Just In
- 2 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 2 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 3 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
- 4 hrs ago
ಗೂಗಲ್ ಕ್ರೋಮ್ ಬಳಸುವವರಿಗೆ ಭಾರತ ಸರ್ಕಾರದಿಂದ ಖಡಕ್ ಎಚ್ಚರಿಕೆ! ಯಾಕೆ ? ಸಮಸ್ಯೆ ಏನು?
Don't Miss
- Movies
ಕೆಎಲ್ ರಾಹುಲ್ಗೆ ಕಾರು ಇಲ್ಲ, ಬಂಗ್ಲೆಯೂ ಇಲ್ಲ! ಎಲ್ಲಾ ಬರಿ ಓಳು
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ? ಈ ಬಗೆಯ ಆಹಾರ ಸೇವನೆ ಒಳ್ಳೆಯದು
- News
7th Pay Commission DA: ನೌಕರರಿಗೆ 18 ತಿಂಗಳ ಬಾಕಿ DA ಹಣ ಎಷ್ಟು ಕಂತುಗಳಲ್ಲಿ ಸಿಗಲಿದೆ? ತಿಳಿಯಿರಿ
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ರಿಯಲ್ ಮಿ XT' ಓಪೆನ್ ಸೇಲ್ ಶುರು!.64ಎಂಪಿ ಕ್ಯಾಮೆರಾ ವಿಶೇಷ!
ರಿಯಲ್ ಮಿ ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ 'ರಿಯಲ್ ಮಿ ಎಕ್ಸ್‌ಟಿ' ಸ್ಮಾರ್ಟ್‌ಫೋನ್ ಇದೀಗ ಓಪೆನ್ ಸೇಲ್ ಆರಂಭಿಸಿದ್ದು, ಗ್ರಾಹಕರ ಖರೀದಿಗೆ ಲಭ್ಯವಿದೆ. ಈ ಫೋನ್ ಇದೇ ಸೆಪ್ಟೆಂಬರ್ 16ರಂದು ಮೊದಲ ಸೇಲ್ ನಡೆಸಿತ್ತು. ಅದಾದ ನಂತರ ಈಗ ಓಪೆನ್ ಸೇಲ್ ಲಭ್ಯವಾಗಿದೆ. ಈ ಸ್ಮಾರ್ಟ್‌ಫೋನ್ ನಾಲ್ಕು ಕ್ಯಾಮೆರಾಗಳನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸಾಮರ್ಥ್ಯದಲ್ಲಿದೆ.

ಹೌದು, 'ರಿಯಲ್ ಮಿ XT' ಸ್ಮಾರ್ಟ್‌ಫೋನ್ ಇದೀಗ ಖರೀದಿಗೆ ಲಭ್ಯವಿದ್ದು, ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಮತ್ತು ರಿಯಲ್ ಮಿ ಸಂಸ್ಥೆಯ ಅಧಿಕೃತ ವೆಬ್‌ತಾಣಗಳಲ್ಲಿ ಗ್ರಾಹಕರು ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 712 AIE SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಸೆಲ್ಫಿ ಕ್ಯಾಮೆರಾವು 16ಎಂಪಿ ಸಾಮರ್ಥ್ಯದಲ್ಲಿದೆ. ಈ ಫೋನಿನ ಆರಂಭಿಕ ಬೆಲೆಯು 15,999ರೂ ಆಗಿದೆ. ಹಾಗಾದರೇ ರಿಯಲ್ ಮಿ XT ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ರಿಯಲ್ ಮಿ XT ಸ್ಮಾರ್ಟ್‌ಫೋನ್ 2340x1080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.4 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಸೂಪರ್ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಡ್ಯುವ್‌ಡ್ರಾಪ್ ಸ್ಟೈಲ್ ನಾಚ್ ಮಾದರಿಯಲ್ಲಿದೆ. ಹಾಗೆಯೇ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆಯನ್ನು ಒಳಗೊಂಡಿದ್ದು, ಸ್ಕ್ರೀನ್ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ ಕವಚ್ ಪಡೆದಿದೆ. ಫೋನ್ ಸುತ್ತಲೂ ಕರ್ವ್ ನೀಡಲಾಗಿದೆ ಮತ್ತು ಹಿಂಬದಿ ಗ್ಲಾಸಿ ಲುಕ್‌ನ ರಚನೆ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ರಿಯಲ್ ಮಿ XT ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 712 AIE SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ ಆಂಡ್ರಾಯ್ಡ್ 9 ಪೈ ಓಎಸ್‌ನ ಬೆಂಬಲ ನೀಡಲಾಗಿದೆ. ಒಟ್ಟು ಮೂರು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB RAM ಮತ್ತು 64GB ಸ್ಟೋರೇಜ್, 6GB RAM ಮತ್ತು 64GB ಸ್ಟೋರೇಜ್ ಹಾಗೂ 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯದಲ್ಲಿವೆ.

ಕ್ವಾಡ್ ಕ್ಯಾಮೆರಾ ವಿಶೇಷ
ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಅಲ್ಟ್ರಾ-ವೈಲ್ಡ್ ಸೆನ್ಸಾರ್‌ನಲ್ಲಿದ್ದು, ಮೂರನೇಯ ಮತ್ತು ನಾಲ್ಕನೇ ಕ್ಯಾಮೆರಾಗಳೆರಡು 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಸೆಲ್ಫಿಗಾಗಿ 16ಎಂಪಿ ಕ್ಯಾಮೆರಾ ಇದ್ದು, ಸೋನಿಯ IMX 471 ಸೆನ್ಸಾರ್ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ರಿಯಲ್ ಮಿ XT ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಶಕ್ತಿಯನ್ನು ಪಡೆದುಕೊಂಡಿದ್ದು, ಜೊತೆಗೆ VOOC 3.0 ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಇದರೊಂದಿಗೆ ColorOS 6 ಬೆಂಬಲಿತ ಆಂಡ್ರಾಯ್ಡ್ 9 ಪೈ ಓಎಸ್, ಡಾರ್ಕ್ ಮೋಡ್, ಯುಎಸ್‌ಬಿ ಟೈಪ್-ಸಿ ಪೋರ್ಟ್, ಆಕ್ಸಿಡೆಂಟಲ್ ಡ್ರಾಪ್ಸ್‌ನಿಂದ ರಕ್ಷಣೆ ಸೌಲಭ್ಯಗಳೊಂದಿಗೆ ವೈಫೈ, ಬ್ಲೂಟೂತ್, ಆಯ್ಕೆಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್ ಮಿ XT ಸ್ಮಾರ್ಟ್‌ಫೋನ್ ಇದೀಗ ಫ್ಲಿಪ್‌ಕಾರ್ಟ್ ತಾಣದಲ್ಲಿ ನಡೆಯುತ್ತಿರುವ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್ ಗ್ರಾಹಕರ ಖರೀದಿಗೆ ಲಭ್ಯವಿದೆ. 4GB RAM ಮತ್ತು 64GB ವೆರಿಯಂಟ್ ಬೆಲೆಯು 15,999ರೂ, 6GB RAM ಮತ್ತು 64GB ವೆರಿಯಂಟ್ ಬೆಲೆಯು 16,999ರೂ.ಗಳು ಮತ್ತು ಹೈ ಎಂಡ್ ವೇರಿಯಂಟ್ 8GB RAM ಮತ್ತು 128GB ಬೆಲೆಯು 18,999ರೂ.ಗಳಾಗಿದೆ. ನೋ ಕಾಸ್ಟ್ ಇಎಮ್‌ಐ ಆಯ್ಕೆಗಳು ಲಭ್ಯ ಇವೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470