ಭಾರತಕ್ಕೆ ಎಂಟ್ರಿ ಕೊಟ್ಟ ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್! ಬೆಲೆ ಎಷ್ಟು?
ಭಾರತದ ಟೆಕ್ ಮಾರುಕಟ್ಟೆಯಲ್ಲಿ ಶಿಯೋಮಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ರೆಡ್‌ಮಿ ಬ್ರಾಂಡ್‌ನಲ್ಲಿ ಹೊಸ ರೆಡ್ಮಿ 10 ಪ್ರೈಮ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇನ್ನು ಈ ಹೊಸ ರೆಡ್‌ಮಿ ಫೋನ್ ಪಂಚ್-ಹೋಲ್ ಡಿಸ್‌ಪ್ಲೇ ವಿನ್ಯಾಸ, ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಪಡೆದುಕೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಶಿಯೋಮಿ ಕಂಪೆನಿ ಹೊಸ ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 90Hz ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ಸ್ಟೀರಿಯೋ ಸ್ಪೀಕರ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 12,499ರೂ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್‌ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9ರಚನೆಯ ಅನುಪಾತ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, ಅದು 45Hz, 60Hz ಮತ್ತು 90Hz ರಿಫ್ರೆಶ್ ರೇಟ್‌ಗಳ ನಡುವೆ ಬದಲಾಯಿಸಲು ಕಂಟೆಂಟ್ ಫ್ರೇಮ್‌ಗೆ ಹೊಂದಿಕೆಯಾಗುತ್ತದೆ.

ಪ್ರೊಸೆಸರ್ ಯಾವುದು?
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ 2GB ವರೆಗಿನ RAM ವಿಸ್ತರಣೆಗೆ ಬೆಂಬಲಿಸಲಿದೆ.

ಕ್ಯಾಮೆರಾ ವಿಶೇಷ
ರೆಡ್‌ಮಿ 10 ಪ್ರೈಮ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಕ್ಯಾಮರಾ ಸೆಟಪ್ ಫುಲ್ ಹೆಚ್‌ಡಿ ವಿಡಿಯೋ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ, ಇದು 10W ಫಾಸ್ಟ್ ಚಾರ್ಜಿಂಗ್ ಅನ್ನು 22.5W ಚಾರ್ಜರ್ ಮತ್ತು 9W ವರೆಗೆ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v5.1, GPS, FM ರೇಡಿಯೋ, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರೆಡ್‌ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಬೆಲೆ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 12,499ರೂ ಹಾಗೂ 6GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 14,499ರೂ, ಬೆಲೆ ಹೊಂದಿದೆ. ಇದು ಆಸ್ಟ್ರಲ್ ವೈಟ್, ಬಿಫ್ರಾಸ್ಟ್ ವೈಟ್ ಮತ್ತು ಫ್ಯಾಂಟಮ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಸೆಪ್ಟೆಂಬರ್ 7 ರಿಂದ ಅಮೆಜಾನ್, Mi.ಕಾಮ್, ಮಿ ಹೋಮ್ ಸ್ಟೋರ್ಸ್, ಮಿ ಸ್ಟುಡಿಯೋಸ್ ಮತ್ತು ದೇಶದಾದ್ಯಂತದ ಪ್ರಮುಖ ರಿಟೇಲ್ ಮಳಿಗೆಗಳಲ್ಲಿ ಮಾರಾಟವಾಗಲಿದೆ.


Click it and Unblock the Notifications








