ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಟ್ಟ ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್!
ಟೆಕ್ ಮಾರುಕಟ್ಟೆಯಲ್ಲಿ ಶಿಯೋಮಿ ರೆಡ್ಮಿ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಬೇಡಿಕೆ ಇದೆ. ತಮ್ಮ ವಿಭಿನ್ನ ವಿನ್ಯಾಸ ಹಾಗೂ ಆಕರ್ಷಕ ಪೀಚರ್ಸ್‌ಗಳಿಂದಾಗಿ ರೆಡ್ಮಿ ಫೋನ್‌ಗಳು ಗ್ರಾಹಕರ ಗಮನ ಸೆಳೆದಿವೆ. ಸದ್ಯ ಇದೀಗ ರೆಡ್ಮಿ ಕಂಪೆನಿ ಭಾರತದಲ್ಲಿ ತನ್ನ ರೆಡ್ಮಿ 10A ಸರಣಿಯ ಹೊಸ ರೆಡ್ಮಿ 10A ಸ್ಪೋರ್ಟ್ ಅನ್ನು ಲಾಂಚ್ ಮಾಡಿದೆ. ಇದು ಅಗ್ಗದ ಬೆಲೆಯನ್ನು ಪಡೆದುಕೊಂಡಿದ್ದು, ರೆಡ್ಮಿ 9A ಸ್ಪೋರ್ಟ್ ಫೋನಿನ ಉತ್ತರಾಧಿಕಾರಿಯಾಗಿದೆ. ಇನ್ನು ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್ ಅನ್ನು ಹೊಂದಿದೆ.

ಹೌದು, ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ರೆಡ್ಮಿ 10A ಸ್ಮಾರ್ಟ್‌ಫೋನ್ ಒಳಗೊಂಡಿರುವ ಫೀಚರ್ಸ್‌ಗಳನ್ನೇ ಒಳಗೊಂಡಿದೆ. ಆದರೆ RAM ಮತ್ತು ಇನ್‌ಬಿಲ್ಟ್ ಸ್ಟೋರೇಜ್ ವಿಚಾರದಲ್ಲಿ ವಿಭಿನ್ನತೆ ಹೊಂದಿದೆ. ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್ ಸಿಂಗಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡದಿದೆ. ಇದು ಎಲ್‌ಇಡಿ ಫ್ಲ್ಯಾಷ್ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಇನ್ನು ರೆಡ್ಮಿ 10A ಸ್ಮಾರ್ಟ್‌ಫೋನ್ ವಾಟರ್ ಡ್ರಾಪ್ ಸ್ಟೈಲ್ ನಾಚ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 10,999ರೂ.ಬೆಲೆಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್ ಮತ್ತು ಮಿ.ಕಾಮ್ ಮೂಲಕ ಖರೀದಿಗೆ ಲಭ್ಯವಿದೆ. ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್ ಚಾರ್ಕೋಲ್ ಬ್ಲ್ಯಾಕ್, ಸೀ ಬ್ಲೂ ಮತ್ತು ಸ್ಲೇಟ್ ಗ್ರೇ ಕಲರ್ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನಿನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್ 6.53-ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 20:9 ರಚನೆಯ ಅನುಪಾತ ಮತ್ತು ವಾಟರ್‌ಡ್ರಾಪ್-ಸ್ಟೈಲ್ ನಾಚ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 1500:1 ಕಾಂಟ್ರಾಸ್ಟ್ ಅನುಪಾತ ಮತ್ತು 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದು 70% NTSC ಬಣ್ಣದ ಹರವುಗಳನ್ನು ಒಳಗೊಂಡಿದೆ ಮತ್ತು TÜV ರೈನ್‌ಲ್ಯಾಂಡ್ ಪ್ರಮಾಣೀಕರಿಸಿದ ರೀಡಿಂಗ್ ಮೋಡ್ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್ ಯಾವುದು?
ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ G25 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್-ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 512MBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್ ಹೇಗಿದೆ?
ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದು f/2.2 ದ್ಯುತಿರಂಧ್ರ ಮತ್ತು LED ಫ್ಲ್ಯಾಷ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ f/2.2 ಲೆನ್ಸ್‌ನೊಂದಿಗೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ವೀಡಿಯೋ ಕರೆ ಮತ್ತು ಸೆಲ್ಫಿ ಫೊಟೋ ತೆಗೆದುಕೊಳ್ಳುವುದಕ್ಕೆ ಉತ್ತಮ ಅನುಭವವನ್ನು ನೀಡಲಿದೆ.

ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?
ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 b/g/n, ಬ್ಲೂಟೂತ್ v5, ಮತ್ತು GPS/ A-GPS ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಮೈಕ್ರೋ-ಯುಎಸ್‌ಬಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್ 164.9x77.07x9mm ಅಳತೆಯನ್ನು ಹೊಂದಿದ್ದು, 194g ತೂಕವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದ ಮಾರುಕಟ್ಟೆಯಲ್ಲಿ ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ಆಯ್ಕೆಗೆ 10,999ರೂ. ಬೆಲೆಯನ್ನು ಹೊಂದಿದೆ. ಇದು ಬಜೆಟ್ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್ ಆಗಿದ್ದು, ಅಮೆಜಾನ್ ಮತ್ತು ಮಿ.ಕಾಮ್ ಮೂಲಕ ಪ್ರಸ್ತುತ ಖರೀದಿಸಬಹುದಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಚಾರ್ಕೋಲ್ ಬ್ಲ್ಯಾಕ್, ಸೀ ಬ್ಲೂ ಮತ್ತು ಸ್ಲೇಟ್ ಗ್ರೇ ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಇನ್ನು ಇದೇ ವರ್ಷ ಏಪ್ರಿಲ್ ತಿಂಗಳಿನಲ್ಲಿ ಭಾರತದಲ್ಲಿ ರೆಡ್ಮಿ 10A ಸ್ಮಾರ್ಟ್‌ಫೋನ್ ಪರಿಚಯಿಸಲಾಗಿತ್ತು. ಈ ಸ್ಮಾರ್ಟ್‌ಫೋನ್ ಕೂಡ 6.53 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 400ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G25SoC ಪ್ರೊಸೆಸರ್ ಬಲವನ್ನು ಪಡೆದಿದೆ. ಹಾಗೆಯೇ 3GB RAM + 32GB ಮತ್ತು 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 10W ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 b/g/n, ಬ್ಲೂಟೂತ್ 5, ಮತ್ತು GPS ಹಾಗೂ ಮೈಕ್ರೋ-ಯುಎಸ್‌ಬಿ ಪೋರ್ಟ್ ಜೊತೆಗೆ 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.


Click it and Unblock the Notifications








