Just In
- 40 min ago
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- 1 hr ago
ಜಿಯೋ ಟ್ರೂ 5G ಸೇವೆ ಈಗ ಚಿತ್ರದುರ್ಗದಲ್ಲಿಯೂ ಲಭ್ಯ!..5G ರೀಚಾರ್ಜ್ ಬೆಲೆ ಎಷ್ಟು?
- 2 hrs ago
ನೀವು ಎಸ್ಬಿಐ ಗ್ರಾಹಕರೇ?... ಯುಪಿಐ ಪೇಮೆಂಟ್ ಮಾಡುವಾಗ ಈ ಅಂಶಗಳ ಬಗ್ಗೆ ಎಚ್ಚರವಹಿಸಿ!
- 3 hrs ago
ಭಾರತದಲ್ಲಿ ಇನ್ಫಿನಿಕ್ಸ್ ಝೀರೋ ಬುಕ್ ಅಲ್ಟ್ರಾ ಲ್ಯಾಪ್ಟಾಪ್ ಲಾಂಚ್; ಏನೆಲ್ಲಾ ಫೀಚರ್ಸ್ ಇವೆ ಗೊತ್ತಾ!?
Don't Miss
- News
ಸೋದರರಂತೆ ಇದ್ದವರ ನಡುವೆ ಹುಳಿ ಹಿಂಡಿದ ಲಕ್ಷ್ಮಿ ಹೆಬ್ಬಾಳ್ಕರ್ 'ವಿಷಕನ್ಯೆ': ಮಹಾಸಂಘರ್ಷಕ್ಕೆ ಮುನ್ನುಡಿ ಬರೆದ ರಮೇಶ ಜಾರಕಿಹೊಳಿ
- Movies
ಹುಡುಗನನ್ನು ನೋಡಲು ತಯಾರಾದ ನಟಿ ಶೋಭಾ ಶೆಟ್ಟಿ ವೀಡಿಯೋ 30 ಲಕ್ಷ ವೀಕ್ಷಣೆ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Sports
WIPL 2023: ಮಹಿಳಾ ಐಪಿಎಲ್ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೆಂಟರ್ ಆಗಿ ಮಿಥಾಲಿ ರಾಜ್ ನೇಮಕ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ರೆಡ್ಮಿ 11 ಪ್ರೈಮ್ 5G ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಎಷ್ಟು?
ಶಿಯೋಮಿ ಕಂಪೆನಿ ಭಾರತದಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎನಿಸಿಕೊಂಡಿದೆ. ತನ್ನ ವಿಶೇಷ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಆಯ್ಕೆ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ರೆಡ್ಮಿ 11 ಪ್ರೈಮ್ 5G ಮತ್ತು ರೆಡ್ಮಿ 11 ಪ್ರೈಮ್ 4G ಫೋನ್‌ಗಳನ್ನು ಲಾಂಚ್ ಮಾಡಿದೆ. ಇದರಲ್ಲಿ ರೆಡ್ಮಿ 11 ಪ್ರೈಮ್ 5G ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಆದರೆ ರೆಡ್ಮಿ 11 ಪ್ರೈಮ್ 4G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ.

