ಭಾರತದಲ್ಲಿ ರಿಯಲ್‌ಮಿ X7 ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌!

|

ಜನಪ್ರಿಯ ರಿಯಲ್‌ಮಿ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಹೊಸ ರಿಯಲ್‌ಮಿ X7 ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಮೇ 31 ರಂದು ಭಾರತದಲ್ಲಿ ಲಾಂಚ್‌ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 1200 ಪ್ರೊಸೆಸರ್‌ ಅನ್ನು ಒಳಗೊಂಡಿದೆ ಎನ್ನಲಾಗಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಸಂಸ್ಥೆ ಹೊಸ ರಿಯಲ್‌ಮಿ X7 ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌ ಮಾಡಿದೆ. ಭಾರತದಲ್ಲಿ ಮೇ 31ರಂದು ಬಿಡುಗಡೆ ಆಗುವುದು ಪಕ್ಕಾ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 43-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರಿಯಲ್‌ಮಿ X7 ಮ್ಯಾಕ್ಸ್‌ ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಒಂದು ಕಾರ್ಟೆಕ್ಸ್-ಎ 78 ಕೋರ್ ಅನ್ನು 3GHz ಗಡಿಯಾರದಲ್ಲಿ ಹೊಂದಿದೆ. ಇದು 22% ವೇಗದ ಸಿಪಿಯು ಕಾರ್ಯಕ್ಷಮತೆಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್-ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿರುವ ಸಾದ್ಯತೆ ಇದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ X7 ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 50W ಅಥವಾ 60W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Realme has confirmed that the company will be launching its new smartphone in the Indian market, Realme X7 Max on 31st May.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X