ಶಿಯೋಮಿ ರೆಡ್ಮಿ 10X ಸರಣಿ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಬಹಿರಂಗ!

|

ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿ ಸಂಚಲನ ಸೃಷ್ಟಿಸುವಲ್ಲಿ ಶಿಯೋಮಿ ಸೈ ಎನಿಸಿಕೊಂಡಿದೆ. ಇನ್ನ ತನ್ನ ರೆಡ್‌ಮಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರೋ ಶಿಯೊಮಿ ಇದೀಗ ಮತ್ತೊಂದು ಹೊಸ ರೆಡ್‌ಮಿ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಶಿಯೋಮಿ

ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪೆನಿ ಶಿಯೋಮಿ ತನ್ನ ಹೊಸ ಶಿಯೋಮಿ ರೆಡ್‌ಮಿ 10X ಸರಣಿಯ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇನ್ನು ಈ ಸರಣಿಯಲ್ಲಿ ರೆಡ್‌ಮಿ 10X ಪ್ರೊ 5G ಮತ್ತು ಬೇಸ್ 10X ಅನ್ನು ಬಿಡುಗಡೆ ಮಾಡಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸರಣಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾದ ರೆಡ್‌ಮಿ 10X ಪ್ರೊ 5G ಮೀಡಿಯಾ ಟೆಕ್ ಡೈಮೆನ್ಸಿಟಿ 820 ಚಿಪ್‌ಸೆಟ್ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸದ್ಯ ಶಿಯೋಮಿ ರೆಡ್ಮಿ 10X 5G ಸ್ಮಾರ್ಟ್‌ಫೋನ್‌ 6.57-ಇಂಚಿನ ಡಿಸ್‌ಪ್ಲೇಯನ್ನ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಇದು ಒಎಲ್‌ಇಡಿ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿರಲಿದ್ದು, ಫುಲ್‌ ಹೆಚ್‌ಡಿ ಪ್ಲಸ್‌ ರೆಸಲ್ಯೂಶನ್ ಹೊಂದಿರುವ ಡಿಸ್‌ಪ್ಲೇಯನ್ನ ಹೊಂದಿರುವ ಸಾದ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಇತ್ತೀಚಿಗೆ ಬಿಡುಗಡೆ ಆದ ಮೀಡಿಯಾ ಟೆಕ್ ಡೈಮೆನ್ಸಿಟಿ 820 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದ್ದು, ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 256GB ಇಂಟರ್‌ ಸ್ಟೊರೇಜ್‌ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ಮತ್ತು ಬ್ಯಾಟರಿ

ಕ್ಯಾಮೆರಾ ಮತ್ತು ಬ್ಯಾಟರಿ

ರೆಡ್ಮಿ 10X 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರುವ ಸಾಧ್ಯತೆ ಇದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,420mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ಗಳು ಇದೇ ಮೇ 26 ರಂದು ಬಿಡುಗಡೆ ಆಗಲಿದೆ ಎಂದು ನಿರೀಕ್ಷಿಸಲಾಗಿದೆ.

Best Mobiles in India

English summary
Xiaomi has hinted that the 10X series will launch on May 26.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X