Home
ಸುದ್ದಿಜಾಲ

ಅಮೆಜಾನ್‌ನಲ್ಲಿ ರೆಡ್ಮಿ ಕಂಪೆನಿಯ ಈ ಫೋನ್‌ ಮೇಲೆ ಬರೋಬ್ಬರಿ 50% ಡಿಸ್ಕೌಂಟ್‌!

ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ನಲ್ಲಿ ಆಫರ್‌ಗಳ ಸುರಿಮಳೆ ಮುಂದುವರೆದಿದೆ. ಈಗಾಗಲೇ ವ್ಯಾಪಕ ಶ್ರೇಣಿಯ ಉತ್ಪನ್ನಗಳ ಮೇಲೆ ವಿಶೇಷ ರಿಯಾಯಿತಿ ನೀಡುತ್ತಿರುವ ಅಮೆಜಾನ್‌ ಸ್ಮಾರ್ಟ್‌ಫೋನ್‌ಗಳ ಮೇಲೆ ಇನ್ನಿಲ್ಲದ ಡಿಸ್ಕೌಂಟ್‌ಗಳನ್ನು ನೀಡುತ್ತಿದೆ. ಅದರಲ್ಲೂ ರೆಡ್ಮಿ ಬ್ರ್ಯಾಂಡ್‌ನ ಈ ಸ್ಮಾರ್ಟ್‌ಫೋನ್‌ ಇದೀಗ ಬರೋಬ್ಬರಿ 50% ಡಿಸ್ಕೌಂಟ್‌ ಪಡೆದುಕೊಂಡಿದೆ.

ಹೌದು, ಇದೇ ವರ್ಷ ಭಾರತದಲ್ಲಿ ಬಿಡುಗಡೆ ಆಗಿದ್ದ ರೆಡ್ಮಿ 12C ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ ಭಾರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 50% ಡಿಸ್ಕೌಂಟ್‌ ಪಡೆದುಕೊಂಡಿದ್ದು, ಮೂಲಬೆಲೆಗಿಂತ ಅರ್ಧ ಬೆಲೆಗೆ ಲಭ್ಯವಾಗ್ತಿದೆ. ಜೊತೆಗೆ ನೋ ಕಾಸ್ಟ್‌ ಇಎಂಐ ಆಫರ್‌ ಕೂಡ ಲಭ್ಯವಿದೆ. ಹಾಗಾದ್ರೆ ರೆಡ್ಮಿ 12C ಸ್ಮಾರ್ಟ್‌ಫೋನ್‌ ಭಾರಿ ರಿಯಾಯಿತಿಯ ನಂತರ ಪಡೆದುಕೊಂಡಿರುವ ಬೆಲೆ ಎಷ್ಟು? ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಅಮೆಜಾನ್‌ನಲ್ಲಿ ರೆಡ್ಮಿ ಕಂಪೆನಿಯ ಈ ಫೋನ್‌ ಮೇಲೆ ಬರೋಬ್ಬರಿ 50% ಡಿಸ್ಕೌಂಟ್‌!

ರೆಡ್ಮಿ 12C ಸ್ಮಾರ್ಟ್‌ಫೋನ್‌ ಮೇಲೆ ಬಿಗ್‌ ಡಿಸ್ಕೌಂಟ್‌
ರೆಡ್ಮಿ 12C ಸ್ಮಾರ್ಟ್‌ಫೋನ್‌ನ 4GB RAM ಹಾಗೂ 64GB ಸ್ಟೋರೇಜ್‌ ಆಯ್ಕೆಯು ಅಮೆಜಾನ್‌ನಲ್ಲಿ 50% ಡಿಸ್ಕೌಂಟ್‌ ಪಡೆದುಕೊಂಡಿದೆ. ಆದರಿಂದ ಇದನ್ನು ನೀವು 13,999ರೂ ಬದಲಿಗೆ ಕೇವಲ 6,999ರೂ ಗಳಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ನೋ ಕಾಸ್ಟ್‌ ಇಎಂಐ ಆಫರ್‌ ಕೂಡ ದೊರೆಯುತ್ತಿದೆ. ಕೈ ಗೆಟಕುವ ಬೆಲೆಯಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್‌ ಖರೀದಿಸಬೇಕೆಂದು ಕೊಂಡವರಿಗೆ ಅಮೆಜಾನ್‌ನಲ್ಲಿ ಇದು ಬೆಸ್ಟ್‌ ಆಫರ್‌ ಎನಿಸಿಕೊಂಡಿದೆ.

ರೆಡ್ಮಿ 12C ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ರಚನೆ ಹೇಗಿದೆ?
ರೆಡ್ಮಿ 12C ಸ್ಮಾರ್ಟ್‌ಫೋನ್ 6.71 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು 1600×720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಹೊಂದಿದೆ.

ಅಮೆಜಾನ್‌ನಲ್ಲಿ ರೆಡ್ಮಿ ಕಂಪೆನಿಯ ಈ ಫೋನ್‌ ಮೇಲೆ ಬರೋಬ್ಬರಿ 50% ಡಿಸ್ಕೌಂಟ್‌!

ರೆಡ್ಮಿ 12C ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?
ರೆಡ್ಮಿ 12C ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದರ ಬೇಸ್‌ ಮಾಡೆಲ್‌ 4GB RAM ಹಾಗೂ 64GB ಇಂಟರ್‌ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯವಿದೆ.

ರೆಡ್ಮಿ 12C ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ರೆಡ್ಮಿ 12C ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್ ಮತ್ತು ನೈಟ್ ಮೋಡ್‌ ಅನ್ನು ಕಾಣಬಹುದು. ಇದಲ್ಲದೆ ಸ್ಮಾರ್ಟ್‌ಫೋನ್‌ 5ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಅಮೆಜಾನ್‌ನಲ್ಲಿ ರೆಡ್ಮಿ ಕಂಪೆನಿಯ ಈ ಫೋನ್‌ ಮೇಲೆ ಬರೋಬ್ಬರಿ 50% ಡಿಸ್ಕೌಂಟ್‌!

ರೆಡ್ಮಿ 12C ಸ್ಮಾರ್ಟ್‌ಫೋನ್‌ ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?
ರೆಡ್ಮಿ 12C ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 10W ಚಾರ್ಜಿಂಗ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, ಬ್ಲೂಟೂತ್‌, ಹೆಡ್‌ಫೋನ್‌ ಜ್ಯಾಕ್‌, ಮೈಕ್ರೋ ಯುಎಸ್‌ಬಿ ಪೋರ್ಟ್ ಆಯ್ಕೆಯನ್ನು ಬೆಂಬಲಿಸಲಿದೆ.

ಇನ್ನು ಇದೇ ವೇಳೆ ಅಮೆಜಾನ್‌ ಸೇಲ್‌ನಲ್ಲಿ ರೆಡ್ಮಿ ಸಂಸ್ಥೆಯ ರೆಡ್ಮಿ A2 ಸ್ಮಾರ್ಟ್‌ಫೋನ್‌ ಕೂಡ ವಿಶೇಷ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ ಮೇಲೆ ಅಮೆಜಾನ್‌ 47% ಡಿಸ್ಕೌಂಟ್‌ ಘೋಷಣೆ ಮಾಡಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 5,299ರೂ ಬೆಲೆಗೆ ದೊರೆಯುತ್ತಿದೆ. ಇದು 6.52 ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

Best Mobiles in India

English summary
Redmi 12C Smartphone Gets 50% Discount in amazon: Discount Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+