Just In
Don't Miss
- Lifestyle
Today Rashi Bhavishya: ಸೋಮವಾರದ ದಿನ ಭವಿಷ್ಯ: ಕರ್ಕ, ತುಲಾ, ಕುಂಭ ರಾಶಿಯ ಉದ್ಯೋಗಿಗಳಿಗೆ ಶುಭ ದಿನ
- Sports
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ರೋಹಿತ್ ಶರ್ಮಾ ಕೋವಿಡ್ ವರದಿ ನೆಗೆಟಿವ್; ಟಿ20 ಸರಣಿಗೆ ರೆಡಿ
- Movies
ಗುಬ್ಬಿ ವೀರಣ್ಣ ಪುತ್ರಿ, ಹಿರಿಯ ನಟಿ ಹೇಮಲತಾ ನಿಧನ
- News
ISWA: ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರೊಂದಿಗೆ ಸಚಿವ ಪ್ರಲ್ಹಾದ್ ಜೋಶಿ ನಿಯೋಗ ಭೇಟಿ
- Finance
Gold Rate Today: ಚಿನ್ನ ಸ್ಥಿರ: ಪ್ರಮುಖ ನಗರಗಳಲ್ಲಿ ಜು.3ರಂದು ಬೆಲೆ ಎಷ್ಟು
- Automobiles
ಜೂನ್ ತಿಂಗಳಿನಲ್ಲಿ 4.84 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್
- Education
JNV Result 2022 : 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ
- Travel
ಕೆಮ್ಮಣ್ಣು ಗುಂಡಿ - ಒಂದು ಮನಮೋಹಕ ತಾಣ!
ಇಂದು ರೆಡ್ಮಿ 10 ಫೋನಿನ ಫಸ್ಟ್ ಸೇಲ್!..ಬೆಲೆ ಎಷ್ಟು?..ಕೊಡುಗೆ ಏನು?
ಶಿಯೋಮಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ 10 ಸ್ಮಾರ್ಟ್ಫೋನ್ ಆಕರ್ಷಕ ಫೀಚರ್ಸ್ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್ಫೋನ್ ಫಸ್ಟ್ ಸೇಲ್ ಇಂದು ಮಧ್ಯಾಹ್ನ 12 ರಿಂದ ಇ-ಕಾಮರ್ಸ್ ತಾಣ ಫ್ಲಿಪ್ಕಾರ್ಟ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್ಫೋನಿನ ಆರಂಭಿಕ 4GB RAM + 64GB ಸ್ಟೋರೇಜ್ನ ವೇರಿಯಂಟ್ ಬೆಲೆಯು 10,999 ರೂ.ಗಳು ಆಗಿದೆ.

ರೆಡ್ಮಿ 10 ಸ್ಮಾರ್ಟ್ಫೋನ್ ಮೊದಲ ಮಾರಾಟ ಇಂದು (ಮಾರ್ಚ್.24) ಪ್ರಾರಂಭವಾಗಲಿದೆ. ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಹಾಗೂ ಫಾಸ್ಟ್ ಚಾರ್ಜಿಂಗ್ ಬೆಂಬಲಿತ 6000 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 4GB RAM + 64GB ಮತ್ತು 6GB + 128GB ಆಗಿವೆ. ಕೆರಿಬಿಯನ್ ಗ್ರೀನ್, ಮಿಡ್ನೈಟ್ ಬ್ಲ್ಯಾಕ್ ಮತ್ತು ಪೆಸಿಫಿಕ್ ಬ್ಲೂ ಬಣ್ಣಗಳ ಆಯ್ಕೆ ಇದೆ. ಹಾಗಾದರೇ ರೆಡ್ಮಿ 10 ಫೋನಿನ ಫೀಚರ್ಸ್ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ 10 ಸ್ಮಾರ್ಟ್ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್ಡಿ ಡಿಸ್ಪ್ಲೇ ಹೊಂದಿದೆ. ಇನ್ನು ಈ ಡಿಸ್ಪ್ಲೇ 83.4% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿದೆ.
ಪ್ರೊಸೆಸರ್ ಪವರ್ ಯಾವುದು
ರೆಡ್ಮಿ 10 ಸ್ಮಾರ್ಟ್ಫೋನ್ ಮೀಡಿಯಾ ಟೆಕ್ ಹಿಲಿಯೋ G35 ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 4GB RAM + 64GB ಮತ್ತು 6GB + 128GB ಆಗಿವೆ. ಇದರೊಂದಿಗೆ ಎಸ್ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಸಹ ಪಡೆದಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ
ರೆಡ್ಮಿ 10 ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದ್ದು, ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ 5 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ
ರೆಡ್ಮಿ 10 ಸ್ಮಾರ್ಟ್ಫೋನ್ 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ G LTE, Wi-Fi 802.11ac, ಬ್ಲೂಟೂತ್ v5.0, GPS/ A-GPS, USB ಟೈಪ್-C ಮತ್ತು 3.5mm ಹೆಡ್ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಹಿಂಬದಿಯಲ್ಲಿ ಫಿಂಗರ್ಪ್ರಿಂಟ್ ಸಂವೇದಕವೂ ಇದೆ.
ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರೆಡ್ಮಿ 10 ಫೋನ್ ಎರಡು ವೇರಿಯಂಟ್ ಆಯ್ಕೆ ಪಡೆದಿದೆ. 4GB RAM + 64GB ಶೇಖರಣಾ ಮಾದರಿಗೆ 10,999 ರೂ. ಹಾಗೂ 6GB RAM + 128 GB ಸ್ಟೋರೇಜ್ ಆಯ್ಕೆಗೆ 12,999 ರೂ. ಆಗಿದೆ. ಹೊಂದಿದೆ. ಇನ್ನು ರೆಡ್ಮಿ 10 ಫೋನ್ ಮಾರ್ಚ್ ಮಾ. 24 (ಇಂದು) ಫಸ್ಟ್ ಸೇಲ್ ಶುರು ಮಾಡಲಿದೆ. ಕೆರಿಬಿಯನ್ ಗ್ರೀನ್, ಮಿಡ್ನೈಟ್ ಬ್ಲ್ಯಾಕ್ ಮತ್ತು ಪೆಸಿಫಿಕ್ ಬ್ಲೂ ಬಣ್ಣಗಳ ಆಯ್ಕೆ ಇದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086