Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ರೆಡ್ಮಿ 10 ಸ್ಮಾರ್ಟ್‌ಫೋನ್‌!

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ರೆಡ್ಮಿ ಕಂಪೆನಿ ತನ್ನದೇ ಆದ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ರೆಡ್ಮಿ 10 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ ನಾಚ್‌ ಅನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ರೆಡ್ಮಿ 10 ಸ್ಮಾರ್ಟ್‌ಫೋನ್‌

ಹೌದು, ರೆಡ್ಮಿ ಕಂಪೆನಿ ಭಾರತದಲ್ಲಿ ರೆಡ್ಮಿ 10 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 6,000mAh ಬ್ಯಾಟರಿ ಸಾಮರ್ಥ್ಯದವನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ 10 ಸ್ಮಾರ್ಟ್‌ಫೋನ್‌ 6.7 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರೆಡ್ಮಿ 10 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 13 ಜೊತೆಗೆ ರನ್ ಆಗುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ 2GB ವರೆಗೆ ಇಂಟರ್‌ಬಿಲ್ಟ್‌ ಸ್ಟೋರೇಜ್‌ ಬಳಸಿಕೊಂಡು ವಾಸ್ತವಿಕವಾಗಿ RAM ಅನ್ನು ವಿಸ್ತರಿಸಬಹುದು. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರೆಡ್ಮಿ 10 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಕ್ಯಾಮರಾ ಸೆಟಪ್ ಅನ್ನು ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ 10 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರ ಬಂಡಲ್ ಚಾರ್ಜರ್ 10W ವರೆಗೆ ಚಾರ್ಜ್ ಮಾಡುವುದನ್ನು ಮಾತ್ರ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, GPS/ A-GPS, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್ಮಿ 10 ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 4GB RAM + 64GB ಸ್ಟೋರೇಜ್ ಆಯ್ಕೆಗೆ 10,999ರೂ.ಬೆಲೆ ಹೊಂದಿದೆ. ಇನ್ನು ಈ ಫೋನ್ 6GB + 128GB ಮಾದರಿಯ ಆಯ್ಕೆಗೆ 12,999ರೂ.ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌, ಮಿ.ಕಾಮ್‌, ಮಿ ಹೋಮ್‌ ಮೂಲಕ ಮಾರ್ಚ್ 24 ರಂದು ಮಧ್ಯಾಹ್ನ 12 ಗಂಟೆಯಿಂದ ಮಾರಾಟವಾಗಲಿದೆ. ಇದು ಕೆರಿಬಿಯನ್ ಗ್ರೀನ್, ಮಿಡ್‌ನೈಟ್ ಬ್ಲಾಕ್ ಮತ್ತು ಪೆಸಿಫಿಕ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ.

ಲಾಂಚ್‌ ಆಫರ್‌

ಲಾಂಚ್‌ ಆಫರ್‌

ಇನ್ನು ರೆಡ್ಮಿ 10 ಲಾಂಚ್‌ ಆಫರ್‌ನಲ್ಲಿ HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ EMI ಗಳನ್ನು ಬಳಸುವ ಗ್ರಾಹಕರಿಗೆ 1,000 ತ್ವರಿತ ರಿಯಾಯಿತಿ ಸಿಗಲಿದೆ.

Best Mobiles in India

English summary
Redmi 10 price in India has been set at Rs. 10,999 for the base 4GB RAM + 64GB storage variant.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+