ರೆಡ್ಮಿ 10 ಪ್ರೈಮ್ ಫೋನ್ ಖರೀದಿಸಲು ಈಗ ಹೆಚ್ಚು ಹಣ ಖರ್ಚು ಮಾಡಬೇಕಿಲ್ಲ!
ಶಿಯೋಮಿ ಸಂಸ್ಥೆಯು ಬಜೆಟ್ ಪ್ರೈಸ್ ಟ್ಯಾಗ್‌ನಲ್ಲಿ ಹಲವು ಫೋನ್‌ಗಳನ್ನು ಹೊಂದಿದೆ. ಆ ಪೈಕಿ ಕಳೆದ ವರ್ಷ ಬಿಡುಗಡೆ ಮಾಡಿರುವ ರೆಡ್ಮಿ 10 ಪ್ರೈಮ್ ಫೋನ್ ಸಹ ಒಂದಾಗಿದೆ. ಇದೀಗ ಈ ಫೋನ್ ಭರ್ಜರಿ ಡಿಸ್ಕೌಂಟ್‌ನಲ್ಲಿ ಖರೀದಿಗೆ ಲಭ್ಯವಿದ್ದು, ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ.

ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್‌ನಲ್ಲಿ ರೆಡ್ಮಿ 10 ಪ್ರೈಮ್ ಫೋನ್ 13% ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ. ರಿಯಾಯಿತಿ ದರ, ಎಕ್ಸ್‌ಚೇಂಜ್ ಆಫರ್, ಬ್ಯಾಂಕ್ ಕೊಡುಗೆ ಒಳಗೊಂಡಂತೆ 4GB RAM + 64GB ಸ್ಟೋರೇಜ್ ವೇರಿಯಂಟ್ ಅನ್ನು ಗ್ರಾಹಕರು 10,000ರೂ. ಒಳಗೆ ಖರೀದಿ ಮಾಡಬಹುದು.

ಕೆಲವು ಬ್ಯಾಂಕ್‌ಗಳಿಂದ 1,250ರೂ. ಇನ್‌ಸ್ಟಂಟ್ ರಿಯಾಯತಿ ಲಭ್ಯವಾಗಲಿದ್ದು, ಹಾಗೆಯೇ ಅತ್ಯುತ್ತಮ ಎಕ್ಸ್‌ಚೇಂಜ್ ಕೊಡುಗೆ ಸಹ ಸಿಗಲಿದೆ. ಇನ್ನು ಇದಲ್ಲದೇ ನೋ ಕಾಸ್ಟ್ ಇಎಮ್‌ಐ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯಲಿದೆ. ಹಾಗಾದರೇ ಈ ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9ರಚನೆಯ ಅನುಪಾತ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, ಅದು 45Hz, 60Hz ಮತ್ತು 90Hz ರಿಫ್ರೆಶ್ ರೇಟ್‌ಗಳ ನಡುವೆ ಬದಲಾಯಿಸಲು ಕಂಟೆಂಟ್ ಫ್ರೇಮ್‌ಗೆ ಹೊಂದಿಕೆಯಾಗುತ್ತದೆ.

ಪ್ರೊಸೆಸರ್ ಪವರ್ ಯಾವುದು?
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ 2GB ವರೆಗಿನ RAM ವಿಸ್ತರಣೆಗೆ ಬೆಂಬಲಿಸಲಿದೆ.

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಕ್ಯಾಮರಾ ಸೆಟಪ್ ಫುಲ್ ಹೆಚ್‌ಡಿ ವಿಡಿಯೋ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ, ಇದು 10W ಫಾಸ್ಟ್ ಚಾರ್ಜಿಂಗ್ ಅನ್ನು 22.5W ಚಾರ್ಜರ್ ಮತ್ತು 9W ವರೆಗೆ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v5.1, GPS, FM ರೇಡಿಯೋ, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ.

ಮೆಮೊರಿ ಹಾಗೂ ಕಲರ್
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಬೆಲೆ 4GB RAM + 64GB ಸ್ಟೋರೇಜ್ ಹಾಗೂ 6GB RAM + 128GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಫೋನ್ ಆಸ್ಟ್ರಲ್ ವೈಟ್, ಬಿಫ್ರಾಸ್ಟ್ ವೈಟ್ ಮತ್ತು ಫ್ಯಾಂಟಮ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications