Home
ಸುದ್ದಿಜಾಲ

ರಿಯಲ್‌ಮಿ X7 ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ರಿಯಲ್‌ಮಿ X7 ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಮೇ 4 ರಂದು ಲಾಂಚ್‌ ಆಗಲಿದೆ ಎಂದು ರಿಯಲ್‌ಮಿ ಇಂಡಿಯಾ ಸಿಇಒ ಮಾಧವ್ ಶೆತ್ ಬಿಡುಗಡೆ ದಿನಾಂಕವನ್ನ ಖಚಿತಪಡಿಸಿದ್ದಾರೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ X7 ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಬಹಿರಂಗ ಪಡಿಸಿದೆ. ಇದು ಭಾರತದಲ್ಲಿ ಮೊದಲ ಡೈಮೆನ್ಸಿಟಿ 1200SoC ಪ್ರೊಸೆಸರ್‌ ಒಳಗೊಂಡ ಸ್ಮಾರ್ಟ್‌ಫೋನ್ ಆಗಿರಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ X7 ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರುವ ಸಾದ್ಯತೆ ಇದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದ್ದು, 120 Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾ ಟೆಕ್‌ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ ಎಂದು ಊಹಿಸಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆ ಇದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 50W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈಯನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಸಹ ಒಳಗೊಂಡಿರಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ವಿವರಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
The Realme X7 Max is expected to be powered by the MediaTek Dimensity 1200 chip.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+