ರೆಡ್ಮಿ ಮೊಬೈಲ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಆಫರ್‌ನಲ್ಲಿ ಈ ಫೋನ್ ಲಭ್ಯ!
ಜನಪ್ರಿಯ ಶಿಯೋಮಿ ಕಂಪನಿಯ ಬಜೆಟ್ ಬೆಲೆಯಲ್ಲಿ ಹಲವು ಮೊಬೈಲ್‌ಗಳ ಆಯ್ಕೆ ಅನ್ನು ಗ್ರಾಹಕರಿಗೆ ನೀಡಿದೆ. ಆ ಪೈಕಿ ರೆಡ್ಮಿ 10 ಪ್ರೈಮ್ ಮೊಬೈಲ್ ಒಂದಾಗಿದ್ದು, ಇದು ತನ್ನ ವರ್ಗದಲ್ಲೇ ಆಕರ್ಷಕ ಫೀಚರ್ಸ್ ಪಡೆದಿದೆ. ಇದೀಗ ಈ ಮೊಬೈಲ್ ಭರ್ಜರಿ ಡಿಸ್ಕೌಂಟ್ ಪಡೆದಿದ್ದು, ಗ್ರಾಹಕರು ಆಫರ್‌ನಲ್ಲಿ ಖರೀದಿಸಬಹುದಾಗಿದೆ. ಅಂದಹಾಗೆ ಈ ಮೊಬೈಲ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್ ಪಡೆದಿದೆ.
ಹೌದು, ಇ ಕಾಮರ್ಸ್ ದೈತ್ಯ ಪ್ಲಾಟ್‌ಫಾರ್ಮ್ ಎನಿಸಿಕೊಂಡಿರುವ ಅಮೆಜಾನ್‌ನಲ್ಲಿ ರೆಡ್ಮಿ 10 ಪ್ರೈಮ್ ಫೋನ್ 23% ರಷ್ಟು ಡಿಸ್ಕೌಂಟ್ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 4GB RAM + 64GB ಆಂತರೀಕ ಸ್ಟೋರೇಜ್ ವೇರಿಯಂಟ್ ಬೆಲೆ 14,999ರೂ. ಗಳು ಆಗಿದ್ದು, ಕೊಡುಗೆಯಲ್ಲಿ 11,499ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಗ್ರಾಹಕರಿಗೆ ಹೆಚ್ಚುವರಿ ಕೊಡುಗೆ ಸಹ ದೊರೆಯುತ್ತದೆ. ಹಾಗಾದರೇ ಈ ರೆಡ್ಮಿ 10 ಪ್ರೈಮ್ ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ರೆಡ್ಮಿ 10 ಪ್ರೈಮ್ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ರೆಡ್ಮಿ 10 ಪ್ರೈಮ್ ಮೊಬೈಲ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9ರಚನೆಯ ಅನುಪಾತ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಪಡೆದಿದೆ.
ಈ ಡಿಸ್‌ಪ್ಲೇ 90Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, ಅದು 45Hz, 60Hz ಮತ್ತು 90Hz ರಿಫ್ರೆಶ್ ರೇಟ್‌ಗಳ ನಡುವೆ ಬದಲಾಯಿಸಲು ಕಂಟೆಂಟ್ ಫ್ರೇಮ್‌ಗೆ ಹೊಂದಿಕೆಯಾಗುತ್ತದೆ.
ರೆಡ್ಮಿ 10 ಪ್ರೈಮ್ ಪ್ರೊಸೆಸರ್ ಪವರ್ ಯಾವುದು : ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್ ಪವರ್ ಒಳಗೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ.
ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ 512GB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದರೊಂದಿಗೆ 2GB ವರೆಗಿನ RAM ವಿಸ್ತರಣೆಯ ಅವಕಾಶ ಸಹ ಪಡೆದಿದೆ.
ರೆಡ್ಮಿ 10 ಪ್ರೈಮ್ ಕ್ಯಾಮೆರಾ ಸೆನ್ಸಾರ್ ಸ್ಪೆಷಲ್ : ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.
ಇನ್ನು ಈ ಕ್ಯಾಮರಾ ಸೆಟಪ್ ಫುಲ್ ಹೆಚ್‌ಡಿ ವಿಡಿಯೋ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.
ರೆಡ್ಮಿ 10 ಪ್ರೈಮ್ ಬ್ಯಾಟರಿ ಮತ್ತು ಇತರೆ ಸೌಲಭ್ಯ : ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಫಾಸ್ಟ್ ಚಾರ್ಜಿಂಗ್ ಅನ್ನು 22.5W ಚಾರ್ಜರ್ ಮತ್ತು 9W ವರೆಗೆ ರಿವರ್ಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v5.1, GPS, FM ರೇಡಿಯೋ, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಆಯ್ಕೆಗಳು ಸೇರಿವೆ.


Click it and Unblock the Notifications








