ಅಗ್ಗದ ಬೆಲೆಯ ರೆಡ್ಮಿ 10A ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ಭಾರತದ ಟೆಕ್ ಮಾರುಕಟ್ಟೆಯಲ್ಲಿ ಶಿಯೋಮಿ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ತನ್ನ ರೆಡ್ಮಿ ಬ್ರಾಂಡ್‌ನಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರೆಡ್ಮಿ 10A ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.53 ಇಂಚಿನ HD+ LCD ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್ ಹಿಲಿಯೋ G25SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.

ಹೌದು, ಶಿಯೋಮಿ ಕಂಪೆನಿ ಭಾರತದಲ್ಲಿ ಹೊಸ ರೆಡ್ಮಿ 10A ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಈ ಸ್ಮರ್ಟ್‌ಫೋನ್ ಆರಂಭಿಕ ಬೆಲೆ 8,499ರೂ.ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ 10A ಸ್ಮಾರ್ಟ್‌ಫೋನ್ 720×1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 400ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್ ವಿನ್ಯಾಸವನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ರೆಡ್ಮಿ 10A ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G25SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಆಧಾರಿತ MIUI 12.5 ಕಸ್ಟಮ್ ಸ್ಕಿನ್ ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM + 32GB ಮತ್ತು 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ವಿಶೇಷ
ರೆಡ್ಮಿ 10A ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾ LED ಫ್ಲ್ಯಾಷ್‌ನೊಂದಿಗೆ ಸಂಯೋಜಿಸಲ್ಪಟ್ಟಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ 10A ಸ್ಮಾರ್ಟ್‌ಫೋನ್ 10W ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 b/g/n, ಬ್ಲೂಟೂತ್ 5, ಮತ್ತು GPS ಹಾಗೂ ಮೈಕ್ರೋ-ಯುಎಸ್‌ಬಿ ಪೋರ್ಟ್ ಜೊತೆಗೆ 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರೆಡ್ಮಿ 10A ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 3GB RAM + 32GB ಸ್ಟೋರೇಜ್ ರೂಪಾಂತರಕ್ಕಾಗಿ 8,499ರೂ.ಬೆಲೆ ಹೊಂದಿದೆ. ಹಾಗೆಯೇ ಈ ಫೋನ್ 4GB + 64GB ಆವೃತ್ತಿಯ ಆಯ್ಕೆಗೆ 9,499ರೂ. ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 26 ರಿಂದ ಮಧ್ಯಾಹ್ನ 12 ಗಂಟೆಗೆ ಶಿಯೋಮಿ ವೆಬ್‌ಸೈಟ್ ಮತ್ತು ಅಧಿಕೃತ ಮಳಿಗೆಗಳ ಮೂಲಕ ಮಾರಾಟಕ್ಕೆ ಬರಲಿದೆ. ಇದು ಚಾರ್ಕೋಲ್ ಬ್ಲ್ಯಾಕ್, ಸೀ ಬ್ಲೂ ಮತ್ತು ಸ್ಲೇಟ್ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ಟೆಕ್ಸ್ಚರ್ಡ್ ರಿಯರ್ ಪ್ಯಾನೆಲ್ ಸ್ಮಡ್ಜ್-ಫ್ರೀ ಆಗಿ ಲಭ್ಯವಾಗಲಿದೆ ಎಂದು ಶಿಯೋಮಿ ಕಂಪೆನಿ ಹೇಳಿದೆ.


Click it and Unblock the Notifications








