Home
ಸುದ್ದಿಜಾಲ

ರೆಡ್ಮಿ 10 2022 ಸ್ಮಾರ್ಟ್‌ಫೋನ್‌ ಬಿಡುಗಡೆ! AI ಕ್ವಾಡ್ ರಿಯರ್ ಕ್ಯಾಮೆರಾ ವಿಶೇಷ!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ರೆಡ್ಮಿ ಬ್ರ್ಯಾಂಡ್‌ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರೆಡ್ಮಿ 10 2022 ಅನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಶೀಯೋಮಿ ಕಂಪೆನಿಯ ರೆಡ್ಮಿ 10 2022 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ.

 ರೆಡ್ಮಿ 10 2022

ಹೌದು, ರೆಡ್ಮಿ ಕಂಪೆನಿ ಹೊಸ ರೆಡ್ಮಿ 10 2022 ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5ಇಂಚಿನ ಪೂರ್ಣ-HD+ ಡಾಟ್‌ಡಿಸ್ಪ್ಲೇ ಪರದೆಯನ್ನು ಹೊಂದಿದೆ. ಇನ್ನು ಈ ಫೋನ್‌ AI ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರೆಡ್ಮಿ 10 2022 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಬೆಂಬಲಿಸುವ 6.5 ಇಂಚಿನ ಫುಲ್‌ HD+ ಡಾಟ್‌ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ಅಡಾಪ್ಟಿವ್‌ಸಿಂಕ್ ರಿಫ್ರೆಶ್ ರೇಟ್‌ ಹೊಂದಿದೆ. ಇದು ರೀಡಿಂಗ್ ಮೋಡ್ 3.0 ಮತ್ತು ಸನ್‌ಲೈಟ್ ಡಿಸ್‌ಪ್ಲೇ ಒಳಗೊಂಡಿದೆ. ಜೊತೆಗೆ 405ppi ಪಿಕ್ಸೆಲ್ ಸಾಂದ್ರತೆ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಕೂಡ ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇದು ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಆಂಡ್ರಾಯ್ಡ್ 11 ಆಧಾರಿತ MIUI 12.5 ಔಟ್-ಆಫ್-ದಿ-ಬಾಕ್ಸ್ ಅನ್ನು ರನ್ ಮಾಡುತ್ತದೆ. ಹಾಗೆಯೇ 4GB RAM + 64GB ಮತ್ತು 4GB RAM + 128GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರೆಡ್ಮಿ 10 2022 ಸ್ಮಾರ್ಟ್‌ಫೋನ್‌ AI ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್‌ f/2.2 ಲೆನ್ಸ್‌ ಮತ್ತು 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಹೊಂದಿದೆ. ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಮತ್ತು ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿವೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ 10 2022 ಸ್ಮಾರ್ಟ್‌ಫೋನ್‌ 5,000mAhಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಮತ್ತು 9W ರಿವರ್ಸ್ ವೈರ್ಡ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.1, NFC, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌, AI ಫೇಸ್ ಅನ್‌ಲಾಕ್, GPS, A-GPS, ಗ್ಲೋನಾಸ್, ಬೀಡೌ, ಇ-ಕಂಪಾಸ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ 10 2022 ಸ್ಮಾರ್ಟ್‌ಫೋನ್‌ ಬಿಡುಗಡೆಯ ಬಗ್ಗೆ ಶಿಯೋಮಿ ಬ್ಲಾಗ್‌ನಲ್ಲಿ ಪೋಸ್ಟ್ ಮೂಲಕ ಘೋಷಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 9,990ರೂ.ಬೆಲೆಗೆ ಲಭ್ಯವಾಗಲಿದೆ. ಈ ಫೋನ್‌ ಇದೇ ಫೆಬ್ರವರಿ 21, 2022 ರಂದು ಮಾರಾಟವಾಗಲಿದೆ. ಇದು ಕಾರ್ಬನ್ ಗ್ರೇ, ಪೆಬಲ್ ವೈಟ್ ಮತ್ತು ಸೀ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

Best Mobiles in India

English summary
Redmi 10 2022 was silently launched in the global markets over the weekend
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+