ರೆಡ್ಮಿಯ ಈ ಜನಪ್ರಿಯ ಫೋನಿಗೆ ಇನ್ನೂ ಡಿಸ್ಕೌಂಟ್ ಇದೆ!..ಬೆಸ್ಟ್ ಆಫರ್!
ರೆಡ್ಮಿ ಮೊಬೈಲ್ ಸಂಸ್ಥೆಯ ಜನಪ್ರಿಯ ಸ್ಮಾರ್ಟ್‌ಫೊನ್‌ಗಳ ಪೈಕಿ ರೆಡ್ಮಿ 10 ಪ್ರೈಮ್ ಮೊಬೈಲ್ ಕೂಡಾ ಒಂದಾಗಿದೆ. ರೆಡ್ಮಿ 10 ಪ್ರೈಮ್ ಮೊಬೈಲ್ ಆಕರ್ಷಕ ಫೀಚರ್ಸ್‌ಗಳಿಂದ ಹಾಗೂ ಪ್ರೈಸ್‌ಟ್ಯಾಗ್‌ನಿಂದಾಗಿ ಮಾರುಕಟ್ಟೆಯಲ್ಲಿ ಡಿಮ್ಯಾಂಡ್ ಮೂಡಿಸಿತ್ತು. ಈ ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ರೆಡ್ಮಿ 10 ಪ್ರೈಮ್ ಮೊಬೈಲ್ ಶೇ. 13% ರಷ್ಟು ರಿಯಾಯಿತಿ ಹೊಂದಿದೆ. ಈ ಫೋನ್ 4GB RAM + 64GB ಬೆಲೆಯು 14,999ರೂ. ಗಳು ಆಗಿದ್ದು, ಸದ್ಯ ಅಮೆಜಾನ್ ಆಫರ್‌ನಲ್ಲಿ 12,999ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, 6,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದುಕೊಂಡಿದೆ.

ರೆಡ್ಮಿ 10 ಪ್ರೈಮ್ ಮೊಬೈಲ್ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿದೆ. ಹಾಗೆಯೇ ಮೈಕ್ರೊ ಎಸ್‌ಡಿ ಕಾರ್ಡ್ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಹಾಗಾದರೆ ರೆಡ್ಮಿ 10 ಪ್ರೈಮ್ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 10 ಪ್ರೈಮ್ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ರೆಡ್ಮಿ 10 ಪ್ರೈಮ್ ಮೊಬೈಲ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇಯು 20:9 ರಚನೆಯ ಅನುಪಾತ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ.
ರೆಡ್ಮಿ 10 ಪ್ರೈಮ್ ಪ್ರೊಸೆಸರ್ ಬಲ ಯಾವುದು : ರೆಡ್ಮಿ 10 ಪ್ರೈಮ್ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4GB RAM + 64GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ 512GB ವರೆಗೆ ಬಾಹ್ಯ ಸ್ಟೋರೇಜ್ ಅನ್ನು ವಿಸ್ತರಿಸಬಹುದಾಗಿದೆ.
ರೆಡ್ಮಿ 10 ಪ್ರೈಮ್ ಕ್ಯಾಮೆರಾ ಸೆನ್ಸಾರ್ ಎಷ್ಟು : ರೆಡ್ಮಿ 10 ಪ್ರೈಮ್ ಮೊಬೈಲ್ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್, ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ರೆಡ್ಮಿ 10 ಪ್ರೈಮ್ ಬ್ಯಾಟರಿ ಮತ್ತು ಇತರೆ ಆಯ್ಕೆಗಳು : ರೆಡ್ಮಿ 10 ಪ್ರೈಮ್ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 10W ಫಾಸ್ಟ್ ಚಾರ್ಜಿಂಗ್ ಅನ್ನು 22.5W ಚಾರ್ಜರ್ ಹಾಗೂ 9W ವರೆಗೆ ರಿವರ್ಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v5.1, GPS, FM ರೇಡಿಯೋ, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೌಲಭ್ಯಗಳು ಇವೆ.


Click it and Unblock the Notifications








