Just In
- just now
ಭಾರತಕ್ಕೆ ಎಂಟ್ರಿ ಕೊಟ್ಟ ಒಪ್ಪೋ ರೆನೋ 8T 5G! ಕ್ಯಾಮೆರಾ ಹೇಗಿದೆ? ವಿಶೇಷತೆ ಏನು?
- 2 min ago
ಒಪ್ಪೋ ಎನ್ಕೋ ಏರ್ 3 ಇಯರ್ಬಡ್ಸ್ ಅನಾವರಣ; ಬೆಲೆ ಹಾಗೂ ಫೀಚರ್ಸ್ ಬಗ್ಗೆ ತಿಳಿಯಿರಿ!
- 2 hrs ago
ಹರಾಜಿನಲ್ಲಿರುವ ಈ ಹಳೆಯ ಐಫೋನ್ ಬೆಲೆ ಅರ್ಧಕೋಟಿ ದಾಟಿದ್ರೂ ಅಚ್ಚರಿಯಿಲ್ಲ!
- 2 hrs ago
DIZO Watch D2 : ಡಿಜೋ ಸಂಸ್ಥೆಯಿಂದ ಮತ್ತೊಂದು ಆಕರ್ಷಕ ಸ್ಮಾರ್ಟ್ವಾಚ್ ಬಿಡುಗಡೆ! ವಿಶೇಷತೆ ಏನು?
Don't Miss
- Sports
ಗದ್ದೆಯೇ ಕ್ರಿಕೆಟ್ ಮೈದಾನ: ಶುಭಮನ್ ಗಿಲ್ ವಿಕೆಟ್ ಪಡೆದವರಿಗೆ ಸಿಗ್ತಿತ್ತು 100 ರುಪಾಯಿ ಬಹುಮಾನ
- News
ಬೆಂಗಳೂರು ಟ್ರಾಫಿಕ್ನಿಂದಾಗಿ ಆಂಬುಲೆನ್ಸ್ನಲ್ಲಿ ಹಸುಗೂಸು ಸಾವು!
- Movies
ನಟ ಪ್ರೇಮ್ ಭೇಟಿ ವೇಳೆ ನಿರ್ಮಾಪಕರ ಮನೆಯಲ್ಲಿ ಕಾಣಿಸಿಕೊಂಡ ನಾಗರಹಾವು!
- Automobiles
6 ಏರ್ಬ್ಯಾಗ್ ಜೊತೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುವ ಟಾಪ್ 5 ಕಾರುಗಳು
- Finance
ಅಮುಲ್ ಹಾಲಿನ ದರ ಮತ್ತೆ 3 ರೂ ಏರಿಕೆ, ನೂತನ ದರ ಪರಿಶೀಲಿಸಿ
- Lifestyle
Maha Shivratri 2023 : ಮಹಾಶಿವರಾತ್ರಿ ದಿನಾಂಕ, ಪೂಜಾ ಮುಹೂರ್ತ, ಮಹತ್ವ, ಆಚರಣೆ ಹಿನ್ನೆಲೆ ಏನು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನುಬಿಯಾ ರೆಡ್ ಮ್ಯಾಜಿಕ್ 6R ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ನುಬಿಯಾ ಕಂಪೆನಿ ಜನಪ್ರಿಯ ಗೇಮಿಂಗ್ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ರೆಡ್ ಮ್ಯಾಜಿಕ್ 6R ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್ ರೆಡ್ ಮ್ಯಾಜಿಕ್ 6ನ ಮುಂದುವರೆದ ಆವೃತ್ತಿಯಾಗಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಪಡೆದುಕೊಂಡಿದೆ. ಜೊತೆಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.

ಹೌದು, ನುಬಿಯಾ ಕಂಪೆನಿ ಹೊಸ ರೆಡ್ ಮ್ಯಾಜಿಕ್ 6R ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಸಹ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ
ರೆಡ್ ಮ್ಯಾಜಿಕ್ 6R ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 144Hz ವರೆಗೆ ಅಡಾಪ್ಟಿವ್ ರಿಫ್ರೆಶ್ ರೇಟ್ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ರೆಡ್ಮ್ಯಾಜಿಕ್ ಓಎಸ್ 4.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿನ್ಯಾಸ
ರೆಡ್ ಮ್ಯಾಜಿಕ್ 6R ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 682 ಸೆನ್ಸಾರ್, ಎರನಡೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರೆಡ್ ಮ್ಯಾಜಿಕ್ 6R ಸ್ಮಾರ್ಟ್‌ಫೋನ್ 4,200mAh ಬ್ಯಾಟರಿಯನ್ನು ಹೊಂದಿದ್ದು, 55W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, 4ಜಿ ಎಲ್ ಟಿಇ, ವೈ-ಫೈ 6, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ 6GB RAM+ 128GB ಶೇಖರಣಾ ಸಂರಚನೆಗಾಗಿ ಸಿಎನ್‌ವೈ 2,999 (ಸುಮಾರು ರೂ. 34,100)ಬೆಲೆ ಹೊಂದಿದೆ. 8GB RAM + 128GB ಶೇಖರಣಾ ರೂಪಾಂತರಕ್ಕೆ ಸಿಎನ್‌ವೈ 3,299 (ಸರಿಸುಮಾರು ರೂ. 37,500)ಬೆಲೆ ನಿಗದಿಪಡಿಸಲಾಗಿದೆ. ಇನ್ನು ಈ ಫೋನ್ ಫ್ಯಾಂಟಮ್ ಬ್ಲ್ಯಾಕ್ ಮತ್ತು ಸ್ಟ್ರೀಮರ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ. ಹಳದಿ ಬಣ್ಣದ ಆಯ್ಕೆಯಲ್ಲಿ ಸೀಮಿತ ಆವೃತ್ತಿಯ ರೆಡ್ ಮ್ಯಾಜಿಕ್ 6 ಆರ್ ನೀಡಲು ಕಂಪನಿಯು ಟೆನ್ಸೆಂಟ್ ಗೇಮ್ಸ್ ಜೊತೆ ಪಾಲುದಾರಿಕೆ ಹೊಂದಿದೆ. ಇದು ಇದೇ ಜೂನ್ 1 ರಿಂದ ಮಾರಾಟಕ್ಕೆ ಬರಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470