ಬಜೆಟ್ ಬೆಲೆಯ ಈ 5G ಫೋನಿಗೆ ಈಗ ಬಿಗ್ ಡಿಸ್ಕೌಂಟ್!..ಗ್ರಾಹಕರಿಗೆ ಅಚ್ಚರಿ!
ಶಿಯೋಮಿ ರೆಡ್ಮಿ ಫೋನ್ ಕಂಪನಿಯು ಭಿನ್ನ ಸ್ಮಾರ್ಟ್‌ಫೋನ್‌ಗಳ ಶ್ರೇಣಿಯ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಹೊಂದಿದೆ. ಈ ಸಂಸ್ಥೆಯ ಬಜೆಟ್ ದರದಲ್ಲಿ ಹಲವು 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ರೆಡ್ಮಿ 11 ಪ್ರೈಮ್ 5G ಮೊಬೈಲ್ ಕೂಡಾ ಸೇರಿದ್ದು, ಈ ಫೋನ್ ಇದೀಗ ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ರೆಡ್ಮಿ 11 ಪ್ರೈಮ್ 5G ಮೊಬೈಲ್ ಶೇ. 22% ರಷ್ಟು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 6 GB RAM + 128 GB ಸ್ಟೋರೇಜ್ ವೇರಿಯಂಟ್ 13,999 ರೂ. ಗಳ ಡಿಸ್ಕೌಂಟ್ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಬ್ಯಾಂಕ್ ಕೊಡುಗೆಗಳು ಸೇರಿದಂತೆ ಇತರೆ ಡಿಸ್ಕೌಂಟ್ ಕೂಡಾ ಲಭ್ಯ ಆಗಲಿವೆ.

ಇನ್ನು ರೆಡ್ಮಿ 11 ಪ್ರೈಮ್ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, ಹಾಗೆಯೇ ಇದು 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗಾದರೆ ರೆಡ್ಮಿ 11 ಪ್ರೈಮ್ 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 11 ಪ್ರೈಮ್ 5G ಫೀಚರ್ಸ್ ಹೀಗಿವೆ
ರೆಡ್ಮಿ 11 ಪ್ರೈಮ್ 5G ಮೊಬೈಲ್ 6.58 ಇಂಚಿನ ಫುಲ್ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 90Hz ರಿಫ್ರೆಶ್ ರೇಟ್ ಮತ್ತು 20.7:9 ರಚನೆಯ ಅನುಪಾತವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾರ್ಯ ನಿರ್ವಹಿಸಲಿದೆ.

ಅಲ್ಲದೇ ಇದು 6GB RAM ಮತ್ತು 128GB ಆಂತರೀಕ ಸ್ಟೊರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಜೊತೆಗೆ ರೆಡ್ಮಿ 11 ಪ್ರೈಮ್ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ.
ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದ್ದು, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಪಡೆದುಕೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬಂಡಲ್ ಚಾರ್ಜರ್ 22.5W ವರೆಗೆ ಚಾರ್ಜಿಂಗ್ ಅನ್ನು ಸಪೋರ್ಟ್ ಇದೆ.
ಇನ್ನು ರೆಡ್ಮಿ 11 ಪ್ರೈಮ್ 5G ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, ವೈಫೈ 802.11 a/b/g/n/ac, ಯುಎಸ್‌ಬಿ OTG, IR ಬ್ಲಾಸ್ಟರ್, ಬ್ಲೂಟೂತ್ v5.1, GPS/ A-GPS, USB ಟೈಪ್-C, ಮತ್ತು 3.5 ಹಾಗೂ ಎಂಎಂ ಹೆಡ್‌ಫೋನ್ ಜ್ಯಾಕ್ ಸಪೋರ್ಟ್ ಮಾಡುತ್ತದೆ.
ಇದರೊಂದಿಗೆ ಇದು ಅಕ್ಸಿಲೆರೊಮೀಟರ್, ಇ-ಕಂಪಾಸ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ 1.7W ಔಟ್‌ಪುಟ್‌ನೊಂದಿಗೆ ಕೆಳಭಾಗದಲ್ಲಿ ಜೋಡಿಸಲಾದ ಸ್ಪೀಕರ್ ಕೂಡ ಹೊಂದಿದೆ. ಇದು ಫೇಸ್ ಅನ್‌ಲಾಕ್ ಫೀಚರ್ಸ್ ಅನ್ನು ಸಹ ಬೆಂಬಲಿಸಲಿದೆ.


Click it and Unblock the Notifications








