Home
ಸುದ್ದಿಜಾಲ

ಇಂದು ರಿಯಲ್‌ಮಿ X7 ಪ್ರೊ 5G ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌: ಬೆಲೆ ಎಷ್ಟು?

ರಿಯಲ್‌ಮಿ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ರಿಯಲ್‌ಮಿ X7 ಪ್ರೊ 5G ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌ ಇಂದು ಭಾರತದಲ್ಲಿ ನಡೆಯಲಿದೆ. ಜನಪ್ರಿಯ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಮತ್ತು ರಿಯಲ್‌ಮಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ 12ರಂದು ಮಾರಾಟ ಪ್ರಾರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ 8GB RAM + 128GB ವೇರಿಯಂಟ್‌ ಮಾಡೆಲ್‌ ಬೆಲೆಯು 29,999ರೂ ಆಗಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿಯ ರಿಯಲ್‌ಮಿ X7 ಪ್ರೊ 5G ಸ್ಮಾರ್ಟ್‌ಫೋನ್‌ ಇಂದು (ಫೆ.10) ಮೊದಲ ಸೇಲ್‌ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ಆಂತರಿಕ ಸ್ಟೋರೇಜ್‌ ಸಾಮರ್ಥ್ಯದ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇನ್ನು ರಿಯಲ್‌ಮಿ X7 ಪ್ರೊ 5G ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಹಾಗೂ ರಚನೆ

ಡಿಸ್‌ಪ್ಲೇ ವಿನ್ಯಾಸ ಹಾಗೂ ರಚನೆ

ರಿಯಲ್‌ಮಿ X7 ಪ್ರೊ 5G ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 240Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಮತ್ತು 91.6% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ. ಜೊತೆಗೆ 5th Gen ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 1,200 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರಿಯಲ್‌ಮಿ X7 ಪ್ರೊ 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಡೈಮೆನ್ಸಿಟಿ 1000+ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ರಿಯಲ್‌ಮಿ X7 ಪ್ರೊ 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ f/ 2.4 ಲೆನ್ಸ್ ಹೊಂದಿರುವ ಬ್ಲ್ಯಾಕ್‌ ಮತ್ತು ವೈಟ್‌ ಇಮೇಜ್‌ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ X7 ಪ್ರೊ 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. 65W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Realme X7 Pro 5G packs 8GB RAM paired with 128GB internal storage. The smartphone is priced at Rs 29,999.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+