Home
ಸುದ್ದಿಜಾಲ

ರಿಯಲ್‌ಮಿ X7 ಪ್ರೊ ಎಕ್ಸ್ಟ್ರೀಮ್ ಎಡಿಷನ್ ಸ್ಮಾರ್ಟ್‌ಫೋನ್‌ ಬಿಡುಗಡೆ!

ರಿಯಲ್‌ಮಿ ಕಂಪೆನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ X7 ಪ್ರೊ ಎಕ್ಸ್ಟ್ರೀಮ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 1000+ SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ X7 ಪ್ರೊ ಎಕ್ಸ್ಟ್ರೀಮ್ ಆವೃತ್ತಿ ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದು 360 Hz ಟಚ್ ಸ್ಯಾಂಪ್ಲಿಂಗ್ ರೇಟ್‌, 90Hz ರಿಫ್ರೆಶ್ ರೇಟ್‌ ಮತ್ತು 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ರಿಯಲ್‌ಮಿ X7 ಪ್ರೊ ಎಕ್ಸ್ಟ್ರೀಮ್ ಎಡಿಷನ್ ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55-ಇಂಚಿನ ಫುಲ್‌-ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 360 Hz ಟಚ್ ಸ್ಯಾಂಪ್ಲಿಂಗ್ ರೇಟ್‌, 90Hz ರಿಫ್ರೆಶ್ ರೇಟ್‌ ಮತ್ತು 92.1 ಶೇಕಡಾ ಸ್ಕ್ರೀನ್-ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡಿಸಿಐ-ಪಿ 3 ವೈಡ್ ಕಲರ್ ಹರವುಗಳ 100 ಪ್ರತಿಶತ ವ್ಯಾಪ್ತಿಯೊಂದಿಗೆ 1,200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 1000+ SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಇದು 8GB RAM+128GB ಹಾಗೂ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರಿಯಲ್‌ಮಿ X7 ಪ್ರೊ ಎಕ್ಸ್ಟ್ರೀಮ್ ಆವೃತ್ತಿಯು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಎಫ್ / 2.25 ಲೆನ್ಸ್ , ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ 4cm ಫೋಕಲ್ ಉದ್ದ ಮತ್ತು f / 2.4 ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಎನ್ಎಫ್ಸಿ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ X7 ಪ್ರೊ ಎಕ್ಸ್ಟ್ರೀಮ್ ಆವೃತ್ತಿಯು ಚೀನಾದಲ್ಲಿ 8GB RAM+128GB ಶೇಖರಣಾ ಮಾದರಿಗೆ ಸಿಎನ್‌ವೈ 2,299 (ಸುಮಾರು ರೂ. 25,600) ಮತ್ತು 12GB RAM ಮತ್ತು 256GB ಶೇಖರಣಾ ಆಯ್ಕೆಗೆ ಸಿಎನ್‌ವೈ 2,599 (ಸರಿಸುಮಾರು ರೂ. 29,000) ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್ ಫಾರೆಸ್ಟ್ ಮತ್ತು ಕ್ಯಾಸಲ್ ಸ್ಕೈ ಕಲರ್ ಆಯ್ಕೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಇದು ರಿಯಲ್‌ಮಿ ಚೀನಾ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಸಬಹುದಾಗಿದೆ.

Best Mobiles in India

English summary
Realme X7 Pro Extreme Edition With Triple Rear Cameras Launched.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+