Home
ಸುದ್ದಿಜಾಲ

80W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ ರೆಡ್‌ ಮ್ಯಾಜಿಕ್‌ 5G ಸ್ಮಾರ್ಟ್‌ಫೋನ್‌!

ಚೀನಾ ಮೂಲದ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿ ನುಬಿಯಾ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ 5G ನೆಟ್‌ವರ್ಕ್‌ ಬೆಂಬಲಿಸಲಿದ್ದು, ಊಹೆಗೂ ಮೀರಿದ ವೇಗದ ಚಾರ್ಜಿಂಗ್‌ ಅನ್ನ ಬೆಂಬಲಿಸಲಿದೆ ಎಂದು ಹೇಳಲಾಗ್ತಿದೆ. ಅಷ್ಟೇ ಅಲ್ಲ ವೇಗದ ಚಾರ್ಜಿಂಗ್‌ ನಂತರ ಸ್ಮಾರ್ಟ್‌ಫೋನ್‌ನ ಉಷ್ಣತೆಯ ಮಟ್ಟವನ್ನ ಇಳಿಸಲು ಏರ್‌ ಕೂಲ್‌ ಪ್ಯಾನೆಲ್‌ ಅನ್ನ ನೀಡಲಾಗಿದೆ ಎಂಬ ಗಾಸಿಪ್‌ ಹರಡಿದೆ.

ನುಬಿಯಾ

ಹೌದು ನುಬಿಯಾ ಸ್ಮಾರ್ಟ್‌ಫೋನ್‌ ಕಂಪೆನಿ ಹೊಸ ಸ್ಮಾರ್ಟ್‌ಫೋನ್‌ ರೆಡ್‌ ಮ್ಯಾಜಿಕ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಹೊಸ ಸ್ಮಾರ್ಟ್‌ಫೋನ್‌ 144Hz ಡಿಸ್‌ಪ್ಲೇ ರಿಫ್ರೆಶ್ ರೇಟ್‌ಅನ್ನು ಹೊಂದಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ 120Hz ಡಿಸ್‌ಪ್ಲೇ ಪ್ಯಾನಲ್‌ಗಳಿಗಿಂತ ಹೆಚ್ಚಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳೇನು ಅನ್ನೊದು ಆನ್‌ಲೈನ್‌ನಲ್ಲಿ ಲೀಕ್‌ ಆಗಿದ್ದು, ಲೀಕ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ಈ ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ರೆಸಲ್ಯೂಶನ್‌ ಹೊಂದಿರುವ 6.65 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನ ಹೊಂದಿದ್ದು, 16M ಕಲರ್ಸ್‌ಗಳನ್ನ ಒಳಗೊಂಡ ಅಮೋಲೆಡ್ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 144Hz ಡಿಸ್‌ಪ್ಲೇ ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.ಇನ್ನು ಡಿಸ್‌ಪ್ಲೇ ರಕ್ಷಣೆಗಾಗಿ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ ನೀಡಾಗಿದೆ. ಅಲ್ಲದೆ ಈ ಡಿಸ್‌ಪ್ಲೇ 388 ppi ಸಾಂದ್ರತೆಯನ್ನ ಹೊಂದಿದೆ.

ಪ್ರೊಸೆಸರ್

ಪ್ರೊಸೆಸರ್

ರೆಡ್ ಮ್ಯಾಜಿಕ್ 5G ಸ್ಮಾರ್ಟಫೋನ್‌ ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್‌ 865 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 256GB ಶೇಖರಣಾ ಸಾಮರ್ಥ್ಯವನ್ನ ಹೊಂದಿದ್ದು, ಮೆಮೊರಿ ಕಾರ್ಡ್‌ ಮೂಲಕ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ವಿನ್ಯಾಸ ಹೇಗಿರಲಿದೆ ಎಂಬುದು ಇನ್ನು ಖಾತ್ರಿ ಆಗಿಲ್ಲವಾದರೂ, ರಿಯರ್‌ ಕ್ಯಾಮೆರಾದಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದ್ದು, ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌ ಹೊಂದಿರಲಿದೆ ಎಂದು ಹೇಳಲಾಗಿದೆ. ಅಲ್ಲದೆ ಸೆಲ್ಪಿ ಕ್ಯಾಮೆರಾ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಈ ಕ್ಯಾಮೆರಾ ಎಲ್‌ಇಡಿ ಪ್ಲ್ಯಾಶ್‌ ಅನ್ನ ಒಳಗೊಂಡಿದೆ.

ಬ್ಯಾಟರಿ

ಬ್ಯಾಟರಿ

ಈ ಸ್ಮಾರ್ಟ್‌ಫೋನ್‌ ಸೂಪರ್ ಫಾಸ್ಟ್ ಚಾರ್ಜಿಂಗ್ ಅನ್ನು ಹೊಂದಿದ್ದು, 5,000mAh ಬ್ಯಾಟರಿ ಪ್ಯಾಕಪ್‌ ಹೊಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಇದಲ್ಲದೆ ಇದು ವೇಗವಾಗಿ ಚಾರ್ಜ್ ಮಾಡುವುದರಿಂದ ಸಾಧನದ ಉಷ್ಣತೆಯು ವೇಗವಾಗಿ ಏರಲು ಕಾರಣವಾಗುತ್ತದೆ, ಈ ಸಮಸ್ಯೆಯನ್ನು ನಿಭಾಯಿಸುವ ಸಲುವಾಗಿ, ಏರ್-ಕೂಲ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ನೀಡಲಾಗಿದೆ. ಈ ಸ್ಮಾರ್ಟ್‌ಫೋನ್‌ 80W ವೇಗದ ಸಾಮರ್ಥ್ಯ ಹೊಂದಿರಲಿದೆ ಎನ್ನಲಾಗ್ತಿದೆಯಾದರೂ ಇದು 55W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Red Magic 5G will come with a 144Hz refresh rate.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+