Home
ಸುದ್ದಿಜಾಲ

ರೆಡ್ಮಿ 5G ಫೋನ್‌ ಖರೀದಿಸಲು ಈ ಆಫರ್‌ ಬೆಸ್ಟ್‌!..ಭಾರೀ ಬೆಲೆ ಇಳಿಕೆ!

ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ ಕ್ರಿಸ್‌ಮಸ್ ಅಂಗವಾಗಿ ವಿಶೇಷ ಮಾರಾಟ ಆಯೋಜಿಸಿದ್ದು, ಆಯ್ದ ಮೊಬೈಲ್‌ಗಳು ಭಾರೀ ಆಕರ್ಷಕ ರಿಯಾಯಿತಿ ಪಡೆದಿವೆ. ಆ ಪೈಕಿ ರೆಡ್ಮಿ 12 5G ಫೋನ್‌ ಕೂಡಾ ಒಂದಾಗಿದ್ದು, ಈ ಫೋನ್‌ ಇದೀಗ 5G ಫೋನ್‌ ಖರೀದಿಸುವವರ ಗಮನ ಸೆಳೆಯುತ್ತಿದೆ.

ಹೌದು, ಇ ಕಾಮರ್ಸ್‌ ದಿಗ್ಗಜ ಅಮೆಜಾನ್‌ನಲ್ಲಿ ರೆಡ್ಮಿ 12 5G ಮೊಬೈಲ್‌ ಶೇ. 23% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನ್‌ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಸದ್ಯ 15,499ರೂ. ಗಳ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಬ್ಯಾಂಕ್‌ ಕೊಡುಗೆ ಸೇರಿದಂತೆ ಇತರೆ ಕೆಲವು ರಿಯಾಯಿತಿಗಳು ಸಹ ಲಭ್ಯವಾಗಲಿವೆ.

ರೆಡ್ಮಿ 5G ಫೋನ್‌ ಖರೀದಿಸಲು ಈ ಆಫರ್‌ ಬೆಸ್ಟ್‌!..ಭಾರೀ ಬೆಲೆ ಇಳಿಕೆ!

ಅಂದಹಾಗೆ ರೆಡ್ಮಿ 12 5G ಮೊಬೈಲ್‌ 4GB + 128GB, 6GB + 128GB ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಈ ಫೋನ್‌ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದ್ದು, ಇದು 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಹೊಂದಿದೆ. ಹಾಗಾದರೆ ರೆಡ್ಮಿ 12 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌ ಮತ್ತು ವಿನ್ಯಾಸದ ಮಾಹಿತಿ

ರೆಡ್ಮಿ 12 5G ಫೋನ್‌ 6.79 ಇಂಚಿನ FHD ಡಿಸ್‌ಪ್ಲೇ ಪಡೆದಿದ್ದು, 90 Hz ನ ರಿಫ್ರೆಶ್ ರೇಟ್ ಸೌಲಭ್ಯವನ್ನು ಸಹ ಒಳಗೊಂಡಿದೆ. ಇದರೊಂದಿಗೆ 1080 X 2400 ಪಿಕ್ಸೆಲ್‌ನ ಸ್ಕ್ರೀನ್ ರೆಸಲ್ಯೂಶನ್‌ ಹಾಗೂ 240Hz ಟಚ್‌ ಮಾದರಿ ರೇಟ್‌ ಆಯ್ಕೆ ಯಾವುದೇ ವಿಡಿಯೋ ವೀಕ್ಷಣೆ ಹಾಗೂ ಗೇಮಿಂಗ್‌ ಸಂದರ್ಭದಲ್ಲಿ ಬಳಕೆದಾರರಿಗೆ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್‌ ಪವರ್‌ ಮಾಹಿತಿ

ರೆಡ್ಮಿ ಸಂಸ್ಥೆಯ ಈ ಫೋನ್‌ ಉತ್ತಮ ಕಾರ್ಯಕ್ಷಮತೆಗಾಗಿ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಅದಕ್ಕೆ ಅನುಗುಣವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಹಾಗೆಯೇ ಈ ಫೋನ್‌ ಮೂರು ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಅವು ಕ್ರಮವಾಗಿ 4GB + 128GB, 6GB + 128GB ಹಾಗೂ 8GB + 256GB ಆಗಿವೆ. ಅಲ್ಲದೇ 8GB RAM ನೊಂದಿಗೆ 8 GB ವರ್ಚುವಲ್ RAM ಆಯ್ಕೆ ಸಹ ಇದೆ.

ಡ್ಯುಯಲ್‌ ಕ್ಯಾಮೆರಾ ಸೆನ್ಸಾರ್

ರೆಡ್ಮಿ 12 5G ಸ್ಮಾರ್ಟ್‌ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಪ್ರೈಮರಿ ಶೂಟರ್ ಹೊಂದಿದೆ. ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಆಯ್ಕೆ ಪಡೆದಿದೆ. ಇದರ ಜೊತೆಗೆ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಈ ಮೊಬೈಲ್‌ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್‌ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಹಾಗೂ ಇತರೆ ಸೌಲಭ್ಯಗಳು

ರೆಡ್ಮಿ 12 5G ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಅನ್ನು ಹೊಂದಿದೆ. ಇದರ ಜೊತೆಗೆ ಈ ಫೋನ್‌ ಆಂಡ್ರಾಯ್ಡ್ 13 ಅನ್ನು ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, IP53 ರೇಟಿಂಗ್‌ ಪಡೆದುಕೊಂಡಿದ್ದು, ಧೂಳು ನಿರೋಧಕವಾಗಿದೆ.

ಮೆಮೊರಿ ಆಯ್ಕೆ ಮತ್ತು ಕಲರ್ ಆಯ್ಕೆ

ರೆಡ್ಮಿ 12 5G ಮೊಬೈಲ್‌ ಮೂರು ವೇರಿಯಂಟ್‌ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 4GB + 128GB ಸ್ಟೋರೇಜ್‌, 6GB + 128GB ಸ್ಟೋರೇಜ್‌ ಮತ್ತು 8GB + 256GB ಸ್ಟೋರೇಜ್‌ ಆಗಿವೆ. ಇನ್ನು ಗ್ರಾಹಕರು ಈ ಫೋನ್‌ ಅನ್ನು ಸಿಲ್ವರ್, ಬ್ಲ್ಯಾಕ್‌ ಹಾಗೂ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

Best Mobiles in India

English summary
Redmi 12 5G available at best offer price on amazon. all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+