ರೆಡ್ಮಿಯ ಈ ಜನಪ್ರಿಯ ಫೋನ್ ಬೆಲೆಯಲ್ಲಿ ಮತ್ತೆ ಇಳಿಕೆ!..ಸಖತ್ ಉಳಿತಾಯ!
ಶಿಯೋಮಿ ತನ್ನ ರೆಡ್ಮಿ ಸ್ಮಾರ್ಟ್‌ಫೋನ್ ಮೂಲಕ ಮಾರುಕಟ್ಟೆಯಲ್ಲಿ ಸಖತ್ ಸೌಂಡ್ ಮಾಡಿದೆ. ಸಂಸ್ಥೆಯು ಇತ್ತೀಚಿನ ಸ್ಮಾರ್ಟ್‌ಫೊನ್‌ಗಳಲ್ಲಿ ಒಂದಾದ ರೆಡ್ಮಿ 12 ಫೋನ್ ಕೂಡಾ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಆದರೆ ಸಂಸ್ಥೆಯು ಈ ಫೋನ್ ಬೆಲೆಯಲ್ಲಿ ಈಗ ಇಳಿಕೆ ಮಾಡಿದ್ದು, ಮತ್ತಷ್ಟು ಗ್ರಾಹಕರು ಹಿಂತಿರುಗಿ ನೋಡುವಂತೆ ಆಗಿದೆ.
ಹೌದು, ಶಿಯೋಮಿ ಸಂಸ್ಥೆಯು ತನ್ನ ರೆಡ್ಮಿ 12 ಬೆಲೆಯಲ್ಲಿ 1,500ರೂ. ಗಳ ಇಳಿಕೆ ಮಾಡಿದೆ. ಈ ಫೋನ್ 6GB RAM ಸ್ಟೋರೇಜ್ ವೇರಿಯಂಟ್ ದರದಲ್ಲಿ ಈ ಇಳಿಕೆ ಮಾಡಲಾಗಿದೆ. 6GB RAM ವೇರಿಯಂಟ್ ಬೆಲೆಯು 11,999 ರೂ. ಗಳು ಇದ್ದು, ಈಗ ಬೆಲೆ ಇಳಿಕೆಯಿಂದಾಗಿ 10,499ರೂ. ಗಳಿಗೆ ಖರೀದಿಗೆ ಲಭ್ಯ ಆಗಲಿದೆ.

ಅಂದಹಾಗೆ ಈ ಫೋನ್ 4GB + 128GB ವೇರಿಯಂಟ್ ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇದರೊಂದಿಗೆ ಇದು 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೆ ರೆಡ್ಮಿ 12 ಫೋನಿನ ಇತರೆ ಫೀಚರ್ಸ್ ಯಾವುವು ಎನ್ನುವ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್ ಮತ್ತು ರಚನೆ ಮಾಹಿತಿ
ರೆಡ್ಮಿ 12 ಫೋನ್ 6.79 ಇಂಚಿನ FHD ಡಿಸ್‌ಪ್ಲೇ ಪಡೆದಿದ್ದು, 90 Hz ನ ರಿಫ್ರೆಶ್ ರೇಟ್ ಸೌಲಭ್ಯವನ್ನು ಸಹ ಹೊಂದಿದೆ. ಇದರೊಂದಿಗೆ 1080 X 2400 ಪಿಕ್ಸೆಲ್‌ನ ಸ್ಕ್ರೀನ್ ರೆಸಲ್ಯೂಶನ್ ಹಾಗೂ 240Hz ಟಚ್ ಮಾದರಿ ರೇಟ್ ಆಯ್ಕೆ ಯಾವುದೇ ವಿಡಿಯೋ ವೀಕ್ಷಣೆ ಹಾಗೂ ಗೇಮಿಂಗ್ ಸಂದರ್ಭದಲ್ಲಿ ಬಳಕೆದಾರರಿಗೆ ಉತ್ತಮ ಅನುಭವ ನೀಡಲಿದೆ.
ಪ್ರೊಸೆಸರ್ ಪವರ್ ಮಾಹಿತಿ
ರೆಡ್ಮಿ 12 ಫೋನ್ ಉತ್ತಮ ಕಾರ್ಯಕ್ಷಮತೆಗಾಗಿ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಅದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಒಳಗೊಂಡಿದೆ. ಹಾಗೆಯೇ ಉಳಿದಂತೆ ಇದು ಮೂರು ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದ್ದು, ಇದರ ಜೊತೆಗೆ 8GB RAM ನೊಂದಿಗೆ 8 GB ವರ್ಚುವಲ್ RAM ಆಯ್ಕೆ ಸಹ ಲಭ್ಯ.

ಕ್ಯಾಮೆರಾ ಸೆನ್ಸಾರ್ ಎಷ್ಟಿದೆ
ರೆಡ್ಮಿ 12 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಪ್ರೈಮರಿ ಶೂಟರ್ ಸೌಲಭ್ಯ ಪಡೆದಿದೆ. ಎರಡನೇ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಆಯ್ಕೆ ಪಡೆದಿದೆ. ಹಾಗೆಯೇ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಈ ಮೊಬೈಲ್ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್ ಹಾಗೂ ಇತರೆ ಸೌಲಭ್ಯಗಳು
ರೆಡ್ಮಿ 12 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ ಈ ಮೊಬೈಲ್ ಆಂಡ್ರಾಯ್ಡ್ 13 ಅನ್ನು ರನ್ ಮಾಡಲಿದ್ದು, IP53 ರೇಟಿಂಗ್ ಪಡೆದುಕೊಂಡಿದ್ದು, ಧೂಳು ನಿರೋಧಕ ಸೌಲಭ್ಯ ಪಡೆದಿದೆ.
ಮೆಮೊರಿ ಆಯ್ಕೆ ಹಾಗೂ ಕಲರ್ ಆಯ್ಕೆ
ರೆಡ್ಮಿ 12 ಸ್ಮಾರ್ಟ್‌ಫೋನ್ ಮೂರು ವೇರಿಯಂಟ್ ಆಯ್ಕೆ ಪಡೆದಿದ್ದು, ಅವುಗಳು 4GB + 128GB, 6GB + 128GB, ಮತ್ತು 8GB + 256GB ಆಗಿವೆ. ಇನ್ನು ಈ ಫೋನ್ ಜೇಡ್ ಬ್ಲ್ಯಾಕ್, ಮೂನ್‌ಸ್ಟೋನ್ ಸಿಲ್ವರ್ ಮತ್ತು ಪೆಸ್ಟಲ್ ಬ್ಲೂ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








