ಸದ್ಯದಲ್ಲೇ ಎಂಟ್ರಿ ಕೊಡಲಿದೆ ರಿಯಲ್‌ ಮಿ X7 ಪ್ರೊ ಸ್ಮಾರ್ಟ್‌ಫೋನ್!

|

ರಿಯಲ್‌ ಮಿ ಮೊಬೈಲ್ ಸಂಸ್ಥೆಯು ಇತ್ತೀಚಿಗಷ್ಟೆ ರಿಯಲ್‌ ಮಿ 7 ಸರಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದ್ದು, ರಿಯಲ್‌ ಮಿ X ಸರಣಿಯ ಫೋನ್‌ಗಳು ಹೆಚ್ಚು ಗಮನ ಸೆಳೆದಿವೆ. ಕಂಪನಿಯು ಇದೀಗ ರಿಯಲ್‌ ಮಿ 7 ಸರಣಿಯ ಮುಂದುವರಿದ ಭಾಗವಾಗಿ ರಿಯಲ್‌ ಮಿ X7 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲು ಸಕಲ ತಯಾರಿ ನಡೆಸಿದೆ.

ರಿಯಲ್‌ ಮಿ X7 ಪ್ರೊ

ಹೌದು, ರಿಯಲ್ ಮಿ ಕಂಪನಿಯು ರಿಯಲ್‌ ಮಿ X7 ಪ್ರೊ ಹೆಸರಿನ ಸ್ಮಾರ್ಟ್‌ಫೋನ್‌ ಅನ್ನು ಸದ್ಯದಲ್ಲಿಯೇ ಲಾಂಚ್ ಮಾಡಲಿದೆ. ಈ ಫೋನ್‌ ಮೀಡಿಯಾ ಟೆಕ್‌ನ Dimensity 5G ಚಿಪ್‌ಸೆಟ್‌ ಪ್ರೊಸೆಸರ್‌ ಹೊಮದಿರಲಿದ್ದು, ಉಳಿದ ಫೀಚರ್ಸ್‌ಗಳು ಫ್ಲ್ಯಾಗ್‌ಶಿಪ್ ಮಾದರಿಯಲ್ಲಿರಲಿವೆ ಎಂದು ಹೇಳಲಾಗಿದೆ. ಇದರೊಂದಿಗೆ ಬ್ಯಾಟರಿ ಬ್ಯಾಕ್‌ಅಪ್‌ ಸಹ ಹೆಚ್ಚಿರಲಿದೆ. ಹಾಗಾದರೇ ಲೀಕ್ ಮಾಹಿತಿಯಂತೆ ರಿಯಲ್‌ ಮಿ X7 ಪ್ರೊ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿರಲಿದೆ ಎಂಬುದನ್ನು ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ರಿಯಲ್‌ ಮಿ X7 ಪ್ರೊ ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 ಇಂಚಿನ AMOLED ಪೂರ್ಣ ಹೆಚ್‌ಡಿ ಪ್ಲಸ್‌ ಹೊಂದಿರಲಿದೆ. ಇದರೊಂದಿಗೆ ಡಿಸ್‌ಪ್ಲೇಯು 120Hz ರಿಫ್ರೇಶ್‌ ರೇಟ್ ಸಾಮರ್ಥ್ಯವನ್ನು ಪಡೆದಿರಲಿದೆ.

ಪ್ರೊಸೆಸರ್ ಬಲ

ಪ್ರೊಸೆಸರ್ ಬಲ

ರಿಯಲ್‌ ಮಿ X7 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ನ Dimensity 5G ಚಿಪ್‌ಸೆಟ್‌ ಅನ್ನು ಹೊಂದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಇರಲಿದೆ. ಇದರೊಂದಿಗೆ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿರಲಿದೆ.

ಕ್ವಾಡ್‌ ಕ್ಯಾಮೆರಾ

ಕ್ವಾಡ್‌ ಕ್ಯಾಮೆರಾ

ರಿಯಲ್‌ ಮಿ X7 ಪ್ರೊ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿರಲಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನ ಅಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿರಲಿದೆ. ಇನ್ನು ತೃತೀಯ ಕ್ಯಾಮೆರಾ 2ಎಂಪಿ ಸೆನ್ಸಾರ್ ಹಾಗೂ ನಾಲ್ಕನೇ ಕ್ಯಾಮೆರಾವು 2ಎಂಪಿ ಸೆನ್ಸಾರ್ ಪಡೆದಿರಲಿದೆ. ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್‌ನಲ್ಲಿರಲಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ರಿಯಲ್‌ ಮಿ X7 ಪ್ರೊ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯವನ್ನು ಹೊಂದಿದ್ದು, 65W ಸಾಮರ್ಥ್ಯದ ಫ್ಲ್ಯಾಶ್‌ ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆಯನ್ನು ಹೊಂದಿರಲಿದೆ. ಇದರರೊಂದಿಗೆ ಕನೆಕ್ಟಿವಿಟಿಗಾಗಿ ವೈಫೈ, ಬ್ಲೂಟೂತ್, ಸೆನ್ಸಾರ್‌, ವಿಡಿಯೊ ಎಡಿಟಿಂಗ್ ಆಪ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿದೆ.

Best Mobiles in India

English summary
Realme X7 Pro runs on Android 10 with Realme UI on top. However, it may be first in-line to get the Android 11 update with the updated Realme UI.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X