ರಿಯಲ್‌ಮಿ x7 ಪ್ರೊ ಅಲ್ಟ್ರಾ ಸ್ಮಾರ್ಟ್‌ಫೋನ್‌ ಲಾಂಚ್‌!.ಟ್ರಿಪಲ್ ಕ್ಯಾಮೆರಾ!

|

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ರಿಯಲ್‌ಮಿ ಸಂಸ್ಥೆಯು ಈಗಾಗಲೇ ರಿಯಲ್ ಮಿ X7 ಸ್ಮಾರ್ಟ್‌ಫೋನ್‌ ಸರಣಿಯನ್ನು ಬಿಡುಗಡೆ ಮಾಡಿದೆ. ಕಂಪನಿಯು ಅದೇ ಸರಣಿಯಲ್ಲಿ ಈಗ ಹೊಸದಾಗಿ ರಿಯಲ್ ಮಿ X7 ಪ್ರೊ ಅಲ್ಟ್ರಾ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ 1000+ SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದೆ.

ನೂತನವಾಗಿ

ಹೌದು, ರಿಯಲ್‌ಮಿ ಕಂಪೆನಿ ನೂತನವಾಗಿ ರಿಯಲ್‌ಮಿ X7 ಪ್ರೊ ಅಲ್ಟ್ರಾ ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್‌ 8GB + 128GB ಮತ್ತು 12GB + 256GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದ್ದು, 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಹಾಗಾದರೇ ರಿಯಲ್‌ಮಿ X7 ಪ್ರೊ ಅಲ್ಟ್ರಾ ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಹಾಗೂ ರಚನೆ

ಡಿಸ್‌ಪ್ಲೇ ವಿನ್ಯಾಸ ಹಾಗೂ ರಚನೆ

ರಿಯಲ್‌ಮಿ X7 ಪ್ರೊ ಅಲ್ಟ್ರಾ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 360Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಆಗಿದ್ದು, ಸ್ಕ್ರೀನ್‌ ರೀಫ್ರೇಶ್ ರೇಟ್ 90Hz ಆಗಿದೆ. 91.6% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 1,200 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರಿಯಲ್‌ಮಿ X7 ಪ್ರೊ ಅಲ್ಟ್ರಾ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ 1000+ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಇತ್ತೀಚಿನ ಆಂಡ್ರಾಯ್ಡ್‌ ಓಎಸ್‌ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 8GB + 128GB ಮತ್ತು 12GB + 256GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡಿದೆ.

ಟ್ರಿಪಲ್ ರಿಯರ್‌ ಕ್ಯಾಮೆರಾ

ಟ್ರಿಪಲ್ ರಿಯರ್‌ ಕ್ಯಾಮೆರಾ

ರಿಯಲ್‌ಮಿ X7 ಪ್ರೊ ಅಲ್ಟ್ರಾ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ f/ 2.4 ಲೆನ್ಸ್ ಹೊಂದಿರುವ ಬ್ಲ್ಯಾಕ್‌ ಮತ್ತು ವೈಟ್‌ ಇಮೇಜ್‌ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ X7 ಪ್ರೊ ಅಲ್ಟ್ರಾ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. 65W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಕೇವಲ 35 ನಿಮಿಷಗಳಲ್ಲಿ ಫೋನ್ 100% ಗೆ ಚಾರ್ಜ್ ಆಗುತ್ತದೆ ಎಂದು ಹೇಳಲಾಗಿದೆ. ಈ ಫೋನ್ ವಿಸಿ ಲಿಕ್ವಿಡ್ ಕೂಲಿಂಗ್ ತಂತ್ರಜ್ಞಾನವನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ X7 ಪ್ರೊ ಅಲ್ಟ್ರಾ ಸ್ಮಾರ್ಟ್‌ಫೋನ್‌ 8GB+128GB ವೇರಿಯಂಟ್ ಮಾಡೆಲ್‌ ಬೆಲೆಯು ಚೀನಾದಲ್ಲಿ 2,299 yuan (ಭಾರತದಲ್ಲಿ ಅಂದಾಜು 25,695ರೂ. ಎನ್ನಲಾಗಿದೆ) ಹಾಗೂ 12GB+256GB ವೇರಿಯಂಟ್ ಫೋನಿನ ಬೆಲೆಯು ಚೀನಾದಲ್ಲಿ 2,599 yuan (ಭಾರತದಲ್ಲಿ ಅಂದಾಜು 29,050ರೂ.ಗಳು ಎನ್ನಲಾಗಿದೆ) .

Best Mobiles in India

English summary
It also has a 6.55-inch full HD+ AMOLED display with a 90Hz refresh rate, and up to 360Hz touch sampling rate.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X