಗಿ ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಮೇ.31 ರಂದು) ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ 120Hz ರೀಫ್ರೇಶ್‌ ರೇಟ್ ಒಳಗೊಂಡ ಸೂಪರ್ AMOLED ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಆಕ್ಟಾ ಕೋರ್ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗಾದರೇ ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳೇನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 360Hz ಟಚ್‌ ಸ್ಯಾಂಪಲ್‌ ರೇಟ್ ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಟ್ರಿಪಲ್-ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿರುವ ಸಾದ್ಯತೆ ಇದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 50W ಅಥವಾ 60W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ?

ಬೆಲೆ ಮತ್ತು ಲಭ್ಯತೆ?

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ 8GB RAM + 128GB ಶೇಖರಣಾ ರೂಪಾಂತರಕ್ಕೆ 26,999ರೂ. ಆಗಿದೆ. ಹಾಗೂ 12GB RAM + 256GB ಸ್ಟೋರೇಜ್‌ ವೇರಿಯಂಟ್ ಬೆಲೆಯು 29,999ರೂ. ಆಗಿದೆ. ಇನ್ನು ಈ ಪೋನ್ ಬ್ಲ್ಯಾಕ್, ಸಿಲ್ವರ್ ಹಾಗೂ ಮಿಲ್ಕಿ ವೇ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ. ಈ ಫೋನ್ ಇದೇ ಜೂನ್ 4ರಂದು ಫ್ಲಿಪ್‌ಕಾರ್ಟ್‌ ಹಾಗೂ ರಿಯಲ್‌ಮಿ ತಾಣದಲ್ಲಿ ಸೇಲ್ ಪ್ರಾರಂಭಿಸಲಿದೆ.

Best Mobiles in India

English summary
Realme X7 Max 5G price in India starts at Rs. 26,999 for the 8GB RAM + 128GB storage variant.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X