Home
ಸುದ್ದಿಜಾಲ

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಮೇಲೆ 6,000 ರೂ,ಗಳ ಬಿಗ್‌ ಡಿಸ್ಕೌಂಟ್‌!

ರಿಯಲ್‌ಮಿ ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪೆನಿಗಳಲ್ಲಿ ಒಂದಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ಫ್ಲಿಪ್‌ಕಾರ್ಟ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಸ್ಮಾರ್ಟ್‌ಫೋನ್ ಕಾರ್ನಿವಲ್ ಸೇಲ್ ಅನ್ನು ನಡೆಸುತ್ತಿದೆ. ಈ ಸೇಲ್‌ನಲ್ಲಿ ರಿಯಲ್‌ಮಿ X7 ಮ್ಯಾಕ್ಸ್‌ 5G 6,000 ರೂಪಾಯಿಗಳ ಬಿಗ್‌ ಡಿಸ್ಕೌಂಟ್‌ ಪಡೆದಿದೆ.

ರಿಯಲ್‌ಮಿ

ಹೌದು, ಫ್ಲಿಪ್‌ಕಾರ್ಟ್‌ ತನ್ನ ಸ್ಮಾರ್ಟ್‌ಫೋನ್‌ ಕಾರ್ನಿವಲ್‌ ಸೇಲ್‌ನಲ್ಲಿ ರಿಯಲ್‌ಮಿ ಎಕ್ಸ್ 7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಮೇಲೆ ಬಿಗ್‌ ಆಫರ್‌ ನೀಡಿದೆ. ಇದು ಇಮಿಟೆಡ್‌ ಆಫರ್‌ ಆಗಿದ್ದು, ಆಸಕ್ತರು ಇಂದೇ ಖರೀದಿಸಬಹುದಾಗಿದೆ. ಇನ್ನು ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಮೇಲೆ 6,000 ಡಿಸ್ಕೌಂಟ್‌ ಪಡೆದುಕೊಳ್ಳಬೇಕಾದ್ರೆ ನೀವು ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಬಳಸಬೇಕಾಗುತ್ತದೆ. ಹಾಗಾದ್ರೆ ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಜೊತೆಗೆ ಇಡು 20:9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಹೊಂದಿದ್ದು, 360Hz ಟಚ್‌ ಸ್ಯಾಂಪಲ್‌ ರೇಟ್ ಒಳಗೊಂಡಿದೆ.

ಪ್ರೊಸೆಸರ್‌ ಹೇಗಿದೆ?

ಪ್ರೊಸೆಸರ್‌ ಹೇಗಿದೆ?

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳನ್ನು ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಟ್ರಿಪಲ್-ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ , ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 50W ಅಥವಾ 60W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 8GB RAM + 128GB ಶೇಖರಣಾ ರೂಪಾಂತರದ ಮೂಲಬೆಲೆ 26,999ರೂ. ಆಗಿದ್ದು, ರಿಯಾಯಿತಿಯ ನಂತರ 20,999ರೂ ಗಳಿಗೆ ಲಭ್ಯವಾಗಲಿದೆ. ಹಾಗೂ 12GB RAM + 256GB ರೂಪಾಂತರದ ಮೂಲಬೆಲೆ 29,999ರೂ. ಆಗಿದ್ದು, ರಿಯಾಯಿತಿ ನಂತರ 23,999ರೂ, ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಪೋನ್ ಬ್ಲ್ಯಾಕ್, ಸಿಲ್ವರ್ ಹಾಗೂ ಮಿಲ್ಕಿ ವೇ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

ರಿಯಲ್‌ಮಿ

ಫ್ಲಿಪ್‌ಕಾರ್ಟ್‌ನಲ್ಲಿ ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಮೇಲಿನ 6,000 ರೂ.ಗಳ ಆಫರ್ ಹೊರತಾಗಿ, ರಿಯಲ್‌ಮಿ 7 ಪ್ರೊ, ರಿಯಲ್‌ಮಿ ನಾರ್ಜೊ 30 ಪ್ರೊ, ರಿಯಲ್‌ಮಿ ಎಕ್ಸ್ 3 ಸೂಪರ್‌ಜೂಮ್, ರಿಯಲ್‌ಮಿ ಎಕ್ಸ್ 7, ರಿಯಲ್‌ಮಿ ಎಕ್ಸ್ 7 ಪ್ರೊ ಮತ್ತು ರಿಯಲ್‌ಮಿ ಸಿ 20 ಮೇಲೂ ಕೂಡ ಆಫರ್‌ ಅನ್ನು ನೀಡಲಾಗಿದೆ.

Best Mobiles in India

English summary
Realme X7 Max 5G is currently selling at its lowest price on Flipkart.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+