Just In
Don't Miss
- Lifestyle
Today Rashi Bhavishya: ಸೋಮವಾರದ ದಿನ ಭವಿಷ್ಯ: ಕರ್ಕ, ತುಲಾ, ಕುಂಭ ರಾಶಿಯ ಉದ್ಯೋಗಿಗಳಿಗೆ ಶುಭ ದಿನ
- Sports
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ರೋಹಿತ್ ಶರ್ಮಾ ಕೋವಿಡ್ ವರದಿ ನೆಗೆಟಿವ್; ಟಿ20 ಸರಣಿಗೆ ರೆಡಿ
- Movies
ಗುಬ್ಬಿ ವೀರಣ್ಣ ಪುತ್ರಿ, ಹಿರಿಯ ನಟಿ ಹೇಮಲತಾ ನಿಧನ
- News
ISWA: ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರೊಂದಿಗೆ ಸಚಿವ ಪ್ರಲ್ಹಾದ್ ಜೋಶಿ ನಿಯೋಗ ಭೇಟಿ
- Finance
Gold Rate Today: ಚಿನ್ನ ಸ್ಥಿರ: ಪ್ರಮುಖ ನಗರಗಳಲ್ಲಿ ಜು.3ರಂದು ಬೆಲೆ ಎಷ್ಟು
- Automobiles
ಜೂನ್ ತಿಂಗಳಿನಲ್ಲಿ 4.84 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್
- Education
JNV Result 2022 : 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ
- Travel
ಕೆಮ್ಮಣ್ಣು ಗುಂಡಿ - ಒಂದು ಮನಮೋಹಕ ತಾಣ!
ಅಧಿಕ ಬ್ಯಾಟರಿ ಬಲದೊಂದಿಗೆ ರೆಡ್ಮಿ 10A ಸ್ಮಾರ್ಟ್ಫೋನ್ ಬಿಡುಗಡೆ!
ಶಿಯೋಮಿ ಕಂಪನಿಯ ಬಹುನಿರೀಕ್ಷಿತ ರೆಡ್ಮಿ 10A ಸ್ಮಾರ್ಟ್ಫೋನ್ ಬಿಡುಗಡೆ ಆಗಿದೆ. ಈ ಸ್ಮಾರ್ಟ್ಫೋನ್ ಬಜೆಟ್ ಪ್ರೈಸ್ ಟ್ಯಾಗ್ನಲ್ಲಿ ಕಾಣಿಸಿಕೊಂಡಿದ್ದು, ಆಕರ್ಷಕ ಫೀಚರ್ಸ್ಗಳನ್ನು ಪಡೆದಿದೆ. 5000mAh ಬ್ಯಾಟರಿ ಬ್ಯಾಕ್ಅಪ್ ಪಡೆದಿದ್ದು, ಮೀಡಿಯಾ ಟೆಕ್ ಹಿಲಿಯೋ G25 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ಆಕರ್ಷಕ ಕ್ಯಾಮೆರಾ, ಫಿಂಗರ್ಸೆನ್ಸಾರ್ ಆಯ್ಕೆ ಸಹ ಒಳಗೊಂಡಿದೆ.

ಹೌದು, ಶಿಯೋಮಿ ಕಂಪೆನಿ ತನ್ನ ರೆಡ್ಮಿ 10A ಸ್ಮಾರ್ಟ್ಫೋನ್ ಅನ್ನು ಇದೀಗ ಮಾರುಕಟ್ಟೆಗೆ ಪರಿಚಯಿಸಿದೆ. ಈ ಸ್ಮಾರ್ಟ್ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್ಅಪ್ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ಈ ಫೋನಿನ ಡಿಸ್ಪ್ಲೇಯು 400nits ಬ್ರೈಟ್ನೆಸ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಬ್ಲ್ಯಾಕ್, ಬ್ಲೂ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯನ್ನು ಈ ಫೋನ್ ಪಡೆದಿದೆ. ಹಾಗಾದರೇ ರೆಡ್ಮಿ 10A ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ಗಳನ್ನು ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ 10A ಸ್ಮಾರ್ಟ್ಫೋನ್ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53 ಇಂಚಿನ ಫುಲ್ ಹೆಚ್ಡಿ + ಎಲ್ಸಿಡಿ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, 400nits ಬ್ರೈಟ್ನೆಸ್ ಸಾಮರ್ಥ್ಯ ಪಡೆದಿದೆ. ಡಿಸ್ಪ್ಲೇ ಪ್ಯಾನೆಲ್ ಮುಂಭಾಗದ ಸೆಲ್ಫಿ ಶೂಟರ್ ಅನ್ನು ವಾಟರ್ಡ್ರಾಪ್ ನಾಚ್ನೊಳಗೆ ಹೊಂದಿದೆ.
