ಗ್ರಾಹಕರಿಗೆ ಬಂಪರ್ ಆಫರ್!..ಈ ರೆಡ್ಮಿ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!
ಜನಪ್ರಿಯ ಶಿಯೋಮಿ ಸಂಸ್ಥೆಯು ಭಿನ್ನ ಬೆಲೆಯಲ್ಲಿ ಹಲವು ಮೊಬೈಲ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಸಂಸ್ಥೆಯ ಬಜೆಟ್ ಬೆಲೆಯಲ್ಲಿನ ರೆಡ್ಮಿ 12C ಫೋನ್ ಸಹ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಆದರೆ ಈ ಮೊಬೈಲ್ ಇದೀಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ಬೆಲೆ ಇಳಿಕೆ ಪಡೆದಿದ್ದು, ಗ್ರಾಹಕರು ಅಬ್ಬಬ್ಬಾ ಎನ್ನುವಂತೆ ಆಗಿದೆ.
ಹೌದು, ಶಿಯೋಮಿ ಮೊಬೈಲ್ ಸಂಸ್ಥೆಯ ರೆಡ್ಮಿ 12C ಮೊಬೈಲ್ ಅಮೆಜಾನ್ ವೆಬ್‌ಸೈಟ್ ಪ್ಲಾಟ್‌ಫಾರ್ಮ್ ಈಗ 38% ರಷ್ಟು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ ಫೋನಿನ 4GB RAM + 128GB ಸ್ಟೋರೇಜ್‌ನ ವೇರಿಯಂಟ್ 14,999ರೂ. ಗಳ ಬೆಲೆಯನ್ನು ಪಡೆದಿದ್ದು, ಈಗ ಗ್ರಾಹಕರು 9,299ರೂ. ಗಳ ರಿಯಾಯಿತಿ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿ ಮಾಡಬಹುದಾಗಿದೆ. ಹಾಗೆಯೇ ಇದರೆ ಡಿಸ್ಕೌಂಟ್ ಸಹ ಲಭ್ಯ.

ಇನ್ನು ರೆಡ್ಮಿ 12C ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದ್ದು, 10W ಚಾರ್ಜಿಂಗ್ ಸೌಲಭ್ಯವನ್ನು ಸಪೋರ್ಟ್ ಮಾಡುತ್ತದೆ. ಇನ್ನು ಈ ಮೊಬೈಲ್ ಶಾಡೋ ಬ್ಲ್ಯಾಕ್, ಸೀ ಬ್ಲೂ, ಮಿಂಟ್ ಗ್ರೀನ್ ಮತ್ತು ಲ್ಯಾವೆಂಡರ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಸಿಗುತ್ತದೆ. ಹಾಗಾದರೆ ಈ ಸ್ಮಾರ್ಟ್‌ಫೋನ್ ಫೀಚರ್ಸ್ ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 12C ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ : ರೆಡ್ಮಿ 12C ಫೋನ್ 1650 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.71 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, 20.6:9 ಅನುಪಾತ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು ಟಿನ್ನಿ ಡಿವ್ ಡ್ರಾಪ್ ನಾಚ್ ರಚನೆ ಪಡೆದಿದ್ದು, ಜೊತೆಗೆ 500 nits ಬ್ರೈಟ್ನೆಸ್ ಪಡೆದುಕೊಂಡಿದೆ.
ರೆಡ್ಮಿ 12C ಪ್ರೊಸೆಸರ್ ಪವರ್ ಯಾವುದು : ರೆಡ್ಮಿ 12C ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಕೆಲಸ ನಿರ್ವಹಿಸುತ್ತದೆ. ಹಾಗೆಯೇ ಇದು 4GB RAM + 128GB ಮತ್ತು 6GB + 128GB ಆಂತರೀಕ ಸ್ಟೋರೇಜ್ ವೇರಿಯಂಟ್ ಸಾಮರ್ಥ್ಯದ ಆಯ್ಕೆ ಒಳಗೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ಸಾಮರ್ಥ್ಯ ಹೆಚ್ಚಿಸಲು ಅವಕಾಶ ಇದೆ.
ರೆಡ್ಮಿ 12C ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ : ರೆಡ್ಮಿ 12C ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಸೆಕೆಂಡರಿ ಕ್ಯಾಮೆರಾ ಬೇಸಿಕ್ ಸೆನ್ಸಾರ್ ಪಡೆದಿದೆ. ಇದರೊಂದಿಗೆ ಈ ಮೊಬೈಲ್ ತನ್ನ ವರ್ಗದಲ್ಲೇ ಉತ್ತಮ ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ.
ರೆಡ್ಮಿ 12C ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ರೆಡ್ಮಿ 12C ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಅಲ್ಲದೇ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹಣೆ ವಿಸ್ತರಣೆಗೆ ಸಪೋರ್ಟ್ ಪಡೆದಿದೆ.
ಸಾಧನವು ಹೈಬ್ರಿಡ್ ಸಿಮ್ ಸ್ಲಾಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G/5G VOLTE, ವೈ-ಫೈ, ಬ್ಲೂಟೂತ್ v5.0, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
ರೆಡ್ಮಿ 12C ಮೆಮೊರಿ ಮತ್ತು ಕಲರ್ ಮಾಹಿತಿ : ರೆಡ್ಮಿ 12C ಮೊಬೈಲ್ 4GB RAM + 128GB ಮತ್ತು 6GB + 128GB ವೇರಿಯಂಟ್ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ. ಇನ್ನು ಈ ಫೋನ್ ಶಾಡೋ ಬ್ಲ್ಯಾಕ್, ಸೀ ಬ್ಲೂ, ಮಿಂಟ್ ಗ್ರೀನ್ ಮತ್ತು ಲ್ಯಾವೆಂಡರ್ ಕಲರ್ ಆಯ್ಕೆ ಪಡೆದಿದೆ.


Click it and Unblock the Notifications








