Home
ಸುದ್ದಿಜಾಲ

ರೆಡ್ಮಿಯ ಈ ಹಳೆಯ ಜನಪ್ರಿಯ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ರೆಡ್ಮಿ ಮೊಬೈಲ್‌ ಸಂಸ್ಥೆಯು ಭಿನ್ನ ಫೋನ್‌ಗಳ ಮೂಲಕ ತನ್ನದೇ ಸ್ಥಾನ ಪಡೆದುಕೊಂಡಿದೆ. ಆ ಪೈಕಿ ರೆಡ್ಮಿ ಕಂಪನಿಯ ರೆಡ್ಮಿ 10 ಪ್ರೈಮ್‌ ಸ್ಮಾರ್ಟ್‌ಫೋನ್‌ ಗ್ರಾಹಕರ ಗಮನ ಸೆಳೆದ ಫೋನ್‌ಗಳಲ್ಲಿ ಒಂದು. ಇದೀಗ ರೆಡ್ಮಿ 10 ಪ್ರೈಮ್‌ ಫೋನ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ನಲ್ಲಿ ರೆಡ್ಮಿ 10 ಪ್ರೈಮ್‌ ಮೊಬೈಲ್‌ ಶೇ. 20% ರಷ್ಟು ನೇರ ಡಿಸ್ಕೌಂಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ 4 GB RAM + 64 GB ಸ್ಟೋರೇಜ್‌ ವೇರಿಯಂಟ್‌ 14,999ರೂ. ಬೆಲೆಯನ್ನು ಹೊಂದಿದ್ದು, ಆಫರ್‌ನಲ್ಲಿ ಇದು 11,999ರೂ. ಗಳಿಗೆ ಖರೀದಿಗೆ ಈಗ ಲಭ್ಯ ಇದೆ. ಹಾಗೆಯೇ ಗ್ರಾಹಕರಿಗೆ ಆಯ್ದ ಬ್ಯಾಂಕ್‌ ಆಫರ್‌ ಕೊಡುಗೆಗಳು ಸಹ ದೊರೆಯುತ್ತದೆ.

ರೆಡ್ಮಿಯ ಈ ಹಳೆಯ ಜನಪ್ರಿಯ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ರೆಡ್ಮಿ ಸಂಸ್ಥೆಯ ಈ ಮೊಬೈಲ್‌ ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್‌ ಕಾರ್ಯ ವೈಖರಿಯನ್ನು ಪಡೆದಿದ್ದು, ಇತ್ತೀಚಿನ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್‌ ಒಳಗೊಂಡಿದೆ. ಇದರ ಜೊತೆಗೆ 50ಎಂಪಿ ಮುಖ್ಯ ಕ್ಯಾಮೆರಾ ಪಡೆದಿದ್ದು, 16ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಹಾಗಾದರೇ ರೆಡ್ಮಿ 10 ಪ್ರೈಮ್‌ ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಹೇಗಿದೆ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ 10 ಪ್ರೈಮ್‌ ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9ರಚನೆಯ ಅನುಪಾತ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ರೆಡ್ಮಿಯ ಈ ಹಳೆಯ ಜನಪ್ರಿಯ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಈ ಡಿಸ್‌ಪ್ಲೇ 90Hz ಅಡಾಪ್ಟಿವ್ ರಿಫ್ರೆಶ್ ರೇಟ್‌ ಹೊಂದಿದ್ದು, ಅದು 45Hz, 60Hz ಮತ್ತು 90Hz ರಿಫ್ರೆಶ್ ರೇಟ್‌ಗಳ ನಡುವೆ ಬದಲಾಯಿಸಲು ಕಂಟೆಂಟ್ ಫ್ರೇಮ್‌ಗೆ ಹೊಂದಿಕೆಯಾಗುತ್ತದೆ.

ಪ್ರೊಸೆಸರ್‌ ಪವರ್ ಮಾಹಿತಿ

ರೆಡ್ಮಿ 10 ಪ್ರೈಮ್‌ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್‌ ಪವರ್‌ ಒಳಗೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ.

ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ 512GB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದರೊಂದಿಗೆ 2GB ವರೆಗಿನ RAM ವಿಸ್ತರಣೆಯ ಅವಕಾಶ ಸಹ ಪಡೆದಿದೆ.

ರೆಡ್ಮಿಯ ಈ ಹಳೆಯ ಜನಪ್ರಿಯ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಕ್ವಾಡ್‌ ಕ್ಯಾಮೆರಾ ಸೆನ್ಸಾರ್ ರಚನೆ

ರೆಡ್ಮಿ 10 ಪ್ರೈಮ್‌ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

ಇನ್ನು ಈ ಕ್ಯಾಮರಾ ರಚನೆ ಫುಲ್‌ ಹೆಚ್‌ಡಿ ವಿಡಿಯೋ ರೆಕಾರ್ಡಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಅಧಿಕ ಬ್ಯಾಟರಿ ಮತ್ತು ಇತರೆ ಸೌಲಭ್ಯ

ರೆಡ್ಮಿ 10 ಪ್ರೈಮ್‌ ಮೊಬೈಲ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಫಾಸ್ಟ್ ಚಾರ್ಜಿಂಗ್ ಅನ್ನು 22.5W ಚಾರ್ಜರ್ ಮತ್ತು 9W ವರೆಗೆ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್‌ v5.1, GPS, FM ರೇಡಿಯೋ, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಆಯ್ಕೆಗಳು ಪಡೆದಿದೆ.

Best Mobiles in India

English summary
REDMI 10 Prime 2022 received big price drop on flipkart. check offer price and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+