Home
ಸುದ್ದಿಜಾಲ

ರೆಡ್ಮಿ 12 5G ಸ್ಮಾರ್ಟ್‌ಫೋನ್‌ ಮೇಲೆ ಭರ್ಜರಿ ಡಿಸ್ಕೌಂಟ್‌: ಕೂಡಲೇ ಖರೀದಿಸಿ

ಕಳೆದ ವರ್ಷ ಭಾರತದ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ರೆಡ್ಮಿ 12 5G ಸ್ಮಾರ್ಟ್‌ಫೋನ್‌ ಇದೀಗ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಅಮೆಜಾನ್‌ ತಾಣದಲ್ಲಿ ಡಿಸ್ಕೌಂಟ್‌ ಪಡೆಯುವ ಮೂಲಕ ಗ್ರಾಹಕರ ಹುಬ್ಬೇರುವಂತೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಹೊಂದಿದೆ ಅನ್ನೋದು ವಿಶೇಷವಾಗಿದೆ.

ಹೌದು, ರೆಡ್ಮಿ 12 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಸ್ಮಾರ್ಟ್‌ಫೋನ್‌ ಪ್ರಿಯರು ಅತಿ ಕಡಿಮೆ ಬೆಲೆಯಲ್ಲಿ ರೆಡ್ಮಿ 12 5G ಫೋನ್‌ ಖರೀದಿಸುವುದಕ್ಕೆ ಅವಕಾಶ ಸಿಕ್ಕಿದೆ. ಹಾಗಾದ್ರೆ ರೆಡ್ಮಿ 12 5G ಸ್ಮಾರ್ಟ್‌ಫೋನ್‌ ಮೇಲೆ ಲಭ್ಯವಾಗುತ್ತಿರುವ ಡಿಸ್ಕೌಂಟ್‌ ಎಷ್ಟು? ಇದರ ಫೀಚರ್ಸ್‌ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ರೆಡ್ಮಿ 12 5G ಸ್ಮಾರ್ಟ್‌ಫೋನ್‌ ಮೇಲೆ ಭರ್ಜರಿ ಡಿಸ್ಕೌಂಟ್‌: ಕೂಡಲೇ ಖರೀದಿಸಿ

ರೆಡ್ಮಿ 12 5G ಫೋನ್‌ ಮೇಲೆ ಬಿಗ್‌ ಆಫರ್‌
ರೆಡ್ಮಿ 12 5G ಸ್ಮಾರ್ಟ್‌ಫೋನಿನ 4GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯು ಅಮೆಜಾನ್‌ ತಾಣದಲ್ಲಿ 15,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಫೋನ್‌ ಮೇಲೆ ಇದೀಗ ಬರೋಬ್ಬರಿ 25% ಡಿಸ್ಕೌಂಟ್‌ ಘೋಷಣೆ ಮಾಡಲಾಗಿದೆ. ಆದರಿಂದ ಈ ಫೋನ್‌ ಅನ್ನು ನೀವು ಕೇವಲ 11,999ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ವಿವಿಧ ಬ್ಯಾಂಕ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ ವಿಶೇಷ ರಿಯಾಯಿತಿ ಕೂಡ ಸಿಗಲಿದ್ದು, ಫೋನ್‌ ಬೆಲೆ ಇನ್ನಷ್ಟು ಕಡಿಮೆ ಆಗಲಿದೆ.

ರೆಡ್ಮಿ 12 5G ಫೀಚರ್ಸ್‌ ಹೇಗಿದೆ?
ರೆಡ್ಮಿ 12 5G ಸ್ಮಾರ್ಟ್‌ಫೋನ್‌ 6.79 ಇಂಚಿನ FHD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1080 X 2400 ಪಿಕ್ಸೆಲ್‌ನ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಜೊತೆಗೆ 240Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಸೌಲಭ್ಯವನ್ನು ಸಹ ಪಡೆದುಕೊಂಡಿದೆ.

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಅದಕ್ಕೆ ಅನುಗುಣವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಸದ್ಯ ಈ ಫೋನ್‌ನ 4GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯ ಮೇಲೆ ಡಿಸ್ಕೌಂಟ್‌ ನೀಡಲಾಗ್ತಿದೆ.

ರೆಡ್ಮಿ 12 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದರ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ 12 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಅನ್ನು ಸಹ ಹೊಂದಿದೆ.

ಆಯ್ಕೆ ಮತ್ತು ಲಭ್ಯತೆ
ರೆಡ್ಮಿ 12 5G ಸ್ಮಾರ್ಟ್‌ಫೋನಿನ 4GB RAM ಮತ್ತು 128GB ಸ್ಟೋರೇಜ್‌ ಆಯ್ಕೆ 25% ಡಿಸ್ಕೌಂಟ್‌ ಪಡೆದಿರುವುದರಿಂದ ಕೇವಲ 11,999ರೂ ಬೆಲೆಗೆ ಲಭ್ಯವಾಗುತ್ತಿದೆ. ಈ ಸ್ಮಾರ್ಟ್‌ಫೋನ್‌ ಜೇಡ್ ಬ್ಲಾಕ್ ಕಲರ್‌ ಆಯ್ಕೆಯಲ್ಲಿ ದೊರೆಯಲಿದ್ದು, ಗ್ರಾಹಕರ ಗಮನಸೆಳೆದಿದೆ.

Best Mobiles in India

English summary
Redmi 12 5G Get Massive Discount in amazon: Offers Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+