ರೆಡ್ಮಿ 10 ಪವರ್‌ ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

|

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ರೆಡ್ಮಿ ಬ್ರ್ಯಾಂಡ್‌ನ ಸ್ಮಾರ್ಟ್‌ಫೋನ್‌ಗಳು ವಿಶೇಷ ಸ್ಥಾನವನ್ನು ಪಡೆದಿವೆ. ತಮ್ಮ ವಿಭಿನ್ನವಾದ ಕ್ಯಾಮೆರಾ ಫೀಚರ್ಸ್‌ಗಳ ಮೂಲಕ ರೆಡ್ಮಿ ಕಂಪನಿ ತನ್ನ ಸ್ಥಾನವನ್ನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರೆಡ್ಮಿ 10 ಪವರ್‌ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಹೊಂದಿರುವ 6.7 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ.

ರೆಡ್ಮಿ

ಹೌದು, ರೆಡ್ಮಿ ಕಂಪೆನಿ ಭಾರತದಲ್ಲಿ ಹೊಸದಾಗಿ ರೆಡ್ಮಿ 10 ಪವರ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ 10 ಪವರ್ ಸ್ಮಾರ್ಟ್‌ಫೋನ್‌ 6.7 ಇಂಚಿನ HD+ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಹೊಂದಿದೆ. ಇದು 400 ನಿಟ್ಸ್ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇದು ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ನಲ್ಲಿ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ 3GB ವರೆಗಿನ ಇಂಟರ್‌ಬಿಲ್ಟ್‌ ಸ್ಟೋರೇಜ್‌ 3GB ವರೆಗೆ ಬಳಸಿಕೊಂಡು ಬಳಕೆದಾರರು ಲಭ್ಯವಿರುವ RAM ಅನ್ನು ವಾಸ್ತವಿಕವಾಗಿ ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ ವಿಸ್ತರಿಸಬಹುದಾಗಿದೆ 512GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರೆಡ್ಮಿ 10 ಪವರ್ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಜೊತೆಗೆ f/2.4 ಅಪರ್ಚರ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ 10 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಈ ಫೋನ್‌ ರಿಯರ್‌ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್ಮಿ 10 ಪವರ್‌ ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 14,999ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್‌ ಪವರ್ ಬ್ಲಾಕ್ ಮತ್ತು ಸ್ಪೋರ್ಟಿ ಆರೆಂಜ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಇದು ಯಾವಾಗ ಮಾರಾಟವಾಗಲಿದೆ ಎಂಬುದನ್ನು ಕಂಪನಿಯು ಇನ್ನೂ ಬಹಿರಂಗಪಡಿಸಿಲ್ಲ.

Best Mobiles in India

English summary
Redmi 10 Power price in India is set at Rs. 14,999 for the sole 8GB RAM + 128GB storage variant and it will be available in Power Black and Sporty Orange colour options.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X