ಭಾರತದ ಮಾರುಕಟ್ಟೆಯಲ್ಲಿ ಹೊಸ ದಾಖಲೆ ಬರೆದ ಶಿಯೋಮಿ ರೆಡ್ಮಿ 12 ಸರಣಿ!
ಚೀನಾದ ಟೆಕ್ ದೈತ್ಯ ಶಿಯೋಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಭಾರಿ ಬೇಡಿಕೆಯಿದೆ. ಭಾರತದ ಮಾರುಕಟ್ಟೆಯಲ್ಲಿ ಶಿಯೋಮಿ ರೆಡ್ಮಿ ಫೋನ್‌ಗಳು ಬಿಸಿ ದೋಸೆಯಂತೆ ಮಾರಾಟವಾಗುತ್ತವೆ. ಇದಕ್ಕೆ ಸಾಕ್ಷಿಯೆಂಬಂತೆ ಇತ್ತೀಚಿಗೆ ಬಿಡುಗಡೆ ಆದ ರೆಡ್ಮಿ 12 ಸರಣಿ ಅತಿ ಹೆಚ್ಚು ಸಂಖ್ಯೆಯಲ್ಲಿ ಮಾರಾಟವಾಗುವ ಮೂಲಕ ಹೊಸ ದಾಖಲೆಯನ್ನು ಬರೆದಿದೆ.
ಹೌದು, ಶಿಯೋಮಿ ರೆಡ್ಮಿ 12 ಸರಣಿಯು ಭಾರತದಲ್ಲಿ ಕೇವಲ 100 ದಿನಗಳಲ್ಲಿ 3 ಮಿಲಿಯನ್ ಯುನಿಟ್‌ಗಳನ್ನು ಮಾರಾಟ ಮಾಡಿದೆ. ಈ ಮೂಲಕ ಶಿಯೋಮಿ ರೆಡ್ಮಿ ಭಾರತದ ಟೆಕ್ ವಲಯದಲ್ಲಿ ಹೊಸ ದಾಖಲೆಯನ್ನು ಬರೆದಿದೆ. ಅಲ್ಲದೆ ಸ್ಮಾರ್ಟ್‌ಫೋನ್ ಪ್ರಿಯರಿಗೆ ನಾನು ಇಂದಿಗೂ ಕೂಡ ಹಾಟ್‌ಫೇವರಿಟ್ ಅನ್ನೊದನ್ನ ಸಾಬೀತು ಪಡಿಸಿದೆ. ಹಾಗಾದ್ರೆ ಭಾರತದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಫೋನ್ ಸೇಲ್ ಮಾಡುವುದಕ್ಕೆ ರೆಡ್ಮಿಗೆ ಸಾಧ್ಯವಾಗಿದ್ದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ ಕಂಪೆನಿ ರೆಡ್ಮಿ 12 ಸರಣಿಯ ಮೂಲಕ ಭಾರತದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಕೇವಲ 100 ದಿನಗಳಲ್ಲಿ 3 ಮಿಲಿಯನ್ ಮಾರ್ಕ್ ಅನ್ನು ತಲುಪಿದೆ. ಈ ಮೂಲಕ ಟೆಕ್ ವಲಯದಲ್ಲಿ ತನ್ನ ಆರ್ಭಟವನ್ನು ಮುಂದುವರೆಸಿದೆ. ಇದರ ಬಗ್ಗೆ ಸ್ವತಃ ಶಿಯೋಮಿ ಕಂಪೆನಿ ತನ್ನ ಅಧಿಕೃತ X (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದೆ. ಗ್ರಾಹಕರು ನಮ್ಮ ಬ್ರ್ಯಾಂಡ್‌ನ ಸ್ಮಾರ್ಟ್‌ಫೋನ್‌ಗಳ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ನಿಷ್ಠೆಗೆ ಕೃತಜ್ಞತೆಯನ್ನು ಸಲ್ಲಿಸಿದೆ.
ಇನ್ನು ಶಿಯೋಮಿ ಕಂಪೆನಿ ಹೇಳಿರುವಂತೆ ರೆಡ್ಮಿ 12 ಸರಣಿಯು ಸೇಲ್ ಆರಂಭವಾದ ಮೊದಲ ದಿನ ಮೂರು ಲಕ್ಷ ಸೇಲ್ ಅನ್ನು ಕಂಡಿದೆ. ನಂತರದ 28 ದಿನಗಳಲ್ಲಿ ಇದರ ಸಂಖ್ಯೆ ಹತ್ತು ಲಕ್ಷ ದಾಟಿದೆ. ಇದೀಗ 100 ದಿನಗಳಲ್ಲಿ 3 ಮಿಲಿಯನ್ ಯುನಿಟ್‌ಗೆ ತಲುಪಿದೆ. ಈ ಸರಣಿಯಲ್ಲಿ ರೆಡ್ಮಿ 12 5G ಮತ್ತು ರೆಡ್ಮಿ 12 4G ಮಾಡೆಲ್‌ಗಳನ್ನು ಸೇಲ್ ಮಾಡಲಾಗ್ತಿದೆ.

ರೆಡ್ಮಿ 12 5G ಫೀಚರ್ಸ್ ಹೇಗಿದೆ?
ರೆಡ್ಮಿ 12 5G ಸ್ಮಾರ್ಟ್‌ಫೋನ್ 6.79 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2460×1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 Gen 2 ಪ್ರೊಸೆಸರ್ ವೇಗವನ್ನು ಹೊಂದಿದ್ದು, MIUI 14 ಬೆಂಬಲದೊಂದಿಗೆ ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ರೆಡ್ಮಿ 12 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರೆಡ್ಮಿ 12 4G ಫೀಚರ್ಸ್ ಹೇಗಿದೆ?
ರೆಡ್ಮಿ 12 4G ಸ್ಮಾರ್ಟ್‌ಫೋನ್ 6.79 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, ಮೂರು ಬದಿಗಳಲ್ಲಿ ಸ್ಲಿಮ್ ಬೆಜೆಲ್‌ಗಳೊಂದಿಗೆ ಪಂಚ್-ಹೋಲ್ ನಾಚ್ ವಿನ್ಯಾಸವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G88 ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದಿದೆ.


Click it and Unblock the Notifications








