ಸದ್ಯದಲ್ಲೇ ಭಾರತದಲ್ಲಿ ರಿಯಲ್ ಮಿ X7 ಸ್ಮಾರ್ಟ್‌ಫೋನ್ ಸರಣಿ ಲಾಂಚ್!
ರಿಯಲ್ ಮಿ ಮೊಬೈಲ್ ತಯಾರಿಕಾ ಸಂಸ್ಥೆಯು ಇತ್ತೀಚಿಗಷ್ಟೆ ರಿಯಲ್ ಮಿ 7 ಸರಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಹಾಗೆಯೇ ರಿಯಲ್ ಮಿ X ಸರಣಿಯ ಫೋನ್‌ಗಳು ಹೆಚ್ಚು ಗಮನ ಸೆಳೆದಿವೆ. ಇದೀಗ ರಿಯಲ್ ಮಿ ಕಂಪನಿಯು ನೂತನವಾಗಿ ರಿಯಲ್‌ಮಿ 7X ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಮಾಡಲು ಸಜ್ಜಾಗಿದ್ದು, ಈ ಸರಣಿಯು ರಿಯಲ್‌ಮಿ X7 ಮತ್ತು ರಿಯಲ್‌ಮಿ X7 ಪ್ರೊ ಸ್ಮಾರ್ಟ್‌ಫೋನ್ ಮಾಡೆಲ್‌ಗಳನ್ನು ಒಳಗೊಂಡಿದೆ.

ಹೌದು, ರಿಯಲ್ ಮಿ ಕಂಪನಿಯು ತನ್ನ ಬಹುನಿರೀಕ್ಷಿತ ರಿಯಲ್ ಮಿ X7 ಪ್ರೊ ಮತ್ತು ರಿಯಲ್ ಮಿ X7 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಸದ್ಯದಲ್ಲಿಯೇ ಅಧಿಕೃತವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣ ಮಾಡಲಿದೆ. ಈ ಸರಣಿಯು ಮೀಡಿಯಾ ಟೆಕ್‌ನ Dimensity 800U ಚಿಪ್‌ಸೆಟ್ ಪ್ರೊಸೆಸರ್ ಹೊಂದಿರಲಿದ್ದು, ಉಳಿದಂತೆ ಫೀಚರ್ಸ್‌ಗಳು ಫ್ಲ್ಯಾಗ್‌ಶಿಪ್ ಮಾದರಿಯಲ್ಲಿರಲಿವೆ ಎಂದು ಹೇಳಲಾಗಿದೆ. ಹಾಗಾದರೇ ಲೀಕ್ ಮಾಹಿತಿಯಂತೆ ರಿಯಲ್ ಮಿ X7 ಪ್ರೊ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿರಲಿದೆ ಎಂಬುದನ್ನು ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ರಿಯಲ್ ಮಿ X7 ಪ್ರೊ ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 ಇಂಚಿನ AMOLED ಪೂರ್ಣ ಹೆಚ್‌ಡಿ ಪ್ಲಸ್ ಹೊಂದಿರಲಿದೆ. ಇದರೊಂದಿಗೆ ಡಿಸ್‌ಪ್ಲೇಯು 120Hz ರಿಫ್ರೇಶ್ ರೇಟ್ ಸಾಮರ್ಥ್ಯವನ್ನು ಪಡೆದಿರಲಿದೆ.

ಪ್ರೊಸೆಸರ್ ಬಲ
ರಿಯಲ್ ಮಿ X7 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ನ Dimensity 5G ಚಿಪ್‌ಸೆಟ್ ಅನ್ನು ಹೊಂದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಇರಲಿದೆ. ಇದರೊಂದಿಗೆ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿರಲಿದೆ.

ಕ್ವಾಡ್ ಕ್ಯಾಮೆರಾ ರಚನೆ
ರಿಯಲ್ ಮಿ X7 ಪ್ರೊ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿರಲಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನ ಅಲ್ಟ್ರಾ ವೈಲ್ಡ್ ಆಂಗಲ್ ಲೆನ್ಸ್ ಹೊಂದಿರಲಿದೆ. ಇನ್ನು ತೃತೀಯ ಕ್ಯಾಮೆರಾ 2ಎಂಪಿ ಸೆನ್ಸಾರ್ ಹಾಗೂ ನಾಲ್ಕನೇ ಕ್ಯಾಮೆರಾವು 2ಎಂಪಿ ಸೆನ್ಸಾರ್ ಪಡೆದಿರಲಿದೆ. ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್‌ನಲ್ಲಿರಲಿದೆ.

ಬ್ಯಾಟರಿ ಲೈಫ್
ರಿಯಲ್ ಮಿ X7 ಪ್ರೊ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯವನ್ನು ಹೊಂದಿದ್ದು, 65W ಸಾಮರ್ಥ್ಯದ ಫ್ಲ್ಯಾಶ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯನ್ನು ಹೊಂದಿರಲಿದೆ. ಇದರರೊಂದಿಗೆ ಕನೆಕ್ಟಿವಿಟಿಗಾಗಿ ವೈಫೈ, ಬ್ಲೂಟೂತ್, ಸೆನ್ಸಾರ್, ವಿಡಿಯೊ ಎಡಿಟಿಂಗ್ ಆಪ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ರಿಯಲ್‌ಮಿ X7 - ಫೀಚರ್ಸ್
ರಿಯಲ್‌ಮಿ X7 ಸ್ಮಾರ್ಟ್‌ಫೋನ್ 6.4-ಇಂಚಿನ ಪೂರ್ಣ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದೆ. ಹಾಗೆಯೇ ಮುಖ್ಯ ಕ್ಯಾಮರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿರಲಿದೆ. ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಇರಲಿದೆ. ಇದರೊಂದಿಗೆ 4,300mAh ಬ್ಯಾಟರಿ ಬ್ಯಾಕ್‌ಅಪ್ ಇರಲಿದ್ದು, 65W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಇರಲಿದೆ.


Click it and Unblock the Notifications