ರೆಡ್ ಮ್ಯಾಜಿಕ್ 6 ಪ್ರೊ ಗೇಮಿಂಗ್ ಸ್ಮಾರ್ಟ್‌ಫೋನ್ ಲಾಂಚ್!..ವಿಶೇಷತೆ ಏನು?
ಜನಪ್ರಿಯ ನುಬಿಯಾ ಕಂಪೆನಿ ತನ್ನ ರೆಡ್ ಮ್ಯಾಜಿಕ್ ಗೇಮಿಂಗ್ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಮಾದರಿಯ ಗೇಮಿಂಗ್ ಸ್ಮಾರ್ಟ್‌ಫೋನ್ ಪರಿಚಯಿಸಿರುವ ನುಬಿಯಾ ಇದೀಗ ರೆಡ್ ಮ್ಯಾಜಿಕ್ 6 ಸರಣಿಯ ಗೇಮಿಂಗ್ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿದೆ. ಇನ್ನು ಈ ಸರಣಿಯಲ್ಲಿ ರೆಡ್ ಮ್ಯಾಜಿಕ್ 6 ಮತ್ತು ರೆಡ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿದೆ.

ಹೌದು, ನುಬಿಯಾ ಕಂಪೆನಿ ರೆಡ್ ಮ್ಯಾಜಿಕ್ 6 ಸರಣಿಯಲ್ಲಿ ರೆಡ್ ಮ್ಯಾಜಿಕ್ 6 ಮತ್ತು ರೆಡ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದರಲ್ಲಿ ರೆಡ್ ಮ್ಯಾಜಿಕ್ 6 ಪ್ರೊ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದು ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ನುಬಿಯಾ ರೆಡ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 165Hz ರಿಫ್ರೆಶ್ ರೇಟ್, 500Hz ಸಿಂಗಲ್ ಫಿಂಗರ್ ಟಚ್ ಸ್ಯಾಪ್ಲಿಂಗ್ ರೇಟ್, 360Hz ಮಲ್ಟಿ ಫಿಂಗರ್ ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 91.28 ರಷ್ಟು ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ರೆಡ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಹೊಮದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷ
ರೆಡ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದರಲ್ಲಿ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ ಆದರೆ ಅದರ ಮೆಗಾಪಿಕ್ಸೆಲ್ ಬಗ್ಗೆ ಮಾಹಿತಿ ಇಲ್ಲ.

ಬ್ಯಾಟರಿ ಮತ್ತು ಇತರೆ
ಇದು 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 120W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈ-ಫೈ 6, ಬ್ಲೂಟೂತ್ 5.1, 3.5mmಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರೆಡ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ 12GB RAM + 128GB ರೂಪಾಂತರಕ್ಕೆ CNY 4,399(ಅಂದಾಜು 49 541ರೂ) ಬೆಲೆ ಹೊಂದಿದೆ. ಇನ್ನು 12GB RAM + 256 GB ರೂಪಾಂತರಕ್ಕೆ CNY 4,799 (ಸುಮಾರು ರೂ. 54,000) ಹಾಗೂ 16GB RAM + 256GB ರೂಪಾಂತರಕ್ಕೆ CNY 5,299 (ಸುಮಾರು ರೂ. 59,600) ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಐರನ್ ಮತ್ತು ಐಸ್ ಬ್ಲೇಡ್ ಸಿಲ್ವರ್ ಬಣ್ಣಗಳಲ್ಲಿ ಲಭ್ಯವಾಗಲಿದೆ. ಇದು ಮಾರ್ಚ್ 11 ರಿಂದ ಮಾರಾಟವಾಗಲಿದ್ದು, ಶೀಘ್ರದಲ್ಲೇ ಜಾಗತಿಕ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.


Click it and Unblock the Notifications