Home
ಸುದ್ದಿಜಾಲ

ಭಾರತದಲ್ಲಿ ರೆಡ್ಮಿ 10 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ!

ಶಿಯೋಮಿ ಕಂಪೆನಿ ತನ್ನ ರೆಡ್ಮಿ ಬ್ರಾಂಡ್‌ ಹೆಸರಿನಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಬಹು ನಿರೀಕ್ಷಿತ ರೆಡ್ಮಿ 10 ಅನ್ನು ಭಾರತದಲ್ಲಿ ಪರಿಚಯಿಸಲು ಸಿದ್ಧತೆ ನೆಸಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಬರಲಿದೆ ಎನ್ನಲಾಗಿದ್ದು, ಇದೇ ಮಾರ್ಚ್ 17 ರಂದು ಬಿಡುಗಡೆ ಆಗಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G35 ಪ್ರೊಸೆಸರ್‌ನೊಂದಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ರೆಡ್ಮಿ 10 ಸ್ಮಾರ್ಟ್‌ಫೋನ್‌

ಹೌದು, ರೆಡ್ಮಿ ಕಂಪೆನಿಯ ಹೊಸ ರೆಡ್ಮಿ 10 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಇದೇ ತಿಂಗಳು ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಅನ್ನೊದು ಬಹಿರಂಗವಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸ ಹೊಂದಿರಲಿದೆ ಎನ್ನಲಾಗಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ 10 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 83.4% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಹೊಂದಿರುವ ಸಾದ್ಯತೆ ಇದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G35 ಪ್ರೊಸೆಸರ್‌ ಬಲವನ್ನು ಪಡೆದಿರಲಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹೊಂದಿರಲಿದೆ ಎನ್ನಲಾಗಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರೆಡ್ಮಿ 10 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 MP f/1.8 ಲೆನ್ಸ್‌, ಎರಡನೇ ಕ್ಯಾಮೆರಾ 8 MP f/2.2 ಲೆನ್ಸ್‌, ಮೂರನೇ ಕ್ಯಾಮೆರಾ 2 MP f/2.4 ಮ್ಯಾಕ್ರೋ ಲೆನ್ಸ್‌ ಮತ್ತು ನಾಲ್ಕನೇ ಕ್ಯಾಮೆರಾ 2 MP f/2.4 ಲೆನ್ಸ್‌ ಅನ್ನು ಹೊಂದಿರಲಿದೆ. ಇನ್ನು ಈ ಕ್ಯಾಮೆರಾ LED ಫ್ಲ್ಯಾಶ್, HDR, ಪನೋರಮಾ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದಲ್ಲದೆ 8 MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ 10 ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಹಾಗೂ 9W ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಒಳಗೊಂಡಿದೆ. ಜೊತೆಗೆ ಆಕ್ಸಿಲೆರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಹೊಂದಿರುವ ಸಾಧ್ಯತೆಯಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ 10 ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಬೆಲೆ 12,999 ರೂ. ಆಗಿರಲಿದೆ ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್ 17 ರಂದು ಬಿಡುಗಡೆ ಆಗಲಿದೆ. ಇದರ ಕಲರ್‌ ಆಯ್ಕೆಗಳ ಬಗ್ಗೆ ಯಾವುದೇ ವಿವರ ಲಭ್ಯವಾಗಿಲ್ಲ.

Best Mobiles in India

English summary
Redmi India has sent out invites for an event on March 17.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+