ಪ್ರೊಸೆಸರ್ ಪವರ್ ಯಾವುದು
ರೆಡ್ಮಿ 10A ಸ್ಮಾರ್ಟ್ಫೋನ್ ಮೀಡಿಯಾ ಟೆಕ್ ಹಿಲಿಯೋ G25 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಇತ್ತೀಚಿನ ಆಂಡ್ರಾಯ್ಡ್ ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಫೋನ್ ಮೂರು ವೇರಿಯಂಟ್ ಮಾದರಿಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB + 64GB, 4GB + 128GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿವೆ.

ಕ್ಯಾಮೆರಾ ಸೆನ್ಸಾರ್ ವಿಶೇಷ
ರೆಡ್ಮಿ 10A ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಜೊತೆಗೆ ಎಲ್ಇಡಿ ಫ್ಲ್ಯಶ್ ಸೌಲಭ್ಯ ಸಹ ನೀಡಲಾಗಿದೆ.
ಬ್ಯಾಟರಿ ಬ್ಯಾಕ್ಅಪ್ ಬಲ
ರೆಡ್ಮಿ 10A ಸ್ಮಾರ್ಟ್ಫೋನ್ 5000mAh ಬ್ಯಾಟರಿ ಬ್ಯಾಕ್ಅಪ್ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಇದು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಮೈಕ್ರೋ-ಯುಎಸ್ಬಿ ಪೋರ್ಟ್ ಅನ್ನು ಹೊಂದಿದೆ. ಹ್ಯಾಂಡ್ಸೆಟ್ ಮೀಸಲಾದ ಮೈಕ್ರೊ-ಎಸ್ಡಿ ಕಾರ್ಡ್ ಸ್ಲಾಟ್, ಹಿಂಭಾಗದಲ್ಲಿ ಜೋಡಿಸಲಾದ ಫಿಂಗರ್ಪ್ರಿಂಟ್ ಸ್ಕ್ಯಾನರ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಸಹ ನೀಡುತ್ತದೆ.
ಬೆಲೆ ಮತ್ತು ಲಭ್ಯತೆ
ರೆಡ್ಮಿ 10A ಸ್ಮಾರ್ಟ್ಫೋನ್ ಮೂರು ಕಾನ್ಫಿಗರೇಶನ್ಗಳಲ್ಲಿ ಬಿಡುಗಡೆ ಆಗಿದೆ. ಅವುಗಳು 4GB + 64GB, 4GB + 128GB, ಮತ್ತು 6GB + 128GB ಆಗಿವೆ. ಆ ಪೈಕಿ 4GB + 64GB ಬೆಲೆ RMB 649 (ಭಾರತದಲ್ಲಿ ಅಂದಾಜು ರೂ 7,740). ಇನ್ನು ರೆಡ್ಮಿ 10A ಫೋನ್ 4GB + 128GB ಮತ್ತು 6GB + 128GB ರೂಪಾಂತರವು ಕ್ರಮವಾಗಿ RMB 799 (ಅಂದಾಜು ರೂ. 9,500) ಮತ್ತು RMB 899 (ಅಂದಾಜು ರೂ. 10,720) ಆಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086