ಹೌದು, ಶಿಯೋಮಿ ಭಾರತದಲ್ಲಿ ರೆಡ್ಮಿ 11 ಪ್ರೈಮ್ 5G ಮತ್ತು ರೆಡ್ಮಿ 11 ಪ್ರೈಮ್ 4G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಎರಡು ಫೋನ್‌ಗಳು 90Hz ರಿಫ್ರೆಶ್ ರೇಟ್ ಡಿಸ್‌ಪ್ಲೇಯನ್ನು ಹೊಂದಿವೆ. ರೆಡ್ಮಿ 11 ಪ್ರೈಮ್ 5G ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಆದರೆ 4G ಮಾದರಿಯು ಮೀಡಿಯಾಟೆಕ್ ಹಿಲಿಯೋ G99 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ 11 ಪ್ರೈಮ್ 5G
ರೆಡ್ಮಿ 11 ಪ್ರೈಮ್ 5G ಸ್ಮಾರ್ಟ್‌ಫೋನ್ 6.58-ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 20.7:9 ರಚನೆಯ ಅನುಪಾತವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೊರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ರೆಡ್ಮಿ 11 ಪ್ರೈಮ್ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬಂಡಲ್ ಚಾರ್ಜರ್ 22.5W ವರೆಗೆ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ 11 ಪ್ರೈಮ್ 5G ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈಫೈ 802.11 a/b/g/n/ac, ಯುಎಸ್‌ಬಿ OTG, IR ಬ್ಲಾಸ್ಟರ್, ಬ್ಲೂಟೂತ್ v5.1, GPS/ A-GPS, USB ಟೈಪ್-C, ಮತ್ತು 3.5 ಹಾಗೂ ಎಂಎಂ ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಇ-ಕಂಪಾಸ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ 1.7W ಔಟ್‌ಪುಟ್‌ನೊಂದಿಗೆ ಕೆಳಭಾಗದಲ್ಲಿ ಜೋಡಿಸಲಾದ ಸ್ಪೀಕರ್ ಕೂಡ ಹೊಂದಿದೆ. ಇದು ಫೇಸ್ ಅನ್‌ಲಾಕ್ ಫೀಚರ್ಸ್ ಅನ್ನು ಸಹ ಬೆಂಬಲಿಸಲಿದೆ.

ರೆಡ್ಮಿ 11 ಪ್ರೈಮ್ 4G ಫೋನಿನ ಫೀಚರ್ಸ್ ಹೇಗಿದೆ?
ರೆಡ್ಮಿ 11 ಪ್ರೈಮ್ 4G ಸ್ಮಾರ್ಟ್‌ಫೋನ್ 6.58-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು 240Hz ಟಚ್ ಸ್ಯಾಪ್ಲಿಂಗ್ ರೇಟ್ ಹೊಂದಿದ್ದು, 400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G99SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲವನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 512GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.1, USB ಟೈಪ್-C, ಮತ್ತು ಆಡಿಯೋ ಜಾಕ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರೆಡ್ಮಿ 11 ಪ್ರೈಮ್ 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ಆಯ್ಕೆಗೆ 13,999ರೂ. ಬೆಲೆ ಹೊಂದಿದೆ. ಇನ್ನು ಇದರ 6GB RAM + 128GB ಸ್ಟೋರೇಜ್ ಮಾದರಿಯ ಆಯ್ಕೆಗೆ 15,999ರೂ. ಬೆಲೆ ಪಡೆದಿದೆ. ಇದು ಮೆಡೋ ಗ್ರೀನ್, ಕ್ರೋಮ್ ಸಿಲ್ವರ್ ಮತ್ತು ಥಂಡರ್ ಬ್ಲ್ಯಾಕ್ ಬಣ್ಣಗಳಲ್ಲಿ ಬರುತ್ತದೆ.
ಇನ್ನು ರೆಡ್ಮಿ 11 ಪ್ರೈಮ್ 4G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 12,999ರೂ ಬೆಲೆ ಹೊಂದಿದೆ. ಹಾಗೆಯೇ 6GB RAM + 128GB ರೂಪಾಂತರದ ಆಯ್ಕೆಯು 14,999ರೂ. ಬೆಲೆ ಹೊಂದಿದೆ. ಈ ಫೋನ್ ಪ್ಲೇಫುಲ್ ಗ್ರೀನ್, ಫ್ಲ್ಯಾಶಿ ಬ್ಲ್ಯಾಕ್ ಮತ್ತು ಪೆಪ್ಪಿ ಪರ್ಪಲ್ ಶೇಡ್ ಕಲರ್ ಆಯ್ಕೆಗಳಲ್ಲಿ ಬರಲಿದೆ.
ಇದರಲ್ಲಿ ರೆಡ್ಮಿ 11 ಪ್ರೈಮ್ 5G ಸ್ಮಾರ್ಟ್‌ಫೋನ್ ಸೇಲ್ ಅಮೆಜಾನ್, ಮಿ.ಕಾಮ್, ಮಿ ಹೋಮ್ ಮೂಲಕ ಸೆಪ್ಟೆಂಬರ್ 9 ರ ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಪ್ರಾರಂಭವಾಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470