ಬಜೆಟ್ ಬೆಲೆಯ ಈ ಆಕರ್ಷಕ ರೆಡ್ಮಿ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!
ದೈತ್ಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಎನಿಸಿಕೊಂಡಿರುವ ಫ್ಲಿಪ್‌ಕಾರ್ಟ್ ಇದೀಗ ರಿಪಬ್ಲಿಕ್ ಡೇ ಸೇಲ್ ಮಾರಾಟ ಮೇಳವನ್ನು ಪ್ರಾರಂಭಿಸಿದ್ದು, ಈ ಸ್ಪೆಷಲ್ ಸೇಲ್ ಇದೇ ಜ. 19 ರ ವರೆಗೂ ಚಾಲ್ತಿ ಇರಲಿದೆ. ಈ ಮಾರಾಟದಲ್ಲಿ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳು ಸಖತ್ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇವೆ. ಅವುಗಳ ಪೈಕಿ ರೆಡ್ಮಿ 12 ಮೊಬೈಲ್ ಸಹ ಅತ್ಯುತ್ತಮ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ.
ಹೌದು, ಪ್ಲಾಟ್‌ಫಾರ್ಮ್ ತಾಣದಲ್ಲಿ ರೆಡ್ಮಿ 12 ಮೊಬೈಲ್ ಶೇ. 36% ರಷ್ಟು ನೇರ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 4GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಗ್ರಾಹಕರು 9,499ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಅವಕಾಶ ಇದೆ. ಹಾಗೆಯೇ ಫ್ಲಿಪ್‌ಕಾರ್ಟ್ ತಾಣದಲ್ಲಿ ಬ್ಯಾಂಕ್ ಡಿಸ್ಕೌಂಟ್, ನೋ ಕಾಸ್ಟ್ ಇಎಮ್‌ಐ ನಂತಹ ಸೌಲಭ್ಯಗಳು ಸಹ ದೊರೆಯುತ್ತವೆ.

ಇದು ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡುವ ಈ ಫೋನ್, 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಹೈಲೈಟ್ ಎನಿಸಿದೆ. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯ ಸೌಲಭ್ಯವನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ರೆಡ್ಮಿ 12 ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 12 ಮೊಬೈಲ್ - ಫೀಚರ್ಸ್
ರೆಡ್ಮಿ 12 ಫೋನ್ 6.79 ಇಂಚಿನ FHD ಡಿಸ್‌ಪ್ಲೇ ಅನ್ನು ಹೊಂದಿದ್ದು, 90 Hz ನ ರಿಫ್ರೆಶ್ ರೇಟ್ ಸೌಲಭ್ಯವನ್ನು ಸಹ ಪಡೆದಿದೆ. ಇದರೊಂದಿಗೆ 1080 X 2400 ಪಿಕ್ಸೆಲ್‌ನ ಸ್ಕ್ರೀನ್ ರೆಸಲ್ಯೂಶನ್ ಹಾಗೂ 240Hz ಟಚ್ ಮಾದರಿ ರೇಟ್ ಆಯ್ಕೆ ಪಡೆದಿದ್ದು, ವಿಡಿಯೋ ವೀಕ್ಷಣೆ ಹಾಗೂ ಗೇಮಿಂಗ್ ಸಂದರ್ಭದಲ್ಲಿ ಬಳಕೆದಾರರಿಗೆ ತನ್ನ ವರ್ಗದಲ್ಲೇ ಅತ್ಯುತ್ತಮ ಅನುಭವ ನೀಡಲಿದೆ.

ರೆಡ್ಮಿ ಸಂಸ್ಥೆಯ ಈ ಫೋನ್ ಉತ್ತಮ ಕಾರ್ಯಕ್ಷಮತೆಗಾಗಿ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಅದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಪಡೆದಿದೆ. ಹಾಗೆಯೇ ಈ ಫೋನ್ ಮೂರು ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಅದಲ್ಲದೇ 8GB RAM ನೊಂದಿಗೆ 8 GB ವರ್ಚುವಲ್ RAM ಆಯ್ಕೆ ಸಹ ಇದೆ.
ರೆಡ್ಮಿ 12 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಪ್ರೈಮರಿ ಶೂಟರ್ ಪಡೆದಿದೆ. ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಆಯ್ಕೆ ಒಳಗೊಂಡಿದೆ. ಹಾಗೆಯೇ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಈ ಮೊಬೈಲ್ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ರೆಡ್ಮಿ 12 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದುಕೊಂಡಿದೆ.
ಇದರ ಜೊತೆಗೆ ಈ ಮೊಬೈಲ್ ಆಂಡ್ರಾಯ್ಡ್ 13 ಅನ್ನು ರನ್ ಮಾಡಲಿದ್ದು, IP53 ರೇಟಿಂಗ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಧೂಳು ನಿರೋಧಕವಾಗಿದೆ. ಈ ಮೊಬೈಲ್ ಮೂರು ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದ್ದು, ಅವುಗಳು ಕ್ರಮವಾಗಿ 4GB + 128GB, 6GB + 128GB, ಮತ್ತು 8GB + 256GB ಆಗಿವೆ.


Click it and Unblock the Notifications








