Just In
- 1 hr ago
ಬಿಎಸ್ಎನ್ಎಲ್ನ ಈ ಪೋಸ್ಟ್ಪೇಯ್ಡ್ ಪ್ಲ್ಯಾನ್ ಬೆಲೆ ಅಗ್ಗ; ಆದ್ರೆ, ರೀಚಾರ್ಜ್ ಕಷ್ಟ!
- 2 hrs ago
ಅಗ್ಗದ ಬೆಲೆಗೆ ಹೊಸ ಪ್ಲ್ಯಾನ್ ಪರಿಚಯಿಸಿದ ವಿ ಟೆಲಿಕಾಂ; ಸಿಮ್ ಆಕ್ಟಿವ್ ಇಡಲು ಇದು ಬೆಸ್ಟ್!
- 4 hrs ago
ಏರ್ಟೆಲ್ ಜೊತೆಗೆ ಕೈ ಜೋಡಿಸಿದ ಮೆಟ್ರೋ, ಇನ್ಮುಂದೆ ಪ್ರಯಾಣಿಕರಿಗೆ ಈ ಸೇವೆ ಇನ್ನಷ್ಟು ಸರಳ!
- 5 hrs ago
ಪೊಕೊ X5 ಪ್ರೊ ಲಾಂಚ್ಗೆ ಡೇಸ್ ಫಿಕ್ಸ್; ಭಾರೀ ಕುತೂಹಲ ಮೂಡಿಸಿದ ಫೀಚರ್ಸ್!
Don't Miss
- Lifestyle
ಫೆ.1ಕ್ಕೆ ಜಯ ಏಕಾದಶಿ: ಈ ರೀತಿ ಮಾಡಿದರೆ ದಾರಿದ್ರ್ಯ ಹೋಗಿ ಸಂಪತ್ತು ವೃದ್ಧಿಸುವುದು
- Automobiles
ಭಾರತದಲ್ಲಿ ಮೊದಲ ಬಾರಿಗೆ 2.5 ಕೋಟಿ ಕಾರುಗಳ ಮಾರಾಟ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಕಂಪನಿ
- Sports
IND vs NZ: 2ನೇ ಟಿ20 ಪಂದ್ಯದಲ್ಲಿ ಕಳಪೆ ಪಿಚ್ ನಿರ್ಮಾಣ; ಲಕ್ನೋ ಪಿಚ್ ಕ್ಯುರೇಟರ್ ವಜಾ
- Finance
Economic Survey: ಶೇ.6-6.8 ಜಿಡಿಪಿ ಬೆಳವಣಿಗೆ, 3 ವರ್ಷದಲ್ಲೇ ಮಂದಗತಿ
- News
ಯೂಟ್ಯೂಬ್ ನೋಡಿ ಕಳ್ಳತನ ಕಲಿತ ಜೋಡಿ: ಶಶಿಕಲಾ ಜೊಲ್ಲೆ ಮಾಲೀಕತ್ವದ ಬ್ಯಾಂಕ್ಗೆ ಕನ್ನ
- Movies
ಬಾಲನಟಿಯರಾಗಿ ಬಂದು ನಾಯಕಿಯರಾಗಿ ರಂಜಿಸುತ್ತಿರುವ ಚೆಂದುಳ್ಳಿ ಚೆಲುವೆಯರ ಜರ್ನಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇಂದು 'ರಿಯಲ್ ಮಿ XT' ಫೋನಿನ ಫಸ್ಟ್ ಸೇಲ್!.ಬೆಲೆ ಜಸ್ಟ್ 15,999ರೂ!
