Home
ಸುದ್ದಿಜಾಲ

ಇಂದು 'ರೆಡ್ಮಿ 12 5G' ಫೋನ್‌ ಮಾರಾಟ ಶುರು!..ಆನ್‌ಲೈನ್‌ನಲ್ಲಿ ಭರ್ಜರಿ ಆಫರ್‌ ಸಿಗುತ್ತಾ?

ಬಜೆಟ್‌ ಬೆಲೆಯ ಫೋನ್‌ ವಿಭಾಗದಲ್ಲಿ ಭಾರೀ ಸದ್ದು ಮಾಡಿರುವ ರೆಡ್ಮಿ ಸಂಸ್ಥೆಯು ನೂತನವಾಗಿ ಬಿಡುಗಡೆ ಮಾಡಿರುವ ರೆಡ್ಮಿ 12 5G ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರನ್ನು ಆಕರ್ಷಿಸಿದೆ. ಈ ನೂತನ ಸ್ಮಾರ್ಟ್‌ಫೋನ್‌ ಇಂದು (ಅ 4 ರಂದು) ಮಿಡ್‌ನೈಟ್‌ (12AM) ಅಧಿಕೃತ ರೆಡ್ಮಿ ಆನ್‌ಲೈನ್ ಸ್ಟೋರ್ ಹಾಗೂ ಅಮೆಜಾನ್ ಪ್ಲಾಟ್‌ಫಾರ್ಮ್ ಮೂಲಕ ಫಸ್ಟ್‌ ಸೇಲ್‌ ಶುರು ಮಾಡಲಿದೆ.

ಹೌದು, ರೆಡ್ಮಿ 12 5G ಮೊಬೈಲ್‌ ಇಂದು ಮೊದಲ ಸೇಲ್‌ ಅನ್ನು ಅಮೆಜಾನ್‌ ಮೂಲಕ ಪ್ರಾರಂಭ ಮಾಡಲಿದ್ದು, ಗ್ರಾಹಕರಿಗೆ ಆಕರ್ಷಕ ಆಫರ್‌ ಸಿಗಲಿದೆ. ಈ ಫೋನ್‌ 4GB + 128GB, 6GB + 128GB ಮತ್ತು 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ.

ಇಂದು 'ರೆಡ್ಮಿ 12 5G' ಫೋನ್‌ ಮಾರಾಟ ಶುರು!..ಆನ್‌ಲೈನ್‌ನಲ್ಲಿ ಆಫರ್‌ ಸಿಗುತ್ತಾ?

ಇನ್ನು ರೆಡ್ಮಿ 12 5G ಫೋನ್‌ 4GB + 128GB ವೇರಿಯಂಟ್‌ ಬೆಲೆಯು 11,999ರೂ. ಆಗಿದ್ದು, 6GB + 128GB ಸ್ಟೋರೇಜ್‌ ವೇರಿಯಂಟ್‌ ದರವು 13,499ರೂ. ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 15,499ರೂ. ಆಗಿದೆ. ಇನ್ನು ಈ ಫೋನ್‌ 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೆ ರೆಡ್ಮಿ 12 5G ಫೋನಿನ ಇತರೆ ಫೀಚರ್ಸ್‌ ಯಾವುವು ಹಾಗೂ ಆಫರ್‌ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 12 5G ಡಿಸ್‌ಪ್ಲೇ ಮತ್ತು ವಿನ್ಯಾಸ ಹೇಗಿದೆ : ರೆಡ್ಮಿ 12 5G ಮೊಬೈಲ್‌ 6.79 ಇಂಚಿನ FHD ಡಿಸ್‌ಪ್ಲೇ ಪಡೆದಿದ್ದು, 90 Hz ನ ರಿಫ್ರೆಶ್ ರೇಟ್ ಸೌಲಭ್ಯವನ್ನು ಸಹ ಪಡೆದಿದೆ. ಇದರೊಂದಿಗೆ 1080 X 2400 ಪಿಕ್ಸೆಲ್‌ನ ಸ್ಕ್ರೀನ್ ರೆಸಲ್ಯೂಶನ್‌ ಹಾಗೂ 240Hz ಟಚ್‌ ಮಾದರಿ ರೇಟ್‌ ಆಯ್ಕೆ ಯಾವುದೇ ವಿಡಿಯೋ ವೀಕ್ಷಣೆ ಹಾಗೂ ಗೇಮಿಂಗ್‌ ಸಂದರ್ಭದಲ್ಲಿ ಬಳಕೆದಾರರಿಗೆ ಉತ್ತಮ ಅನುಭವ ಒದಗಿಸಲಿದೆ.

ರೆಡ್ಮಿ 12 5G ಪ್ರೊಸೆಸರ್‌ ಪವರ್‌ ಯಾವುದು : ರೆಡ್ಮಿ 12 5G ಮೊಬೈಲ್‌ ಉತ್ತಮ ಕಾರ್ಯಕ್ಷಮತೆಗಾಗಿ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಅದಕ್ಕೆ ಅನುಗುಣವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಹಾಗೆಯೇ ಉಳಿದಂತೆ ಇದು ಮೂರು ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಜೊತೆಗೆ 8GB RAM ನೊಂದಿಗೆ 8 GB ವರ್ಚುವಲ್ RAM ಆಯ್ಕೆ ಸಹ ಇದೆ.

ರೆಡ್ಮಿ 12 5G ಕ್ಯಾಮೆರಾ ಸೆನ್ಸಾರ್ ವಿಶೇಷ ಏನು : ರೆಡ್ಮಿ 12 5G ಸ್ಮಾರ್ಟ್‌ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್‌ ಪ್ರೈಮರಿ ಶೂಟರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಆಯ್ಕೆ ಪಡೆದಿದೆ. ಹಾಗೆಯೇ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಈ ಮೊಬೈಲ್‌ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್‌ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.

ರೆಡ್ಮಿ 12 5G ಬ್ಯಾಟರಿ ಬ್ಯಾಕ್‌ಅಪ್‌ ಹಾಗೂ ಇತರೆ ಆಯ್ಕೆಗಳ ಮಾಹಿತಿ : ರೆಡ್ಮಿ 12 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ ಈ ಮೊಬೈಲ್‌ ಆಂಡ್ರಾಯ್ಡ್ 13 ಅನ್ನು ರನ್‌ ಮಾಡಲಿದ್ದು, IP53 ರೇಟಿಂಗ್‌ ಪಡೆದುಕೊಂಡಿದ್ದು, ಧೂಳು ನಿರೋಧಕವಾಗಿದೆ.

ರೆಡ್ಮಿ 12 5G ಮೆಮೊರಿ ಮತ್ತು ಆಫರ್ ಮಾಹಿತಿ : ರೆಡ್ಮಿ 12 5G ಸ್ಮಾರ್ಟ್‌ಫೋನ್ ಮೂರು ವೇರಿಯಂಟ್‌ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 4GB + 128GB, 6GB + 128GB, ಮತ್ತು 8GB + 256GB ಆಗಿವೆ. ಇನ್ನು ಗ್ರಾಹಕರು ಐಸಿಐಸಿಐ ಕ್ರೆಡಿಟ್ ಕಾರ್ಡ್‌ ಮೂಲಕ ಖರೀದಿಸಿದರೆ, ರಿಯಾಯಿತಿ ದೊರಯಲಿದೆ.

Best Mobiles in India

English summary
Redmi 12 5G Goes for First Sale Today Via Amazon. offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+