Home
ಸುದ್ದಿಜಾಲ

ಈ ಜನಪ್ರಿಯ ರೆಡ್ಮಿ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!..ಗ್ರಾಹಕರ ಜೇಬಿಗೂ ಉಳಿತಾಯ!

ಶಿಯೋಮಿ ಸಂಸ್ಥೆಯು ಭಿನ್ನ ಪ್ರೈಸ್‌ ಟ್ಯಾಗ್‌ ನಲ್ಲಿ ಕೆಲವು ಮೊಬೈಲ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಗ್ರಾಹಕರನ್ನು ಆಕರ್ಷಿಸಿದೆ. ಅಗ್ಗದ ರೇಂಜ್‌ ರೆಡ್ಮಿ 12C ಮೊಬೈಲ್‌ ಫೀಚರ್ಸ್‌ ಹಾಗೂ ಬೆಲೆಯಿಂದ ಅಧಿಕ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಆದರೆ ಈ ಮೊಬೈಲ್‌ ಇದೀಗ ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸಖತ್‌ ಇಳಿಕೆ ಪಡೆದಿದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ.

ಹೌದು, ರೆಡ್ಮಿಯ ಇತ್ತೀಚಿನ ರೆಡ್ಮಿ 12C ಮೊಬೈಲ್‌ ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಈಗ ಶೇ. 39% ರಷ್ಟು ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ 4GB RAM + 64GB ಸ್ಟೋರೇಜ್‌ನ ವೇರಿಯಂಟ್‌ 13,999ರೂ. ಗಳ ದರವನ್ನು ಒಳಗೊಂಡಿದ್ದು, ಈಗ ಗ್ರಾಹಕರು 8,499ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ.

ಈ ಜನಪ್ರಿಯ ರೆಡ್ಮಿ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!..ಗ್ರಾಹಕರ ಜೇಬಿಗೂ ಉಳಿತಾಯ!

ರೆಡ್ಮಿ 12C ಮೊಬೈಲ್‌ ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಶಾಡೋ ಬ್ಲ್ಯಾಕ್, ಸೀ ಬ್ಲೂ, ಮಿಂಟ್ ಗ್ರೀನ್ ಮತ್ತು ಲ್ಯಾವೆಂಡರ್ ಕಲರ್‌ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ. ಇನ್ನುಳಿದಂತೆ ರೆಡ್ಮಿ 12C ಮೊಬೈಲ್‌ನ ಇತರೆ ಫೀಚರ್ಸ್‌ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 12C ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ :
ರೆಡ್ಮಿ 12C ಮೊಬೈಲ್‌ 1650 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.71 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 20.6:9 ಅನುಪಾತ ಅನ್ನು ಹೊಂದಿದೆ. ಈ ಫೋನಿನ ಡಿಸ್‌ಪ್ಲೇಯು ಟಿನ್ನಿ ಡಿವ್ ಡ್ರಾಪ್‌ ನಾಚ್‌ ರಚನೆ ಪಡೆದಿದ್ದು, ಇದರ ಜೊತೆಗೆ 500 nits ಬ್ರೈಟ್ನೆಸ್‌ ಪಡೆದುಕೊಂಡಿದೆ.

ರೆಡ್ಮಿ 12C ಪ್ರೊಸೆಸರ್‌ ಬಲ ಯಾವುದು :
ರೆಡ್ಮಿ 12C ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್‌ ಕಾರ್ಯ ನಿರ್ವಹಿಸುತ್ತದೆ. ಅಲ್ಲದೇ 4GB RAM + 128GB ಮತ್ತು 6GB + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಇದು ಪಡೆದುಕೊಂಡಿದೆ. ಹಾಗೆಯೇ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ಒದಗಿಸಲಾಗಿದೆ.

ರೆಡ್ಮಿ 12C ಕ್ಯಾಮೆರಾ ಸೆನ್ಸಾರ್ ಎಷ್ಟಿದೆ :
ರೆಡ್ಮಿ 12C ಮೊಬೈಲ್‌ ಹಿಂಭಾಗದಲ್ಲಿ ಎರಡು ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ದ್ವಿತೀಯ ಕ್ಯಾಮೆರಾ ಬೇಸಿಕ್ ಸೆನ್ಸಾರ್‌ ಪಡೆದಿದೆ. ಹಾಗೆಯೇ ತನ್ನ ವರ್ಗದಲ್ಲೇ ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಇದು ಒಳಗೊಂಡಿದೆ. ಬೇಸಿಕ್‌ ಎಡಿಟಿಂಗ್ ಆಯ್ಕೆಗಳು ಇವೆ.

ರೆಡ್ಮಿ 12C ಬ್ಯಾಟರಿ ಮತ್ತು ಇತರೆ ಆಯ್ಕೆಗಳ ಮಾಹಿತಿ :
ರೆಡ್ಮಿ 12C ಮೊಬೈಲ್‌ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 10W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹಣೆ ವಿಸ್ತರಣೆಗೆ ಬೆಂಬಲವಿದೆ.

ಈ ಫೋನ್‌ ಹೈಬ್ರಿಡ್ ಸಿಮ್ ಸ್ಲಾಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಕನೆಕ್ಟಿವಿಟಿ ಸೌಲಭ್ಯಗಳ ಆಯ್ಕೆಯಲ್ಲಿ 4G/5G VOLTE, ವೈ-ಫೈ, ಬ್ಲೂಟೂತ್ v5.0, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದುಕೊಂಡಿದೆ.

ರೆಡ್ಮಿ 12C ಮೆಮೊರಿ ಮತ್ತು ಕಲರ್ ಮಾಹಿತಿ :
ರೆಡ್ಮಿ 12C ಮೊಬೈಲ್‌ 4GB RAM + 128GB ಮತ್ತು 6GB + 128GB ವೇರಿಯಂಟ್‌ ಆಯ್ಕೆಯಲ್ಲಿ ಲಭ್ಯ. ಇನ್ನು ಈ ಮೊಬೈಲ್‌ ಶಾಡೋ ಬ್ಲ್ಯಾಕ್, ಸೀ ಬ್ಲೂ, ಮಿಂಟ್ ಗ್ರೀನ್ ಮತ್ತು ಲ್ಯಾವೆಂಡರ್ ಕಲರ್‌ ಆಯ್ಕೆ ಒಳಗೊಂಡಿದೆ.

Best Mobiles in India

English summary
Redmi 12C huge price down on amazon platform. offer price, specifications and more details on kannada gizbot.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+