Home
ಸುದ್ದಿಜಾಲ

ಈ ಜನಪ್ರಿಯ ರೆಡ್ಮಿ ಫೋನ್‌ಗೆ ಬಿಗ್ ಆಫರ್‌!..ಕಡಿಮೆ ಬೆಲೆಗೆ ಖರೀದಿಸುವ ಅವಕಾಶ!

ಶಿಯೋಮಿ ಕಂಪನಿಯು ಭಿನ್ನ ಬೆಲೆಯಲ್ಲಿ ಹಲವು ಮೊಬೈಲ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ತನ್ನನ್ನು ಗುರುತಿಸಿಕೊಂಡಿದೆ. ಸಂಸ್ಥೆಯ ಹಲವು ಮೊಬೈಲ್‌ಗಳ ಪೈಕಿ ರೆಡ್ಮಿ 12C ಮೊಬೈಲ್‌ ಫೀಚರ್ಸ್‌ ಹಾಗೂ ಬೆಲೆಯಿಂದಾಗಿ ಮಾರುಕಟ್ಟೆಯಲ್ಲಿ ಹೆಚ್ಚಿನ ಗಮನ ಸೆಳೆದಿದೆ. ಆದರೆ ಈ ಮೊಬೈಲ್‌ ಇದೀಗ ಅಮೆಜಾನ್ ಇ ಕಾಮರ್ಸ್‌ ತಾಣದಲ್ಲಿ ರಿಯಾಯಿತಿ ಪಡೆದಿದ್ದು, ಮತ್ತಷ್ಟು ಗ್ರಾಹಕರನ್ನು ಸೆಳೆಯುವಂತಾಗಿದೆ.

ಹೌದು, ಶಿಯೋಮಿ ಸಂಸ್ಥೆಯ ರೆಡ್ಮಿ 12C ಮೊಬೈಲ್‌ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಈಗ 39% ರಷ್ಟು ರಿಯಾಯಿತಿ ಬೆಲೆಯನ್ನು ಪಡೆದುಕೊಂಡಿದೆ. ಈ ಮೊಬೈಲ್‌ 4GB RAM + 64GB ಸ್ಟೋರೇಜ್‌ನ ವೇರಿಯಂಟ್‌ ಮಾಡೆಲ್‌ 13,999ರೂ. ಗಳ ಪ್ರೈಸ್‌ ಟ್ಯಾಗ್‌ ಅನ್ನು ಪಡೆದಿದ್ದು, ಈಗ ಗ್ರಾಹಕರು 8,499ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ.

ಈ ಜನಪ್ರಿಯ ರೆಡ್ಮಿ ಫೋನ್‌ಗೆ ಬಿಗ್ ಆಫರ್‌!..ಕಡಿಮೆ ಬೆಲೆಗೆ ಖರೀದಿಸುವ ಅವಕಾಶ!

ರೆಡ್ಮಿ 12C ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಹಾಗೆಯೇ ಈ ಮೊಬೈಲ್‌ ಶಾಡೋ ಬ್ಲ್ಯಾಕ್, ಸೀ ಬ್ಲೂ, ಮಿಂಟ್ ಗ್ರೀನ್ ಮತ್ತು ಲ್ಯಾವೆಂಡರ್ ಕಲರ್‌ ಆಯ್ಕೆಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದಾಗಿದೆ. ಹಾಗಾದರೇ ರೆಡ್ಮಿ 12C ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ : ರೆಡ್ಮಿ 12C ಮೊಬೈಲ್‌ 1650 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.71 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, 20.6:9 ಅನುಪಾತ ಅನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇಯು ಟಿನ್ನಿ ಡಿವ್ ಡ್ರಾಪ್‌ ನಾಚ್‌ ರಚನೆ ಹೊಂದಿದ್ದು, ಜೊತೆಗೆ 500 nits ಬ್ರೈಟ್ನೆಸ್‌ ಪಡೆದಿದೆ.

ಪ್ರೊಸೆಸರ್‌ ಪವರ್ ಯಾವುದು : ರೆಡ್ಮಿ 12C ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್‌ ಕೆಲಸ ಮಾಡಲಿದೆ. ಜೊತೆಗೆ 4GB RAM + 128 GB ಮತ್ತು 6GB + 128 GB ಆಂತರೀಕ ಸ್ಟೋರೇಜ್ ವೇರಿಯಂಟ್‌ ಸಾಮರ್ಥ್ಯದ ಆಯ್ಕೆಗಳನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶ ಪಡೆದಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ : ರೆಡ್ಮಿ 12C ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಈ ಫೋನ್ ತನ್ನ ವರ್ಗದಲ್ಲೇ ಉತ್ತಮ ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ರೆಡ್ಮಿ 12C ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್‌ ಅನ್ನು ಸಪೋರ್ಟ್‌ ಮಾಡುತ್ತದೆ. ಹಾಗೆಯೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹಣೆ ವಿಸ್ತರಣೆಗೆ ಬೆಂಬಲವಿದೆ.

ಈ ಮೋಬೈಲ್ ಹೈಬ್ರಿಡ್ ಸಿಮ್ ಸ್ಲಾಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G/5G VOLTE, ವೈ-ಫೈ, ಬ್ಲೂಟೂತ್ v5.0, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಸೌಲಭ್ಯಗಳನ್ನು ಪಡೆದಿದೆ.

ಮೆಮೊರಿ ಮತ್ತು ಕಲರ್ ಆಯ್ಕೆ ಮಾಹಿತಿ : ರೆಡ್ಮಿ 12C ಫೋನ್‌ 4GB RAM + 128GB ಮತ್ತು 6GB + 128GB ವೇರಿಯಂಟ್‌ ಆಯ್ಕೆಯಲ್ಲಿ ಲಭ್ಯ. ಇನ್ನು ಈ ಫೋನ್ ಶಾಡೋ ಬ್ಲ್ಯಾಕ್, ಸೀ ಬ್ಲೂ, ಮಿಂಟ್ ಗ್ರೀನ್ ಮತ್ತು ಲ್ಯಾವೆಂಡರ್ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Redmi 12C price down on amazon: offer price, specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+