ಭಾರತದಲ್ಲಿ ರೆಡ್ಮಿ 10A ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಬಹಿರಂಗ!
ಶಿಯೋಮಿ ಕಂಪೆನಿ ತನ್ನ ರೆಡ್ಮಿ ಬ್ರಾಂಡ್‌ನಲ್ಲಿ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರೆಡ್ಮಿ 10A ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಏಪ್ರಿಲ್ 20 ರಂದು ಅಧಿಕೃತವಾಗಲಿದೆ ಎಂದು ಅಮೆಜಾನ್ ಇಂಡಿಯಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಈಗಾಗಲೇ ಚೀನಾದಲ್ಲಿ ಲಭ್ಯವಿದೆ. ಅದೇ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿಯೂ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಹೌದು, ಶಿಯೋಮಿ ಕಂಪೆನಿಯ ರೆಡ್ಮಿ 10A ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಬಹಿರಂಗವಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.53 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G25 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ
ರೆಡ್ಮಿ 10A ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 400nits ಬ್ರೈಟ್ನೆಸ್ ಸಾಮರ್ಥ್ಯ ಪಡೆದಿದೆ. ಇದಲ್ಲದೆ ಈ ಡಿಸ್‌ಪ್ಲೇ ಪ್ಯಾನೆಲ್ ಮುಂಭಾಗದ ಸೆಲ್ಫಿ ಶೂಟರ್ ಅನ್ನು ವಾಟರ್‌ಡ್ರಾಪ್ ನಾಚ್‌ನೊಳಗೆ ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G25 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಶ್ ಸೌಲಭ್ಯ ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ 10A ಸ್ಮಾರ್ಟ್‌ಫೋನ್ 10W ಚಾರ್ಜಿಂಗ್‌ಗೆ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, ಮೈಕ್ರೋ-USB ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ರೆಡ್ಮಿ 10A ಸ್ಮಾರ್ಟ್‌ಫೋನ್ ಭಾರತದಲ್ಲಿ 10,000ರೂ.ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಫೋನ್ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸ್ಟೋರೇಜ್ ಸಾಮರ್ಥ್ಯುದ ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ. ಇದು ಕೆಲವು ದೇಶಗಳಲ್ಲಿ ಈಗಾಗಲೇ ಬಿಡುಗಡೆ ಆಗಿದ್ದು, 4GB + 64GB, 4GB + 128GB, ಮತ್ತು 6GB + 128GB ಸ್ಟೋರೇಜ್‌ನಲ್ಲಿ ಲಭ್ಯವಿದೆ. ಆ ಪೈಕಿ 4GB + 64GB ಬೆಲೆ RMB 649 (ಭಾರತದಲ್ಲಿ ಅಂದಾಜು ರೂ 7,740). ಇನ್ನು ರೆಡ್ಮಿ 10A ಫೋನ್ 4GB + 128GB ಮತ್ತು 6GB + 128GB ರೂಪಾಂತರವು ಕ್ರಮವಾಗಿ RMB 799 (ಅಂದಾಜು ರೂ. 9,500) ಮತ್ತು RMB 899 (ಅಂದಾಜು ರೂ. 10,720) ಆಗಿದೆ.


Click it and Unblock the Notifications








