ಶಿಯೋಮಿ ರೆಡ್ಮಿ ನೋಟ್ 10 ಪ್ರೈಮ್ ಬಿಡುಗಡೆಗೆ ಮುಹೂರ್ತ ಫಿಕ್ಸ್!
ಸದ್ಯ ಮೊಬೈಲ್ ಮಾರುಕಟ್ಟೆಗೆ ಪ್ರತಿಷ್ಠಿತ ಮೊಬೈಲ್ ಕಂಪನಿಗಳು ಭಿನ್ನ ಬೆಲೆಯ ಫೋನ್‌ಗಳನ್ನು ಲಾಂಚ್ ಮಾಡುತ್ತಲಿವೆ. ಅದರಲ್ಲಿಯೂ ಮುಖ್ಯವಾಗಿ ಬಜೆಟ್ ಬೆಲೆಯ ಫೋನ್‌ಗಳಿಗೆ ಹೆಚ್ಚಿನ ಒತ್ತು ನೀಡುತ್ತಿರುವುದನ್ನು ಗಮನಿಸಬಹುದು. ಆ ಪೈಕಿ ಈಗಾಗಲೇ ಹಲವು ಬಜೆಟ್ ದರದ ಫೋನ್‌ಗಳನ್ನು ಪರಿಚಯಿಸಿರುವ ಶಿಯೋಮಿ ಕಂಪನಿ ಸಹ ಕಾಣಿಸಿಕೊಂಡಿದೆ. ಶಿಯೋಮಿ ಇತ್ತೀಚಿಗಷ್ಟೆ ರೆಡ್ಮಿ ನೋಟ್ 10 ಸರಣಿಯ ಫೋನ್ ಮಾಡೆಲ್‌ಗಳನ್ನು ಬಿಡುಗಡೆ ಮಾಡಿ ಭಾರಿ ಸದ್ದು ಮಾಡಿದೆ. ಅದರ ಬೆನ್ನಲ್ಲೇ ಈಗ ಮತ್ತೆ ರೆಡ್ಮಿ ನೋಟ್ 10 ಸರಣಿಯಲ್ಲಿ ಈಗ ಹೊಸ ಫೋನ್ ಲಾಂಚ್ ಮಾಡಲು ಸಜ್ಜಾಗಿದೆ.

ಹೌದು, ಶಿಯೋಮಿ ಕಂಪನಿಯು ರೆಡ್ಮಿ ನೋಟ್ 10 ಸರಣಿಯಲ್ಲಿ ಈಗ ನೂತನವಾಗಿ ರೆಡ್ಮಿ ನೋಟ್ 10 ಪ್ರೈಮ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಅದೇ ಸೆಪ್ಟೆಂಬರ್ 3 ರಂದು ಅಧಿಕೃತವಾಗಿ ಅನಾವರಣ ಮಾಡಲಿದೆ. ಇದೊಂದು ಬಜೆಟ್ ಮಾದರಿಯ ಫೋನ್ ಆಗಿದ್ದು, 4GB + 64GB ಮತ್ತು 6GB + 128GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಜೊತೆಗೆ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದೆ. ಹಾಗಾದರೇ ಇನ್ನುಳಿದಂತೆ ರೆಡ್ಮಿ ನೋಟ್ 10 ಪ್ರೈಮ್ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗೆ
ರೆಡ್ಮಿ ನೋಟ್ 10 ಪ್ರೈಮ್ ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಫೋನಿನ ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಪಡೆದಿರಲಿದ್ದು, 20:9 ರಚನೆಯ ಅನುಪಾತವನ್ನು ಹೊಂದಿರಲಿದೆ.

ಪ್ರೊಸೆಸರ್ ಯಾವುದು
ರೆಡ್ಮಿ ನೋಟ್ 10 ಪ್ರೈಮ್ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್ ಅನ್ನು ಹೊಂದಿರಲಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುವ ಸಾಧ್ಯತೆಗಳಿವೆ. ಹಾಗೆಯೇ 4GB + 64GB ಮತ್ತು 6GB + 128GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆಗಳನ್ನು ಹೊಂದಿರಲಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೆ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಆಯ್ಕೆ ಇರಲಿದೆ.

ಕ್ವಾಡ್ ಕ್ಯಾಮೆರಾ ವಿಶೇಷತೆ
ರೆಡ್ಮಿ ನೋಟ್ 10 ಪ್ರೈಮ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಹೊಂದಿರಲಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ
ರೆಡ್ಮಿ ನೋಟ್ 10 ಪ್ರೈಮ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಹಾಗೆಯೇ ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ v5.0, ಇನ್ಫ್ರಾರೆಡ್ (ಐಆರ್), ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿರಲಿದೆ.

ಬೆಲೆ ಮತ್ತು ಲಭ್ಯತೆ
ರೆಡ್ಮಿ ನೋಟ್ 10 ಪ್ರೈಮ್ ಸ್ಮಾರ್ಟ್‌ಫೋನ್ 4GB RAM + 64 GB ಸ್ಟೋರೇಜ್ ರೂಪಾಂತರಕ್ಕೆ ಅಂದಾಜು 13,300ರೂ. ಬೆಲೆ ನಿಗದಿ ಮಾಡಬಹುದು ಎನ್ನಲಾಗಿದೆ. 6GB RAM + 128GB ಸ್ಟೋರೇಜ್ ಮಾದರಿಗೆ 16,600ರೂ.ಬೆಲೆ ನಿಗದಿಯಾಗಬಹುದು ಎಂದು ಊಹಿಸಲಾಗಿದೆ.


Click it and Unblock the Notifications