ಇದೇ ಸೆಪ್ಟೆಂಬರ್ 13ರಂದು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಆಗಿರುವ 'ರಿಯಲ್ ಮಿ XT' ಸ್ಮಾರ್ಟ್‌ಫೋನಿನ ಮೊದಲ ಸೇಲ್ ಇಂದು (ಸೆಪ್ಟಂಬರ್ 16) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಶುರುವಾಗಲಿದೆ. ಈಗಾಗಲೇ 64ಎಂಪಿ ಕ್ಯಾಮೆರಾ ಸೆನ್ಸಾರ್, ಸ್ನ್ಯಾಪ್‌ಡ್ರಾಗನ್ 712 AIE SoC ಪ್ರೊಸೆಸರ್ ಮತ್ತು ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿದ್ದು, ಮಾರುಕಟ್ಟೆಯಲ್ಲಿ ಭರ್ಜರಿ ಸೇಲ್ ಕಾಣುವ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಹೌದು, ರಿಯಲ್ ಮಿ XT' ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ನಾಲ್ಕು ಕ್ಯಾಮೆರಾಗಳನ್ನು ಒಳಗೊಂಡಿದ್ದು, ಪ್ರಮುಖ ಕ್ಯಾಮೆರಾವು 64ಎಂಪಿ ಸಾಮರ್ಥ್ಯದ ಸ್ಯಾಮ್‌ಸಂಗ್‌ನ ISOCELL ಬ್ರೈಟ್ GW1 ಸೆನ್ಸಾರ್ ಹೊಂದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16ಎಂಪಿ ಸಾಮರ್ಥ್ಯದಲ್ಲಿದ್ದು, ಸೋನಿಯ IMX 471 ಸೆನ್ಸಾರ್ ಪಡೆದುಕೊಂಡಿದೆ. ಆರಂಭಿಕ ಬೆಲೆಯು 15,999ರೂ ಆಗಿದೆ. ಹಾಗಾದರೇ ರಿಯಲ್ ಮಿ XT ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ರಿಯಲ್ ಮಿ XT ಸ್ಮಾರ್ಟ್‌ಫೋನ್ 2340x1080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.4 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಸೂಪರ್ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಡ್ಯುವ್‌ಡ್ರಾಪ್ ಸ್ಟೈಲ್ ನಾಚ್ ಮಾದರಿಯಲ್ಲಿದೆ. ಹಾಗೆಯೇ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆಯನ್ನು ಒಳಗೊಂಡಿದ್ದು, ಸ್ಕ್ರೀನ್ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ ಕವಚ್ ಪಡೆದಿದೆ. ಫೋನ್ ಸುತ್ತಲೂ ಕರ್ವ್ ನೀಡಲಾಗಿದೆ ಮತ್ತು ಹಿಂಬದಿ ಗ್ಲಾಸಿ ಲುಕ್‌ನ ರಚನೆ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ರಿಯಲ್ ಮಿ XT ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 712 AIE SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ ಆಂಡ್ರಾಯ್ಡ್ 9 ಪೈ ಓಎಸ್‌ನ ಬೆಂಬಲ ನೀಡಲಾಗಿದೆ. ಒಟ್ಟು ಮೂರು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB RAM ಮತ್ತು 64GB ಸ್ಟೋರೇಜ್, 6GB RAM ಮತ್ತು 64GB ಸ್ಟೋರೇಜ್ ಹಾಗೂ 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯದಲ್ಲಿವೆ.

ಕ್ವಾಡ್ ಕ್ಯಾಮೆರಾ ವಿಶೇಷ
ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಅಲ್ಟ್ರಾ-ವೈಲ್ಡ್ ಸೆನ್ಸಾರ್‌ನಲ್ಲಿದ್ದು, ಮೂರನೇಯ ಮತ್ತು ನಾಲ್ಕನೇ ಕ್ಯಾಮೆರಾಗಳೆರಡು 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಸೆಲ್ಫಿಗಾಗಿ 16ಎಂಪಿ ಕ್ಯಾಮೆರಾ ಇದ್ದು, ಸೋನಿಯ IMX 471 ಸೆನ್ಸಾರ್ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ರಿಯಲ್ ಮಿ XT ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಶಕ್ತಿಯನ್ನು ಪಡೆದುಕೊಂಡಿದ್ದು, ಜೊತೆಗೆ VOOC 3.0 ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಇದರೊಂದಿಗೆ ColorOS 6 ಬೆಂಬಲಿತ ಆಂಡ್ರಾಯ್ಡ್ 9 ಪೈ ಓಎಸ್, ಡಾರ್ಕ್ ಮೋಡ್, ಯುಎಸ್‌ಬಿ ಟೈಪ್-ಸಿ ಪೋರ್ಟ್, ಆಕ್ಸಿಡೆಂಟಲ್ ಡ್ರಾಪ್ಸ್‌ನಿಂದ ರಕ್ಷಣೆ ಸೌಲಭ್ಯಗಳೊಂದಿಗೆ ವೈಫೈ, ಬ್ಲೂಟೂತ್, ಆಯ್ಕೆಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್ ಮಿ XT ಸ್ಮಾರ್ಟ್‌ಫೋನ್ ಇಂದು (ಸೆಪ್ಟಂಬರ್ 16) ಫ್ಲಿಪ್‌ಕಾರ್ಟ್ ತಾಣದಲ್ಲಿ ಮೊದಲ ಸೇಲ್ ಆರಂಭಗೊಳ್ಳಲಿದೆ. 4GB RAM ಮತ್ತು 64GB ವೆರಿಯಂಟ್ ಬೆಲೆಯು 15,999ರೂ, 6GB RAM ಮತ್ತು 64GB ವೆರಿಯಂಟ್ ಬೆಲೆಯು 16,999ರೂ.ಗಳು ಮತ್ತು ಹೈ ಎಂಡ್ ವೇರಿಯಂಟ್ 8GB RAM ಮತ್ತು 128GB ಬೆಲೆಯು 18,999ರೂ.ಗಳಾಗಿದೆ. ನೋ ಕಾಸ್ಟ್ ಇಎಮ್‌ಐ ಆಯ್ಕೆಗಳು ಲಭ್ಯ ಇವೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470