Home
ಸುದ್ದಿಜಾಲ

ಶಿಯೋಮಿ ಸಂಸ್ಥೆಯಿಂದ 10X Pro 5G ಸ್ಮಾರ್ಟ್‌ಫೋನ್‌ ಬಿಡುಗಡೆ!

ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಅಲ್ಲದೆ ತನ್ನ ರೆಡ್‌ಮಿ ಬ್ರ್ಯಾಂಡ್‌ ಅಡಿಯಲ್ಲಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯವನ್ನ ಸಾಧಿಸಿದೆ. ಸದ್ಯ ಇದೀಗ ಮಾರುಕಟ್ಟೆಗೆ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ತನ್ನ ಹೊಸ ರೆಡ್‌ಮಿ 10X 5G ಮತ್ತು ರೆಡ್‌ಮಿ 10X ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. ಸದ್ಯ ರೆಡ್‌ಮಿ ಕಂಪೆನಿ ಬಿಡುಗಡೆ ಮಾಡಿರುವ ಹೊಸ ಸ್ಮಾರ್ಟ್‌ಫೋನ್‌ಗಳು ಮೀಡಿಯಾ ಟೆಕ್ ಡೈಮೆನ್ಸಿಟಿ 820 SoC ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸಲಿವೆ. ಇನ್ನು ರೆಡ್ಮಿ ಬಿಡುಗಡೆ ಮಾಡಿರುವ ರೆಡ್‌ಮಿ 10X 5G ಮತ್ತು ರೆಡ್‌ಮಿ 10X ಪ್ರೊ 5G ಸ್ಮಾರ್ಟ್‌ಫೋನ್‌ಗಳಲ್ಲಿ ರೆಡ್‌ಮಿ 10X ಪ್ರೊ 5G ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿರಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ 10X ಪ್ರೊ 5G ಸ್ಮಾರ್ಟ್‌ಫೋನ್‌

ರೆಡ್ಮಿ 10X ಪ್ರೊ 5G ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.57-ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಎಲ್‌ಸಿಡಿ ವಿನ್ಯಾಸವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು HDR 10 ಮತ್ತು 600 ನಿಟ್ಸ್ ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ. ಇದಲ್ಲದೆ ವೀಡಿಯೋ ಕರೆಗಳು ಹಾಗೂ ವೀಡಿಯೊ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ 7nm ಮೀಡಿಯಾಟೆಕ್ ಡೈಮೆನ್ಸಿಟಿ 820 ಪ್ರೊಸೆಸರ್ ಅನ್ನು ಹೊಂದಿದೆ, ಮಾಲಿ-ಜಿ 57 ಎಂಸಿ 5 ಜಿಪಿಯು ಸಹ ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್ 10 ಆಧಾರಿತ ಎಂಐಯುಐ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸುವ ಅವಕಾಶದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಶೂಟರ್ 3 ಎಕ್ಸ್ ಆಪ್ಟಿಕಲ್ ಜೂಮ್, 5 ಎಕ್ಸ್ ಹೈಬ್ರಿಡ್ ಜೂಮ್ ಮತ್ತು 30 ಎಕ್ಸ್ ಡಿಜಿಟಲ್ ಜೂಮ್ ಅನ್ನು ಬೆಂಬಲಿಸುತ್ತದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಕ್ಯಾಮೆರಾ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ 10x ಪ್ರೊ ಸ್ಮಾರ್ಟ್‌ಫೋನ್‌ 4W520mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 5.1, 3.5 ಎಂಎಂ ಆಡಿಯೊ ಜ್ಯಾಕ್, ಯುಎಸ್‌ಬಿ ಟೈಪ್-ಸಿ ಪೋರ್ಟ್, ಮತ್ತು ವೈ-ಫೈ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ರೆಡ್‌ಮಿ 10 Xಪ್ರೊ 5G, ಸ್ಮಾರ್ಟ್‌ಫೋನ್‌ 8GB RAM + 256GB ಮಾದರಿಗೆ CNY 2,399 (ಸರಿಸುಮಾರು 25,400 ರೂ.) ಬೆಲೆಯನ್ನ ನಿಗಧಿಪಡಿಸಲಾಗಿದೆ. ಅಲ್ಲದೆ 8GB RAM + 256GB ಶೇಖರಣಾ ಆಯ್ಕೆಗೆ CNY 2,599 (ಸರಿಸುಮಾರು 25,500 ರೂ.) ಬೆಲೆಯನ್ನ ನಿಗಧಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲೂ, ವೈಲೆಟ್, ಗೋಲ್ಡ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ರೆಡ್‌ಮಿ 10X 4G ಮಾದರಿಯು 4GB RAM + 128GB ಶೇಖರಣಾ ಆಯ್ಕೆಗೆ ಸಿಎನ್‌ವೈ 999 (ಸರಿಸುಮಾರು ರೂ. 10,500)ಬೆಲೆಯನ್ನ ಹೊಂದಿದೆ.

Best Mobiles in India

English summary
Redmi 10X Pro 5G are official. Unveiled in China, the latest additions to Redmi's smartphone portfolio run on MediaTek Dimensity 820 SoC and pack 4,520mAh battery.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+